ವಿಧಾನಸೌಧದ ಮುಂಭಾಗ ನೇತಾಜಿ ಪ್ರತಿಮೆ ಮರುಸ್ಥಾಪನೆ : ಸಿಎಂ ಬೊಮ್ಮಾಯಿ

Social Share

ಬೆಂಗಳೂರು,ಜ.23- ಮೆಟ್ರೋ ಕಾರಣಕ್ಕಾಗಿ ಸ್ಥಳಾಂತರವಾಗಿದ್ದ ಸುಭಾಷ್‍ಚಂದ್ರ ಬೋಸ್ ಪ್ರತಿಮೆಯನ್ನು ಪುನಃ ವಿಧಾನಸೌಧದ ಮುಂಭಾಗ ಮರುಸ್ಥಾಪನೆ ಮಾಡಲು ಕೂಡಲೇ ಸ್ಥಳಾಂತರಕ್ಕೆ ಆದೇಶ ಹೊರಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನಾಚಾರಣೆಯ ಅಂಗವಾಗಿ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದಂದು ದೇಶ ನಿರ್ಮಿಸಲು ಸಂಕಲ್ಪಿತರಾಗಿ ನಮ್ಮನ್ನು ನಾವು ತೊಡಗಿಸಿಕೊಳ್ಳಬೇಕೆಂದು ಪ್ರತಿಜ್ಞೆ ಮಾಡಿದ್ದೇವೆ. ಅವರ ಹೆಸರಿನಲ್ಲಿಯೇ ದೇಶ ಪ್ರೇಮವಿದೆ ಎಂದು ಹೇಳಿದರು.

ನೇತಾಜಿ ಅವರು ದೇಶಪ್ರೇಮ, ದೇಶ ಉಳಿಸುವುದು ಹಾಗೂ ದೇಶ ಕಟ್ಟುವ ವಿಚಾರದಲ್ಲಿ ಯಾವುದೇ ದುರ್ಬಲ ವಿಚಾರವಿರಬಾರದು ಎಂದಿದ್ದರು. ಅವರಿಗೆ ದಿಟ್ಟ, ಸ್ಪಷ್ಟ, ನಿಲುವಿತ್ತು. ಬ್ರಿಟಿಷರ ವಿರುದ್ಧ ನೇರವಾಗಿ ಯುದ್ಧ ಮಾಡಬೇಕೆಂಬ ವಿಚಾರ, ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿದ್ದ ಕಾಂಗ್ರೆಸ್‍ನ ಹಲವು ದಿಗ್ಗಜರ ವಿರುದ್ಧ ಅವರು ತಮ್ಮ ವಿಚಾರಧಾರೆಯನ್ನು ಮಂಡಿಸಿದರು ಎಂದು ತಿಳಿಸಿದರು.

ಕಾಂಗ್ರೆಸ್ ಭ್ರಷ್ಟಾಚಾರದ ಗಂಗೋತ್ರಿ : ಸಿಎಂ ಬೊಮ್ಮಾಯಿ ವಾಗ್ದಾಳಿ

ಕಾಂಗ್ರೆಸ್‍ಗಿಂತ ವಿಭಿನ್ನ ವಿಚಾರಗಳಿದ್ದರಿಂದ ಅವರು ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿಯೂ ಕೂಡ ಅಧಿಕೃತ ಅಭ್ಯರ್ಥಿ ವಿರುದ್ಧ ನಿಂತು ಜಯಶಾಲಿಯಾದರು ಎಂದು ಹೇಳಿದರು.

ಅಪ್ಪಟ ದೇಶಪ್ರೇಮಿಯಾಗಿದ್ದ ಅವರು ಅತ್ಯಂತ ಯಶಸ್ವಿಯಾಗಿ ಸಾಧಿಸಿದ್ದ ಐಸಿಎಸ್‍ನ್ನು ಧಿಕ್ಕರಿಸಿ ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕಿದರು. ನೀವು ರಕ್ತವನ್ನು ಕೊಡಿ, ನಿಮಗೆ ಸ್ವಾತಂತ್ರ್ಯ ನೀಡುತ್ತೇನೆ ಎಂದು ಯುವಕರಿಗೆ ಕರೆ ನೀಡಿದ್ದರು. ತಮ್ಮದೇ ಆದ ಆಜಾದ್ ಫೌಜ್ ಸ್ಥಾಪಿಸಿ ಇಡೀ ದೇಶದಲ್ಲಿ ಹೋರಾಟದ ಕಿಚ್ಚು ಹಚ್ಚಿದ್ದರು. ಅವರ ವ್ಯಕ್ತಿತ್ವದಿಂದ ವಿದೇಶದಲ್ಲಿಯೂ ಭಾರತದ ಸ್ವಾತಂತ್ರ್ಯದ ಬಗ್ಗೆ ಬಹಳ ಸದಾಭಿಪ್ರಾಯ ಮೂಡಲು ಸಾಧ್ಯವಾಯಿತು ಎಂದರು.

ಕಾಂಗ್ರೆಸ್ ಹೈಕಮಾಂಡ್‌ಗೆ 1000 ಕೋಟಿ ರೂ.ಕಪ್ಪ ಕೊಟ್ಟ ಸಾಕ್ಷಿಯಿದೆ : ಬಿಜೆಪಿ ಹೊಸ ಬಾಂಬ್

ಸುಭಾಷ್ ಚಂದ್ರ ಬೋಸ್ ಅವರು ನಮಗೆ ಪ್ರೇರಣೆ. ಅಂದು ದೇಶಕ್ಕೆ ಸ್ವಾತಂತ್ರ್ಯ ಕೊಡಲು ಅವರು ಪ್ರೇರಣೆಯಾಗಿದ್ದರೆ, ಇಂದು ದೇಶ ಕಟ್ಟಲು ಪ್ರೇರಣೆಯಾಗಿದ್ದಾರೆ. ಅವರ ಸ್ಪಷ್ಟ, ಸಿದ್ಧಾಂತ ಹಾಗೂ ಆದರ್ಶಗಳನ್ನು ಮುಂದಿಟ್ಟುಕೊಂಡು ಸ್ವಾಭಿಮಾನಿ, ಸ್ವಾವಲಂಬಿ ದೇಶವನ್ನಾಗಿ ಮಾಡಲು ಸಾಧ್ಯವಿದೆ ಎಂದು ನಂಬಿದ್ದೇವೆ. ಆ ದಾರಿಯಲ್ಲಿ ನಾವೆಲ್ಲರೂ ಸೇರಿ ನಡೆಯಬೇಕಿದೆ ಎಂದು ಸಲಹೆ ಮಾಡಿದರು.

ಸುಭಾಷ್ ಚಂದ್ರ ಬೋಸ್ ಅವರ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ರಾಜ್ಯದಲ್ಲಿ ಆಗುತ್ತಿದೆ. ಕಳೆದ ಬಾರಿ 75 ಎನ್‍ಐಸಿ ಪಡೆಗಳನ್ನು ಅವರ ಹೆಸರಿನಲ್ಲಿ ಹೆಚ್ಚು ಮಾಡಿದೆ. ಯುವಕರಿಗೆ ದೊಡ್ಡ ಪ್ರೇರಣೆ ನೀಡುವ ಕೆಲಸವಾಗುತ್ತಿದೆ ಎಂದು ಅವರು ಹೇಳಿದರು.

Vidhana Soudha, front, Subhash Chandra Bose, Statue, CM Bommai,

Articles You Might Like

Share This Article