“ನಾನು ವಿಧಾನಪರಿಷತ್‍ ಟಿಕೆಟ್ ಆಕಾಂಕ್ಷಿ ಆಗಿರಲಿಲ್ಲ” : ಇಬ್ರಾಹಿಂ

ಬೆಂಗಳೂರು, ಮೇ 24- ವಿಧಾನಸಭೆಯಿಂದ ವಿಧಾನಪರಿಷತ್‍ಗೆ ನಡೆಯುವ ಚುನಾವಣೆಯಲ್ಲಿ ನಾನು ಪಕ್ಷದ ಟಿಕೆಟ್ ಆಕಾಂಕ್ಷಿ ಆಗಿರಲಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಅಧ್ಯಕ್ಷರಾಗಿ ಉದಾತ್ತ ಮನೋಭಾವ ತೋರಿಸಬೇಕೇ ಹೊರತು ಆಕಾಂಕ್ಷಿಯಾಗಬಾರದು. ಬಡಿಸೋ ಜಾಗದಲ್ಲಿ ಇರುವಾಗ ನಾವೇ ಊಟಕ್ಕೆ ಕೂತರೆ ಹೇಗೆ ಎಂದು ಪ್ರಶ್ನಿಸಿದರು.

ಆದಷ್ಟು ಬೇಗ ಬಿಜೆಪಿ ಸರ್ಕಾರ ತೊಲಗಬೇಕು. ನಾಡಿನ ಜನರಿಗೆ ಸರ್ಕಾರದಿಂದ ಯಾವುದೇ ರೀತಿಯ ಅನುಕೂಲಗಳು ಆಗುತ್ತಿಲ್ಲ. ಅಭಿವೃದ್ಧಿಯೂ ಆಗುತ್ತಿಲ್ಲ ಎಂದು ಆರೋಪಿಸಿದರು.