Friday, November 15, 2024
Homeರಾಜಕೀಯ | Politicsಶಾಸಕರಿಗೆ 50 ಕೋಟಿ ಆಫರ್ ನೀಡಿದವರು ಯಾರೆಂದು ಬಹಿರಂಗಪಡಿಸಿ : ಸಿಎಂಗೆ ವಿಜಯೇಂದ್ರ ಚಾಲೆಂಜ್

ಶಾಸಕರಿಗೆ 50 ಕೋಟಿ ಆಫರ್ ನೀಡಿದವರು ಯಾರೆಂದು ಬಹಿರಂಗಪಡಿಸಿ : ಸಿಎಂಗೆ ವಿಜಯೇಂದ್ರ ಚಾಲೆಂಜ್

Vijayendra challenges the CM to reveal who made 50 crores offer for MLAs

ಬೆಂಗಳೂರು,ನ.14- ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತು 50 ಕೋಟಿ ಆಮಿಷದ ಗಂಭೀರ ಆರೋಪ ಮಾಡಿರುವ ಹಿನ್ನಲೆಯಲ್ಲಿ ಸರ್ಕಾರ ಬೀಳಿಸಲು ಸಾವಿರಾರು ಕೋಟಿ ಬಂಡವಾಳ ಹೂಡಲು ತಯಾರಾಗಿರುವವರು ಯಾರು? ಎಂದು ಬಹಿರಂಗಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸವಾಲು ಹಾಕಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅವರು, ಕೂಡಲೇ ಇಡಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ನಡೆಸುವುದು ತುರ್ತು ಅಗತ್ಯವಿದೆ. ರಾಜ್ಯದ ಜನತೆಗೆ ಸತ್ಯ ತಿಳಿಯಬೇಕಿದೆ ಎಂದು ಹೇಳಿದ್ದಾರೆ.

ಬಹುಶಃ ನಿಮ ಶಾಸಕರ ಮೇಲೆ ನೀವು ವಿಶ್ವಾಸವನ್ನು ಕಳೆದುಕೊಂಡಂತೆ ಕಾಣುತ್ತಿದೆ ಅದಕ್ಕಾಗಿಯೇ 50 ಕೋಟಿಗೆ ಅವರು ಮಾರಾಟವಾಗುತ್ತಿದ್ದಾರೆ ಎಂಬ ಕಪೋಲಕಲ್ಪಿತ ಆರೋಪ ಮಾಡುತ್ತಿದ್ದೀರಿ. ಇದು ನೀವು ಪ್ರಜಾಪ್ರಭುತ್ವ ವ್ಯವಸ್ಥೆಗೆ ಹಾಗೂ ಶಾಸಕರನ್ನು ಮಾರಾಟದ ವಸ್ತುಗಳಂತೆ ವ್ಯಾಖ್ಯಾನಿಸಿ ಅವರಿಗೆ ಮಾಡುತ್ತಿರುವ ಅವಮಾನವಾಗಿದೆ ಎಂದು ಕಿಡಿಕಾರಿದ್ದಾರೆ.

ನಿಮ ಈ ಹೇಳಿಕೆ ಕಾಂಗ್ರೆಸ್‌‍ ಶಾಸಕರುಗಳನ್ನು ಅಂಕೆಯಲಿಟ್ಟುಕೊಳ್ಳಲು ಹಾಗೂ ನಿಮನ್ನು ಸುತ್ತುವರೆದಿರುವ ಭ್ರಷ್ಟಾಚಾರದ ಹಗರಣಗಳನ್ನು ಮುಚ್ಚಿಕೊಳ್ಳಲು ಹೆಣೆದಿರುವ ಹತಾಶೆಯ ಸುಳ್ಳಿನ ಕಂತೆ ಎನ್ನುವುದು ಕನಿಷ್ಠ ರಾಜಕೀಯ ಜ್ಞಾನ ಇರುವವರಿಗೂ ಅರಿವಾಗುತ್ತದೆ ಎಂದು ಲೇವಡಿ ಮಾಡಿದ್ದಾರೆ.

