Saturday, July 27, 2024
Homeರಾಜ್ಯವಿಧಾನಪರಿಷತ್‌ ಚುನಾವಣೆ : ನಾಮಪತ್ರ ಸಲ್ಲಿಸುವ ಅವಧಿ ಮುಕ್ತಾಯ

ವಿಧಾನಪರಿಷತ್‌ ಚುನಾವಣೆ : ನಾಮಪತ್ರ ಸಲ್ಲಿಸುವ ಅವಧಿ ಮುಕ್ತಾಯ

ಬೆಂಗಳೂರು,ಮೇ 16- ರಾಜ್ಯ ವಿಧಾನಪರಿಷತ್‌ನ ಆರು ಸದಸ್ಯ ಸ್ಥಾನಗಳಿಗೆ ನಡೆಯುವ ದ್ವೈವಾರ್ಷಿಕ ಚುನಾವಣೆಗೆ ನಾಮಪತ್ರ ಸಲ್ಲಿಸುವ ಅವಧಿ ಇಂದು ಮುಕ್ತಾಯವಾಗಿದೆ. ಇದುವರೆಗೆ ಬಿಜೆಪಿ 4, ಕಾಂಗ್ರೆಸ್‌‍ 5, ಜೆಡಿಎಸ್‌‍ 1, ಪಕ್ಷೇತರ 40 ಸೇರಿದಂತೆ ಒಟ್ಟು 50 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ.

47 ಪುರುಷ ಹಾಗೂ ಇಬ್ಬರು ಮಹಿಳೆಯರು ಸೇರಿದಂತೆ ಒಟ್ಟು 68 ನಾಮಪತ್ರಗಳನ್ನು ಸಲ್ಲಿಸಲಾಗಿದೆ. ಕೊನೆಯ ದಿನವಾದ ಇಂದೂ ಕೂಡ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಸೇರಿದಂತೆ ಹಲವರು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ.

ನಿನ್ನೆ 21 ಅಭ್ಯರ್ಥಿಗಳು ವಿವಿಧ ಕ್ಷೇತ್ರಗಳಲ್ಲಿ ಉಮೇದುವಾರಿಕೆ ಸಲ್ಲಿಸಿದ್ದರು. 3 ಪದವೀಧರ ಹಾಗೂ 3 ಶಿಕ್ಷಕರ ಕ್ಷೇತ್ರಗಳಿಗೆ ಜೂನ್‌ 3 ರಂದು ಮತದಾನ ನಡೆಯಲಿದೆ. ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ನಾಳೆ ಸಂಜೆ ಆಯಾ ಕ್ಷೇತ್ರಗಳಲ್ಲಿ ತಿರಸ್ಕೃತಗೊಂಡ ಹಾಗೂ ಕ್ರಮಬದ್ಧವಾದ ನಾಮಪತ್ರಗಳ ಪ್ರಕಟಣೆ ಮಾಡಲಾಗುತ್ತದೆ.

ನಾಮಪತ್ರಗಳನ್ನು ವಾಪಸ್‌‍ ಪಡೆಯಲು ಮೇ 20 ರವರೆಗೂ ಕಾಲಾವಕಾಶವಿದೆ. ಅಂದು ಸಂಜೆ ಅಂತಿಮವಾಗಿ ಕಣದಲ್ಲಿ ಉಳಿಯುವ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುತ್ತದೆ. ಲೋಕಸಭೆ ಚುನಾವಣೆಯಂತೆ ಮೇಲನೆ ಚುನಾವಣೆಯಲ್ಲೂ ಬಿಜೆಪಿ ಮತ್ತು ಜೆಡಿಎಸ್‌‍ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡು ಕಣಕ್ಕಿಳಿದಿವೆ. ಆಡಳಿತರೂಢ ಕಾಂಗ್ರೆಸ್‌‍ ಎಲ್ಲಾ 6 ಕ್ಷೇತ್ರಗಳಲ್ಲೂ ಸ್ಪರ್ಧಿಸಿ ಎನ್‌ಡಿಎ ಮೈತ್ರಿಕೂಟದ ವಿರುದ್ಧ ಹೋರಾಟ ನಡೆಸಲಿದೆ.

RELATED ARTICLES

Latest News