ಬೆಳಗಾವಿ,ಡಿ.23- ಪಂಚಮಸಾಲಿ ಮೀಸಲಾತಿ ಬೇಡಿಕೆ ಬೆನ್ನಲ್ಲೇ ಒಕ್ಕಲಿಗ ಸಮುದಾಯದಿಂದಲೂ ಮೀಸಲಾತಿ ಬೇಡಿಕೆ ತೀವ್ರಗೊಳ್ಳುತ್ತಿದೆ. ಮೀಸಲಾತಿ ಹೆಚ್ಚಳ ಆಗ್ರಹಿಸಿ ಬಿಜೆಪಿಯ ಒಕ್ಕಲಿಗ ಶಾಸಕರು ಹಾಗೂ ಸಚಿವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಬೆಳಗಾವಿಯ ಸುವರ್ಣಸೌಧದಲ್ಲಿಂದು ಭೇಟಿ ಮಾಡಿ ಮನವಿ ನೀಡಿದ್ದು, ಚಕುಂಚಿಟಗರು ಹಾಗೂ ಬಂಟ ಸಮುದಾಯದವರಿಗೆ ಮೀಸಲಾತಿ ಹೆಚ್ಚಳ ಮಾಡಬೇಕು ಎಂಬ ಬೇಡಿಕೆಯನ್ನೂ ಮುಂದಿಟ್ಟಿದ್ದಾರೆ.
ಈಗಾಗಲೇ ಮೀಸಲಾತಿ ಹೆಚ್ಚಳ ವಿಚಾರವಾಗಿ ಒಕ್ಕಲಿಗ ಸಮುದಾಯದ ಸಚಿವರು, ಶಾಸಕರು ಹಾಗೂ ಶ್ರೀ ನಿರ್ಮಲಾ ನಂದನಾಥ ಸ್ವಾಮೀಜಿ, ನಂಜ ವಧೂತ ಸ್ವಾಮೀಜಿ, ಚಂದ್ರಶೇಖರ ನಾಥ ಸ್ವಾಮೀಜಿ ಮತ್ತು ಒಕ್ಕಲಿಗ ಸಂಘದ ಅಭಿಪ್ರಾಯ ಪಡೆದು ಸಭೆ ನಡೆಸಿದ್ದಾರೆ.
ಒಕ್ಕಲಿಗರು ಅನ್ನ ನೀಡುವ ಸಮುದಾಯ ದವರು. ಈ ಸಮುದಾಯದಲ್ಲಿ ಸಾಕಷ್ಟು ಬಡವರಿದ್ದಾರೆ. ಮೀಸಲಾತಿ ಸಿಕ್ಕರೆ ವಿದ್ಯಾಭ್ಯಾಸಕ್ಕೆ ಅನುಕೂಲವಾಗುತ್ತದೆ ಎಂಬುದು ಒಕ್ಕಲಿಗರ ಬೇಡಿಕೆಯಾಗಿದೆ.
ತುಂಡಾಗಿದ್ದ ಕೈಯನ್ನು ಮರು ಜೋಡಿಸಿದ AIIMS ವೈದ್ಯರು
ಈ ಬಗ್ಗೆ ಮಾತನಾಡಿದ ಅಶೋಕ್, ಇಂದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ. ಕುಂಚಿಟಿಗರಿಗೆ ಸೆಂಟ್ರಲ್ ಒಬಿಸಿಯಲ್ಲಿ ಸೇರ್ಪಡೆಯಾಗಿಲ್ಲ. ಮಂಗಳೂರಿನ ಬಂಟ್ರನ್ನು ಕೂಡ ಸೇರಿಸುವ ಕೆಲಸವಾಗಬೇಕಿದೆ. 4% ಹಳ್ಳಿಯಲ್ಲಿರುವ ಒಕ್ಕಲಿಗರಿಗೆ ಸಿಗುತ್ತಿದೆ. ನಗರ ಪ್ರದೇಶದ ಒಕ್ಕಲಿಗರಿಗೆ ಇದರ ಸೌಲಭ್ಯ ಇಲ್ಲ. ಹಾಗಾಗಿ ನಗರ ಪ್ರದೇಶದ ಬಡ ಒಕ್ಕಲಿಗರಿಗೆ ಇಡಬ್ಲುಎಸ್ನಲ್ಲಿ ಅವಕಾಶ ಕಲ್ಪಿಸಲು ಮನವಿ ಮಾಡಿದ್ದೇವೆ ಎಂದು ತಿಳಿಸಿದರು.
