Thursday, February 29, 2024
Homeರಾಷ್ಟ್ರೀಯಛತ್ತೀಸ್‍ಗಢದಲ್ಲಿ ನಕ್ಸಲೀಯರಿಂದ ಗ್ರಾಮಸ್ಥನ ಹತ್ಯೆ

ಛತ್ತೀಸ್‍ಗಢದಲ್ಲಿ ನಕ್ಸಲೀಯರಿಂದ ಗ್ರಾಮಸ್ಥನ ಹತ್ಯೆ

ಬಿಜಾಪುರ, ಫೆ.7: ಛತ್ತೀಸ್‍ಗಢದ ಬಿಜಾಪುರ ಜಿಲ್ಲೆಯ ಗ್ರಾಮವೊಂದರಲ್ಲಿ ಕಳೆದ ರಾತ್ರಿ ವ್ಯಕ್ತಿಯಬ್ಬರನ್ನು ನಕ್ಸಲೀಯರು ಹತ್ಯೆ ಮಾಡಿದ್ದಾರೆ. ಬಸಗುಡ ಪೊಲೀಸ್ ಠಾಣಾ ವ್ಯಾಪ್ತಿಯ ತಿಮಾಪುರ ಗ್ರಾಮದ ಹೊರವಲಯದ ರಸ್ತೆಯಲ್ಲಿ ಮಿಚ್ಚಾ ಹದ್ಮಾ ಶವ ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಅಪರಿಚಿತ ನಕ್ಸಲೀಯರ ಗುಂಪೊಂದು ಕೊಡಲಿಯಿಂದ ಗ್ರಾಮಸ್ಥನ ಮೇಲೆ ದಾಳಿ ಮಾಡಿದ್ದು ಅವರು ಸ್ಥಳದಲ್ಲೇ ಸಾವನ್ನಪ್ಪಿದರು ಎಂದು ಅವರು ಹೇಳಿದರು.

ಪೊಲೀಸರ ತಂಡ ಸ್ಥಳಕ್ಕೆ ತೆರಳಿ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ ಹತ್ಯೆಯ ಹಿಂದಿನ ನಿಖರವಾದ ಕಾರಣ ಇನ್ನೂ ಪತ್ತೆಯಾಗಿಲ್ಲ, ದಾಳಿಕೋರರನ್ನು ಪತ್ತೆಹಚ್ಚಲು ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಹೆಲಿಕಾಪ್ಟರ್ ಅಪಘಾತದಲ್ಲಿ ಚಿಲಿಯ ಮಾಜಿ ಅಧ್ಯಕ್ಷ ಸೆಬಾಸ್ಟಿಯನ್ ಪಿನೆರಾ ನಿಧನ

RELATED ARTICLES

Latest News