ಬಿಗ್ ಬ್ರೇಕಿಂಗ್ : ಪೇಜಾವರ ಶ್ರೀ ಇನ್ನಿಲ್ಲ..!

Spread the love

ಬೆಂಗಳೂರು, ಡಿ.29- ತೀವ್ರ ಅನಾರೋಗ್ಯದ ಬಳಲುತ್ತಿದ್ದ ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ್ವ ತೀರ್ಥ ಸ್ವಾಮೀಜಿಯವರ ಬೃಂದಾವನಸ್ಥರಾದರು. ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಶ್ರೀಗಳು ಚಿಕಿತ್ಸೆ ಫಲಕಾರಿಯಾಗದೆ ಬೃಂದಾವನಸ್ಥರಾಗಿದ್ದಾರೆ.

ಶ್ರೀಗಳಿಗೆ 88 ವರ್ಷ ವಯಸ್ಸಾಗಿತ್ತು. ಉಡುಪಿಯ ಶ್ರೀ ಕೃಷ್ಣಮಠದಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿದ್ದರು. ರಾಮಮಂದಿರ ಆಂದೋಲನದಲ್ಲೂ ಪ್ರಮುಖ ಪಾತ್ರ ವಹಿಸಿದ್ದರು. ಬೆಂಗಳೂರಿನಲ್ಲಿ ಶ್ರೀ ಕೃಷ್ಣ ಸೇವಾಶ್ರಮ ಆಸ್ಪತ್ರೆ ಸ್ಥಾಪಿಸಿ ವೈದ್ಯಕೀಯ ಸೇವೆಯನ್ನು ನೀಡುತ್ತಾ ಬಂದಿದ್ದಾರೆ.

ದಕ್ಷಿಣ ಭಾರತದ ಸ್ವಾಮೀಜಿಯೊಬ್ಬರು ಇಡೀ ದೇಶದಲ್ಲೇ ಚಿರಪರಿಚಿತರಾಗಿದ್ದರು. ರಾಜ್ಯ ಮಾತ್ರವಲ್ಲದೆ, ರಾಷ್ಟ್ರಮಟ್ಟದಲ್ಲೂ ಶ್ರೀಗಳ ಕೀರ್ತಿ ವಿಸ್ತರಿಸಿತ್ತು. ಉಡುಪಿಯ ಸುಬ್ರಮಣ್ಯದ ಸಮೀಪದ ಹಳ್ಳಿ. ಅಚಾರ್ಯ ಮಧ್ವರು ನಡೆದಾಡಿದ ಪವಿತ್ರ ಸ್ಥಳ. ಹೆಸರು ರಾಮಕುಂಜ. ಬಹಳ ಜನಕ್ಕೆ ಹೆಸರು ಕೇಳಿಯೇ ಗೊತ್ತಿಲ್ಲ. ಅಂಥ ಆಜ್ಞಾತವಾದೊಂದು ಕುಗ್ರಾಮ. ಇಂಥ ಹಳ್ಳಿಯಲ್ಲಿ 1931 ಏಪ್ರಿಲ್ 27ರಂದು ಪೇಜಾವರ ಮಠಾಧೀಶರಾದ ಶ್ರೀ ವಿಶ್ವೇಶ ತೀರ್ಥ ಶ್ರೀ ಪಾದರು ಜನಿಸಿದ್ದರು.

8 ದಿನಗಳ ಹಿಂದಷ್ಟೇ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಪೇಜಾವರ ಶ್ರೀಗಳು ಡಿ.20ರಂದು ಮುಂಜಾನೆ 5ಕ್ಕೆ ಮಣಿಪಾಲ ಆಸ್ಪತ್ರೆಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ದಾಖಲಾಗಿದ್ದರು. ಅಂದಿನಿಂದ ಪ್ರಜ್ಞೆ ಮರಳಿ ಬಂದಿರಲಿಲ್ಲ. ನ್ಯೂಮೋನಿಯಾ ನಿಯಂತ್ರಣಕ್ಕೆ ಬಂದರೂ, ದಿನದಿಂದ ದಿನಕ್ಕೆ ಅವರ ಆರೋಗ್ಯ ಸ್ಥಿತಿ ಹದಗೆಟ್ಟು, ಅವರನ್ನು ಪ್ರಜ್ಞೆ ಮರಳಿಸುವ ಪ್ರಯತ್ನಗಳೆಲ್ಲವೂ ವಿಫಲಗೊಂಡಿವೆ. ಆರೋಗ್ಯ ತೀವ್ರ ಕುಸಿದಿದ್ದು, ಮೆದುಳು ಕಾರ್ಯ ಕುಂಠಿತಗೊಂಡಿತ್ತು.

ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಲಕ್ಷಣಗಳು ಕಂಡು ಬರದ ಹಿನ್ನಲೆಯಲ್ಲಿ ಇಂದು ಬೆಳಿಗ್ಗೆ 6.55ರ ಸುಮಾರಿಗೆ ಪೇಜಾವರ ಮಠಕ್ಕೆ ಸ್ಥಳಾಂತರ ಮಾಡಲಾಗಿತ್ತು. ಆಸ್ಪತ್ರೆಯಿಂದ ಉಡುಪಿಯ ಪೇಜಾವರ ಮಠಕ್ಕೆ ಆಯಂಬುಲೆನ್ಸ್ ಮೂಲಕ ಶ್ರೀಗಳನ್ನು ಶಿಫ್ಟ್ ಮಾಡಲಾಗಿತ್ತು. ಅಲ್ಲದೆ, ಮಠದ ಕೊಠಡಿಯಲ್ಲಿಯೇ ಐಸಿಯುನಂತಹ ವಾತಾವರಣದಲ್ಲಿ ಚಿಕಿತ್ಸೆ ನೀಡಲು ಆರಂಭಿಸಲಾಗಿತ್ತು. ಆದರೂ, ಚಿಕಿತ್ಸೆ ಫಲಕಾರಿಯಾಗದೆ ಶ್ರೀಗಳು ಇಂದು ಕೊನೆಯುಸಿರೆಳೆದಿದ್ದಾರೆ.

 

More updates Awaiting ..

Facebook Comments

Sri Raghav

Admin