ಸುಳ್ಳು, ಭಂಡತನ, ಕಪೋಲ ಕಲ್ಪಿತ ಸುದ್ದಿಗಳನ್ನು ಹರಿಬಿಡುವುದು ನಿಮ ಹಾಗೂ ನಿಮ ಪಕ್ಷದ ನಿತ್ಯ ಮಂತ್ರವಾಗಿದೆ. ನೀವು ನಡೆಸಿರುವ ಸರಣೀ ಹಗರಣಗಳ ಹಿನ್ನೆಲೆಯ ಉರುಳು ಬಿಗಿಯಾಗುತ್ತಿರುವಷ್ಟೂ ನಿದ್ದೆಗೆಡುತ್ತಿರುವ ನಿಮ ಮನಸ್ಸು ಅಸ್ಥಿರಗೊಂಡಿದೆ ಈ ಹಿನ್ನಲೆಯಲ್ಲಿ ಪ್ರಚಲಿತ ಬೆಳವಣಿಗೆಯನ್ನು ವಿಚಲಿತಗೊಳಿಸುವುದು ಹೇಗೆ ಎಂಬುದರತ್ತಲೇ ನೀವು ನಿಗಾ ಇಟ್ಟಿರುವಂತೆ ಕಾಣುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.

ಮುಖ್ಯಮಂತ್ರಿಯಂತಹ ಜವಾಬ್ದಾರಿ ಸ್ಥಾನದಲ್ಲಿ ಕುಳಿತಿರುವ ನೀವು ಅದರ ಘನತೆಯನ್ನು ಕುಗ್ಗಿಸುವ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದೀರಿ, ನಿಮದೇ ಸರ್ಕಾರವಿದೆ, ನಿಮದೇ ತನಿಖಾ ಸಂಸ್ಥೆಗಳಿವೆ, 50 ಕೋಟಿ ಆಮಿಷದ ಮೂಲ ಯಾವುದು ಎನ್ನುವುದನ್ನು ಜನರ ಮುಂದೆ ಬಹಿರಂಗಪಡಿಸುವುದು ನಿಮ ನೈತಿಕ ಜವಾಬ್ದಾರಿಯಾಗಿರುತ್ತದೆ. ಇಲ್ಲದಿದ್ದರೆ ನಿಮ ಹೇಳಿಕೆ ಪುಡಾರಿಗಳು ನೀಡುವ ಬಾಲಿಶ ರಾಜಕೀಯ ಹೇಳಿಕೆಯಾಗುತ್ತದೆಯಷ್ಟೆ ಎಂದು ಹೇಳಿದ್ದಾರೆ.

ಒಂದುಕಡೆ ನಿಮ ಪುತ್ರ ನ್ಯಾಯಾಂಗ ವ್ಯವಸ್ಥೆಯನ್ನೇ ಅಪಮಾನಿಸುವ ಆರೋಪಿಸಿದರೆ ಮತ್ತೊಂದೆಡೆ ನೀವು ಅಧಿಕಾರ ಕಳೆದುಕೊಳ್ಳುವ ಭಯದಲ್ಲಿ ಹತಾಶೆಯಿಂದ ವರ್ತಿಸುತ್ತಿದ್ದೀರಿ. ನಿಮನ್ನು ಅಧಿಕಾರದಿಂದ ಕೆಳಗಿಳಿಸಿದರೆ ಜನ ಸುಮನೆ ಬಿಡುವುದಿಲ್ಲ ಎಂದು ಅಬ್ಬರಿಸುತ್ತಿದ್ದೀರಿ. ಆದರೆ ವಾಸ್ತವ ಸಂಗತಿ ಏನೆಂದರೆ, ಕರ್ನಾಟಕದ ಜನತೆ ನಿಮಂಥ ಭ್ರಷ್ಟ ಮುಖ್ಯಮಂತ್ರಿ ಇನ್ನೂ ಅಧಿಕಾರದಿಂದ ಕೆಳಗಿಳಿಯದೇ ಭಂಡತನ ಪ್ರದರ್ಶಿಸುತ್ತಿದ್ದಾರಲ್ಲ ಎಂದು ರಸ್ತೆಯಲ್ಲಿ ನಿಂತು ಮಾತನಾಡಿಕೊಳ್ಳುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ನಿಮ ಗುಪ್ತಚರ ಇಲಾಖೆ ಈ ವಿಷಯವನ್ನು ನಿಮಗೆ ಮುಟ್ಟಿಸಿರಲೇಬೇಕು. ಆದ್ದರಿಂದಲೇ ನೀವು ಇಷ್ಟೊಂದು ವಿಚಲಿತರಾದಂತೆ ಕಪೋಲ ಕಲ್ಪಿತ ಕಥೆಗಳನ್ನು ಸೃಷ್ಟಿಸಿಕೊಂಡು ಬಡ ಬಡಿಸುತ್ತಿದ್ದೀರಿ ಎಂದು ವಿಜಯೇಂದ್ರ ವ್ಯಂಗ್ಯವಾಡಿದ್ದಾರೆ.

RELATED ARTICLES

Latest News