ಮೀಸಲಾತಿಯನ್ನು ಶೇ.4ರಿಂದ ಶೇ.12ಕ್ಕೆ ಏರಿಸಲು ನಮ್ಮ ಹಕ್ಕೋತ್ತಾಯ ಇದೆ. ಒಗ್ಗಟ್ಟಿನಿಂದ ನಮ್ಮ ಜನಾಂಗಕ್ಕೆ ಆದ ಅನ್ಯಾಯವನ್ನು ಸರಿಪಡಿಸಲು ನಾವೆಲ್ಲ ಕಂಕಣ ಬದ್ಧರಾಗಿದ್ದೇವೆ. ನಮ್ಮ ಬೇಡಿಕೆಗಳನ್ನು ಮುಖ್ಯಮಂತ್ರಿಗಳು ಪರಿಗಣಿಸುತ್ತಾರೆ ಎಂಬ ಭರವಸೆ ಇದೆ ಎಂದರು.
ಜನವರಿ 4ರಂದು ಬೆಂಗಳೂರಿನಲ್ಲಿ ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳನ್ನು ಭೇಟಿ ಮಾಡಲು ನಿರ್ಧಾರ ಮಾಡಲಾಗಿದೆ.
ಕಾಂಗ್ರೆಸ್ ಸದಸ್ಯರ ಗಡುವು:
ಒಕ್ಕಲಿಗರ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವಿಧಾನಪರಿಷತ್ ಸದಸ್ಯರು ಕೂಡ ರಾಜ್ಯ ಸರ್ಕಾರಕ್ಕೆ ಒಕ್ಕೂರಲಿನಿಂದ ಮನವಿ ಮಾಡಿದ್ದಾರೆ. ಅಲ್ಲದೇ ಬೇಡಿಕೆ ಈಡೇರಿಸಲು ಸರ್ಕಾರಕ್ಕೆ ಜನವರಿ 23ರಂದು ಅಂತಿಮ ಗಡುವು ಕೊಟ್ಟಿದ್ದಾರೆ.
ಮಾಸ್ಕ್ ಧರಿಸುವಂತೆ ಅರಿವು ಮೂಡಿಸಲು ಫೀಲ್ಡಿಗಿಳಿದ ಬಿಬಿಎಂಪಿ ಮಾರ್ಷಲ್ಗಳು
ಒಕ್ಕಲಿಗ ಸಮುದಾಯ ಮೀಸಲಾತಿ ಹೆಚ್ಚಿಸುವ ವಿಚಾರವಾಗಿ ಬೆಳಗಾವಿಯಲ್ಲಿ ನಿನ್ನೆ ಸಭೆ ನಡೆಸಿರುವ ಕಾಂಗ್ರೆಸ್ ಪರಿಷತ್ ಸದಸ್ಯರಾದ ಸಿ.ಎಂ.ಲಿಂಗಪ್ಪ, ಎಸ್.ರವಿ, ಗೋವಿಂದ್ರಾಜು, ಅನಿಲ್ಕುಮಾರ್, ಮಂಜುನಾಥ್ ಬಂಡಾರಿ, ದಿನೇಶ್ ಗೂಳಿಗೌಡ ಅವರು ಸರ್ಕಾರಕ್ಕೆ ಗಡುವು ನೀಡಿದ್ದಾರೆ.
ಒಕ್ಕಲಿಗ ಜನಾಂಗಕ್ಕೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿಯನ್ನು ಕಲ್ಪಿಸಲು ಸಮಾಜದ ಮಠಾೀಶರಾದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳು ಹಾಗೂ ನಂಜÁವಧೂತ ಸ್ವಾಮೀಜಿಗಳ ನೇತೃತ್ವದಲ್ಲಿ ಮೀಸಲಾತಿಯನ್ನು ಶೇ.12ಕ್ಕೆ ಹೆಚ್ಚಿಸಲು ಹಕ್ಕೋತಾಯ ಮಂಡಿಸುತ್ತೇವೆ. ಇದು ಕಾಂಗ್ರೆಸ್ ಪಕ್ಷವಲ್ಲದೆ, ಪಕ್ಷಾತೀತವಾಗಿ ಸಮಾಜದ ಎಲ್ಲಾ ಸಂಘಟನೆಗಳು ಬೇಡಿಕೆಯನ್ನು ಈಡೇರಿಸಲು ಸರ್ಕಾರಕ್ಕೆ ಜನವರಿ 23ರವರೆಗೆ ಅಂತಿಮ ಗಡುವು ನೀಡಿದ್ದಾರೆ.
Vokkaliga community, reservation, demand,