ನಾಳೆ ವಿಷ್ಣು ಸ್ಮಾರಕ ಲೋಕಾರ್ಪಣೆ

Social Share

ಮೈಸೂರು, ಜ.28- ತಾಲೂಕಿನ ಎಚ್.ಡಿ.ಕೋಟೆ ರಸ್ತೆಯ ಮಾರ್ಗದಲ್ಲಿ ಬರುವ ಹಾಲಾಳು ಗ್ರಾಮದ ಐದು ಎಕರೆ ಪ್ರದೇಶದಲ್ಲಿ 11 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಡಾ. ವಿಷ್ಣುವರ್ಧನ್ ಸ್ಮಾರಕ ನಾಳೆ ಲೋಕಾರ್ಪಣೆಗೊಳ್ಳುವ ಹಿನ್ನೆಲೆಯಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಹೇಳಿದರು.

ಸ್ಮಾರಕ ಸ್ಧಳಕ್ಕೆ ಭೇಟಿ ನೀಡಿ ಅಗತ್ಯ ಸಿದ್ದತೆಗಳ ಬಗ್ಗೆ ಪರಿಶೀಲನೆ ನಡೆಸಿದ ಅವರು, ಕಾರ್ಯಕ್ರಮದ ಸಿದ್ದತೆಯನ್ನು ವ್ಯವಸ್ಥಿತವಾಗಿ ಮಾಡಲು ಕ್ರಮ ಕೈಗೊಳ್ಳುವಂತೆ ತಿಳಿಸಿದರು.

7 ಇಸ್ರೇಲಿಗರನ್ನು ಗುಂಡಿಕ್ಕಿ ಕೊಂದ ಪ್ಯಾಲೆಸ್ತಾನಿ ಬಂದೂಕುಧಾರಿ

ಕಾರ್ಯಕ್ರಮಕ್ಕೆ ಬರುವ ವಾಹನಗಳ ಪಾರ್ಕಿಂಗ್ ವ್ಯವಸ್ಧೆ ಮಾಡುವಂತೆ ಹಾಗೂ ಸೂಕ್ತ ಸ್ಥಳದಲ್ಲಿ ಊಟದ ವ್ಯವಸ್ಧೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಹೇಳಿದರು.

ಈ ಸಂದರ್ಭದಲ್ಲಿ ಅಪರ ಪೊಲೀಸ್ ವರಿಷ್ಠಾಧಿಕಾರಿ ನಂದಿನಿ, ಡಾ ವಿಷ್ಣು ವರ್ಧನ್ ಸ್ಮಾರಕ ಪ್ರತಿಷ್ಠಾನದ ಕಾರ್ಯದರ್ಶಿ ವಿಜಯಾನಂದ್ ಹಾಗೂ ಅಧಿಕಾರಿಗಳು ಉಪಸ್ಧಿತರಿದ್ದರು.

Vishnuvardhan memorial all, inauguration, tomorrow,

Articles You Might Like

Share This Article