ವಿಧಾನಪರಿಷತ್‌ ಚುನಾವಣೆ : 6 ಸ್ಥಾನಗಳಿಗೆ ನಾಳೆಯಿಂದ ನಾಮಪತ್ರ ಸಲ್ಲಿಕೆ ಆರಂಭ

ಬೆಂಗಳೂರು,ಮೇ8- ಪ್ರಸಕ್ತ ಲೋಕಸಭೆ ಚುನಾವಣೆಯ ಎರಡು ಹಂತದ ಮತದಾನ ರಾಜ್ಯದಲ್ಲಿ ಪೂರ್ಣಗೊಂಡ ಬೆನ್ನಲ್ಲೇ ವಿಧಾನಪರಿಷತ್‌ನ ಆರು ಸದಸ್ಯ ಸ್ಥಾನಗಳಿಗೆ ಮತ್ತೊಂದು ಚುನಾವಣೆ ಎದುರಾಗಿದೆ. ವಿಧಾನಪರಿಷತ್‌ನ ಆರು ಸದಸ್ಯ ಸ್ಥಾನಗಳಿಗೆ ನಾಳೆ ಅಧಿಸೂಚನೆ ಹೊರಬೀಳಲಿದ್ದು, ನಾಳೆಯಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಆಯನೂರು ಮಂಜುನಾಥ್‌ ಮತ್ತು ಮರಿತಿಬ್ಬೇಗೌಡ ಅವರ ರಾಜೀನಾಮೆಯಿಂದ ತೆರವಾಗಿರುವ ಎರಡು ಸ್ಥಾನ ಹಾಗೂ ಡಾ.ಚಂದ್ರಶೇಖರ ಬಿ.ಪಾಟೀಲ, ಎ.ದೇವೇಗೌಡ, ಡಾ.ವೈ.ಎ.ನಾರಾಯಣಸ್ವಾಮಿ, ಎಸ್‌.ಎಲ್‌.ಬೋಜೇಗೌಡ ಅವರು ಜೂ.21ರಂದು ನಿವೃತ್ತಿ ಹೊಂದುವುದರಿಂದ ತೆರವಾಗುವ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಕರ್ನಾಟಕ ಈಶಾನ್ಯ … Continue reading ವಿಧಾನಪರಿಷತ್‌ ಚುನಾವಣೆ : 6 ಸ್ಥಾನಗಳಿಗೆ ನಾಳೆಯಿಂದ ನಾಮಪತ್ರ ಸಲ್ಲಿಕೆ ಆರಂಭ