Thursday, December 12, 2024
Homeಜಿಲ್ಲಾ ಸುದ್ದಿಗಳು | District Newsಮೂಲಸೌಕರ್ಯ ಸಿಗದ ಹಿನ್ನೆಲೆಯಲ್ಲಿ ಲೋಕಸಭೆ ಚುನಾವಣೆ ಬಹಿಷ್ಕಾರಕ್ಕೆ ಗ್ರಾಮಸ್ಥರ ನಿರ್ಧಾರ

ಮೂಲಸೌಕರ್ಯ ಸಿಗದ ಹಿನ್ನೆಲೆಯಲ್ಲಿ ಲೋಕಸಭೆ ಚುನಾವಣೆ ಬಹಿಷ್ಕಾರಕ್ಕೆ ಗ್ರಾಮಸ್ಥರ ನಿರ್ಧಾರ

ಹಾಸನ, ಏ.4- ಜಿಲ್ಲೆಯ ಸಕಲೇಶಪುರ ತಾಲೂಕಿನ ನೆಲಗಹಳ್ಳಿ ಗ್ರಾಮಕ್ಕೆ ಮೂಲಭೂತ ಸೌಕರ್ಯ ಕಲ್ಪಿಸದ ಹಿನ್ನೆಲೆಯಲ್ಲಿ ಚುನಾವಣಾ ಬಹಿಷ್ಕಾರದಂತಹ ಪ್ರಕರಣಗಳು ಹೆಚ್ಚುತ್ತಿದೆ. ಗ್ರಾಮಕ್ಕೆ ಸರಿಯಾದ ರಸ್ತೆ, ಬೀದಿ ದೀಪ, ಒಳಚರಂಡಿ ವ್ಯವಸ್ಥೆ ಕಲ್ಪಿಸದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಚುನಾವಣೆ ಬಹಿಷ್ಕರಿಸಿದ್ದಾರೆ. ಸರಿಯಾದ ರಸ್ತೆ ಸಂಪರ್ಕ ಇಲ್ಲದ ಕಾರಣ ಗ್ರಾಮಕ್ಕೆ ಸಾರಿಗೆ ವ್ಯವಸ್ಥೆಯು ಇಲ್ಲದೇ ಪರದಾಡುವ ಸ್ಥಿತಿ ಉಂಟಾಗಿದೆ.

ಬಸ್ ಗಳಿಲ್ಲದೆ ಪ್ರತಿನಿತ್ಯ ವಿದ್ಯಾರ್ಥಿಗಳು ಗ್ರಾಮಸ್ಥರು ತೊಂದರೆ ಅನುಭವಿಸುತ್ತಿದ್ದು, ಅನೇಕ ಬಾರಿ ಅಧಿಕಾರಿಗಳು ಜನಪ್ರತಿನಿಧಿಗಳಿಗೆ ಈ ಸಂಬಂಧ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ದೂರಿದರು. ಈ ಹಿನ್ನೆಲೆಯಲ್ಲಿ ಹಲವೂ ವರ್ಷಗಳಿಂದ ಮೂಲಭೂತ ಸೌಕರ್ಯ ಕಲ್ಪಿಸದ ಹಿನ್ನೆಲೆಯಲ್ಲಿ ಚುನಾವಣಾ ಬಹಿಷ್ಕರಿಸಲು ನಿರ್ಧರಿಸಿದ್ದು ಗ್ರಾಮದಲ್ಲಿ ಬ್ಯಾನರ್ ಹಾಕುವ ಮೂಲಕ ಜನರಲ್ಲಿ ಈ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ.

ಮತ್ತೊಂದೆಡೆ ಜಿಲ್ಲೆಯ ಬೇಲೂರು ತಾಲೂಕಿನ ಚೌಡೇನಹಳ್ಳಿ, ಜೋಗಿ ಕೊಪ್ಪಲು ಗ್ರಾಮಸ್ಥರು ಸಹ ಈ ಬಾರಿಯ ಲೋಕಸಭೆ ಚುನಾವಣೆ ಬಹಿಷ್ಕರಿಸಿದ್ದು ಗ್ರಾಮಕ್ಕೆ ಮೂಲಸೌಕರ್ಯವಾದ ರಸ್ತೆ ಚರಂಡಿ ಕುಡಿಯುವ ನೀರು ಸೇರಿದಂತೆ ಅನೇಕ ಸಮಸ್ಯೆ ಎದುರಿಸಲಾಗುತ್ತದೆ.

ಹಲವಾರು ಬಾರಿ ಜನಪ್ರತಿನಿಧಿಗಳಿಗೆ ಹಾಗೂ ಗ್ರಾಮ ಪಂಚಾಯತಿ ತಾಲೂಕು ಪಂಚಾಯಿತಿ ಆಡಳಿತಕ್ಕೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಎರಡು ಗ್ರಾಮಗಳಿಲ್ಲಿ ನೂರಕ್ಕು ಹೆಚ್ಚು ಮನೆಗಳಿದ್ದು, ಲೋಕಸಭಾ ಚುನಾವಣೆ ಮತ ಕೇಳಲು ಯಾವುದೇ ಪಕ್ಷದ ಅಭ್ಯರ್ಥಿಗಳು ಗ್ರಾಮದೊಳಗೆ ಬಾರದಂತೆ ಗ್ರಾಮಸ್ಥರು ಆಗ್ರಹಿಸಿದ್ದು, ಈ ಬಾರಿ ಲೋಕಸಭೆ ಚುನಾವಣೆ ಬಹಿಷ್ಕಾರ ಮಾಡುವುದಾಗಿ ಗ್ರಾಮಸ್ಥರೆಲ್ಲ ಸಭೆ ಸೇರಿ ತೀರ್ಮಾನ ಕೈಗೊಂಡು ಘೋಷಣೆಯನ್ನು ಮಾಡಿದ್ದಾರೆ.

RELATED ARTICLES

Latest News