ನ್ಯಾಯಾಂಗ ನಿಂದನೆಗಾಗಿ ವಿಜಯ್ ಮಲ್ಯಗೆ 4 ತಿಂಗಳ ಜೈಲು ಶಿಕ್ಷೆ

Social Share

ನವದೆಹಲಿ, ಜು.11- ಕಿಂಗ್ ಫಿಶರ್ ಏರ್‍ಲೈನ್‍ಗೆ 9 ಸಾವಿರ ಕೋಟಿ ರೂ.ಗೂ ಅಧಿಕ ಮೊತ್ತದ ಬ್ಯಾಂಕ್ ಸಾಲ ಮರುಪಾವತಿ ಮಾಡದೆ ದೇಶ ಭ್ರಷ್ಟರಾಗಿರುವ ಉದ್ಯಮಿ ವಿಜಯ್ ಮಲ್ಯ ಅವರಿಗೆ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನಾಲ್ಕು ತಿಂಗಳ ಶಿಕ್ಷೆ ವಿಧಿಸಿದೆ.

ನ್ಯಾಯಮೂರ್ತಿ ಯು.ಯು.ಲಲಿತ್ ನೇತೃತ್ವದ ಪೀಠವು ಮಲ್ಯಗೆ 2 ಸಾವಿರ ರೂ. ದಂಡ ವಿಧಿಸಿದೆ. ಈ ಸಂಬಂಧ ಕಳೆದ ಮಾರ್ಚ್ 10 ರಂದು ಸುಪ್ರೀಂಕೋರ್ಟ್ ತನ್ನ ತೀರ್ಪನ್ನು ಕಾಯ್ದಿರಿಸಿತ್ತಯ. ಮಲ್ಯ ವಿರುದ್ಧ ತೆಗೆದುಕೊಳ್ಳಬೇಕಾದ ಕ್ರಮಗಳು ಡೆಡ್‍ವಾಲ್ (ನಿಷ್ಟ್ರೀಯ ಗೋಡೆ)ಗೆ ಢಿಕ್ಕಿ ಹೊಡೆದು ನಿಂತಿರುವುದನ್ನು ನ್ಯಾಯಾಲಯವೂ ಗಮನಿಸಿದೆ.

ನ್ಯಾಯಾಲಯದ ಆದೇಶ ಉಲ್ಲಂಘಿಸಿ 2017ರಲ್ಲಿ ತನ್ನ ಮಕ್ಕಳ ಖಾತೆಗಳಿಗೆ 40 ಮಿಲಿಯನ್ ಡಾಲರ್ ಹಣ ವರ್ಗಾಯಿಸಿದ್ದರು. ತಮ್ಮ ವಿರುದ್ಧ ನ್ಯಾಯಾಂಗ ನಿಂಧನೆ ಪ್ರಕರಣವನ್ನು ಕೈ ಬಿಡುವಂತೆ ಮನವಿ ಮಾಡಿದ್ದರು. ಅದನ್ನು 2020ರಲ್ಲಿ ಕೋರ್ಟ್ ವಜಾಗೊಳಿಸಿತ್ತು. ಈ ಪ್ರಕರಣದಲ್ಲಿ ನ್ಯಾಯಾಲಯ ಮಲ್ಯಗೆ ಶಿಕ್ಷೆ ವಿಧಿಸಿದೆ.

ಮಲ್ಯ 2016ರ ಮಾರ್ಚ್‍ನಿಂದ ಇಂಗ್ಲೆಂಡ್‍ನಲ್ಲಿ ವಾಸಿಸುತ್ತಿದ್ದಾರೆ. 2017ರ ಏಪ್ರಿಲ್ 18ರಂದು ಮಲ್ಯ ಹಸ್ತಾಂತರಕ್ಕೆ ಸಂಬಂಧಿಸಿದಂತೆ ಸ್ಕಾಟ್ಲೆಂಡ್ ಯಾರ್ಡ್ ಪೊಲೀಸರು ವಾರೆಂಟ್ ಜಾರಿಗೊಳಿಸಿದ್ದರು. ಸದ್ಯಕ್ಕೆ ಆ ವಾರೆಂಟ್‍ಗೆ ಜಾಮೀನು ಪಡೆದು ಹೊರಗೆ ಇದ್ದಾರೆ.

Articles You Might Like

Share This Article