ಒಕ್ಕಲಿಗರ ಮೀಸಲಾತಿ ಹೆಚ್ಚಳಕ್ಕಾಗಿ ಪಕ್ಷಾತೀತ ಹೋರಾಟಕ್ಕೆ ಸಜ್ಜು

Social Share

ಬೆಂಗಳೂರು, ನ.26- ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವಂತೆ ರಾಜ್ಯ ಸರ್ಕಾರನ್ನು ಆಗ್ರಹಿಸಿ ಪಕ್ಷಾತೀತ ಹೋರಾಟ ನಡೆಸಲು ಒಕ್ಕಲಿಗ ಸಮು ದಾಯ ಸಜ್ಜಾಗಿದ್ದು, ಹೋರಾಟದ ರೂಪುರೇಷೆ ಬಗ್ಗೆ ನಾಳೆ ಮಹತ್ವದ ಸಭೆ ನಡೆಯಲಿದೆ.

ರಾಜ್ಯ ಒಕ್ಕಲಿಗರ ಸಂಘದ ಆವರಣದಲ್ಲಿರುವ ಕುವೆಂಪು ಕಲಾಕ್ಷೇತ್ರದಲ್ಲಿ ಬೆಳಿಗ್ಗೆ 10.30 ಗಂಟೆಗೆ ಒಕ್ಕಲಿಗರ ಮೀಸಲಾತಿ ಹೆಚ್ಚಿಸುವ ಹೋರಾಟದ ಕುರಿತ ಒಕ್ಕಲಿಗ ಸಮುದಾಯದ ಪ್ರಮುಖರ ಸಭೆಯನ್ನು ಕರೆಯಲಾಗಿದೆ.

ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ, ಪಟ್ಟನಾಯಕನಹಳ್ಳಿ ಮಠದ ಶ್ರೀ ನಂಜಾವಧೂತ ಮಹಾಸ್ವಾಮೀಜಿ ಮತ್ತು ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನದ ಶ್ರೀ ಕುಮಾರ ಚಂದ್ರಶೇಖರನಾಥ ಮಹಾ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ಜರುಗುವ ಸಭೆಯಲ್ಲಿ ಮೀಸಲಾತಿ ಹೋರಾಟದ ಬಗ್ಗೆ ಸಮಾಲೋಚಿಸಿ ಸರ್ಕಾರವನ್ನು ಒತ್ತಾಯಿಸಲು ಸೂಕ್ತ ನಿರ್ಣಯ ಕೈಗೊಳ್ಳಲು ತೀರ್ಮಾನಿಸಲಾಗಿದೆ.

ಜೈಲಲ್ಲಿ AAP ಸಚಿವನ ದರ್ಬಾರ್ ಕುರಿತ ಮತ್ತೊಂದು ವಿಡಿಯೋ ರಿಲೀಸ್

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ ಕೃಷ್ಣ, ಡಿ.ವಿ. ಸದಾನಂದಗೌಡರು, ಹೆಚ್.ಡಿ. ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಸಚಿವರು, ಶಾಸಕರು, ಒಕ್ಕಲಿಗರ ಸಮುದಾಯದ ವಿವಿಧ ಸಂಘನೆಗಳ ಮುಖಂಡರು ಭಾಗವಹಿಸುವ ನಿರೀಕ್ಷೆ ಇದೆ.

ರಾಜ್ಯ ಒಕ್ಕಲಿಗರ ಸಂಘದ ನೇತೃತ್ವದಲ್ಲಿ ಜರುಗುವ ಈ ಸಭೆಯಲ್ಲಿ ರಾಜ್ಯ ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿ ಸೇರಿದಂತೆ ವಿವಿಧ ಸಂಘಟನೆಘಳ ಪದಾಧಿಕಾರಿಗಳು, ಸಾಹಿತಿಗಳು, ರೈತ ಮುಖಂಡರು, ಕಾರ್ಮಿಕ ಮುಖಂಡರು, ಅಧಿಕಾರಿಗಳು, ವಕೀಲರು, ವೈದ್ಯರು, ವಿದ್ಯಾರ್ಥಿಗಳು, ಕಲಾವಿದರು, ವಾಣಿಜ್ಯೋದ್ಯಮಿಗಳು, ಶಿಕ್ಷಣ ತಜ್ಞರು, ಸಮಾಜದ ಗಣ್ಯರು ಭಾಗವಹಿಸು ಸಾಧ್ಯತೆಗಳಿವೆ.

“ಟೀಮ್ ಇಂಡಿಯಾ ಪಾಕಿಸ್ತಾನಕ್ಕೆ ಬರದಿದ್ದರೆ ನಾವು ವಿಶ್ವಕಪ್ ಬಹಿಷ್ಕರಿಸಬೇಕಾಗುತ್ತದೆ”

ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ಶೇ.16ಕ್ಕೂ ಹೆಚ್ಚು ಒಕ್ಕಲಿಗ ಸಮುದಾಯದವಿದ್ದು, ಈಗ ಹಿಂದುಳಿದ ಪ್ರವರ್ಗ 3 ಎ ಅಡಿಯಲ್ಲಿ ನೀಡಿರುವ ಶೇ. 4ರಷ್ಟು ಮೀಸಲಾತಿ ಪ್ರಮಾಣವನ್ನು ಶೇ.12ಕ್ಕೆ ಹೆಚ್ಚಿಸುವಂತೆ ಆಗ್ರಹಿಸಿ ಹೋರಾಟ ನಡೆಸಲು ನಿರ್ಧರಿಸಲಾಗಿದ್ದು, ನಾಳೆ ನಡೆಯುವ ಸಭೆಯಲ್ಲಿ ಯಾವ ಸ್ವರೂಪದ ಹೋರಾಟ ನಡೆಸಿ ಸರ್ಕಾರದ ಮೇಲೆ ಒತ್ತಡ ತರಬೇಕು ಎಂಬ ಬಗ್ಗೆ ನಿರ್ಣಯ ಕೈಗೊಳ್ಳಲಾಗುತ್ತದೆ.

Vokkaliga, community, reservation, increase, meeting, leaders,

Articles You Might Like

Share This Article