ಕೆಂಪೇಗೌಡ ಪ್ರತಿಮೆ ಲೋಕಾರ್ಪಣೆ ಯಶಸ್ವಿಗೆ ಒಕ್ಕಲಿಗರ ಸಂಘ ಮನವಿ

Social Share

ಬೆಂಗಳೂರು, ಅ.21-ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆಯ ಲೋಕಾರ್ಪಣೆ ಸಮಾರಂಭದಲ್ಲಿ ನಮ್ಮ ಸಮಾಜದವರು, ವಿವಿಧ ಸಂಘಟನೆಗಳು ಸೇರಿದಂತೆ ನಾಡಿನ ಸಮಸ್ತರು ಪಾಲ್ಗೊಂಡು ಯಶಸ್ವಿಗೊಳಿಸುವಂತೆ ರಾಜ್ಯ ಒಕ್ಕಲಿಗರ ಸಂಘ ಮನವಿ ಮಾಡಿದೆ.

ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಬೃಹತ್ ಕಂಚಿನ ಪ್ರತಿಮೆಯನ್ನು ವಿಮಾನ ನಿಲ್ದಾಣದಲ್ಲಿ ನಿರ್ಮಿಸಿರುವುದು ಎಲ್ಲರೂ ಹೆಮ್ಮೆಪಡುವ ಸಂಗತಿಯಾಗಿದೆ. ಈ ಸಮಾರಂಭದಲ್ಲಿ ಪಾಲ್ಗೊಳ್ಳುವ ಮೂಲಕ ನಾಡಪ್ರಭುಗೆ ಗೌರವ ಸಲ್ಲಿಸುವ ಸದಾವಕಾಶ ದೊರೆತಿದೆ ಎಂದು ಸಂಘದ ಅಧ್ಯಕ್ಷರಾದ ಶಾಸಕ ಸಿ.ಎನ್.ಬಾಲಕೃಷ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚೋಲಾದೋರಾ ಧರಿಸಿ ಕೇದಾರನಾಥನ ದರ್ಶನ ಪಡೆದ ಪ್ರಧಾನಿ ಮೋದಿ

ನ.11ರಂದು ಪ್ರಧಾನಿ ನರೇಂದ್ರ ಮೋದಿಯವರು ಕೆಂಪೇಗೌಡರ ಭವ್ಯ ಪ್ರತಿಮೆಯನ್ನು ಲೋಕಾರ್ಪಣೆ ಮಾಡುತ್ತಿರುವುದರಿಂದ ವಿಶ್ವ ವಿಶ್ವ ಮನ್ನಣೆಗೆ ಪಾತ್ರವಾಗಿರುವ ಬೆಂಗಳೂರು ಮತ್ತು ಕೆಂಪೇಗೌಡರ ಕೀರ್ತಿಗೆ ಮೆರುಗು ನೀಡಿದಂತಾಗಿದೆ. ಹೀಗಾಗಿ ನಾಡಿನ ಎಲ್ಲೆಡೆಯಿಂದ ಆಗಮಿಸಿ ಪ್ರತಿಮೆ ಲೋಕಾರ್ಪಣೆ ಸಮಾರಂಭದಲ್ಲಿ ಎಲ್ಲರೂ ಸಂಭ್ರಮದಿಂದ ಪಾಲ್ಗೊಳ್ಳೋಣ ಎಂದು ಕರೆ ನೀಡಿದ್ದಾರೆ.

ಬೀದಿ ನಾಯಿಗಳಿಗೆ ಆಹಾರ ನೀಡದಂತೆ ಹೈಕೋರ್ಟ್ ಆದೇಶ

ಬೆಂಗಳೂರು ವಿಮಾನ ನಿಲ್ದಾಣ ಸಮುಚ್ಚಯದಲ್ಲಿ ಕೆಂಪೇಗೌಡರ ಪ್ರತಿಮೆಯು ಇನ್ನು ಮುಂದೆ ಪ್ರಮುಖ ಆಕರ್ಷಣೆಯ ಕೇಂದ್ರವಾಗಲಿದೆ. ಕೆಂಪೇಗೌಡರು ನಿರ್ಮಿಸಿದ ಬೆಂಗಳೂರು ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದೆ. ಅವರಿಗಿದ್ದ ದೂರದೃಷ್ಟಿಯನ್ನು ಗೌರವಿಸಿ 108 ಅಡಿ ಎತ್ತರದ ಪ್ರತಿಮೆಗೆ ಪ್ರಗತಿ ಪ್ರತಿಮೆ ಎಂದು ನಾಮಕರಣ ಮಾಡಿರುವುದು ಅರ್ಥಪೂರ್ಣವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಪ್ರತಿಯೊಂದು ಗ್ರಾಮದ ಕೆರೆ, ಕಟ್ಟೆ, ಕಲ್ಯಾಣಿ, ನದಿ, ಪುಷ್ಕರಿಣಿ, ಪುಣ್ಯಪುರುಷರ ಸಮಾ ಸ್ಥಳಗಳಿಂದ ಪವಿತ್ರವಾದ ಮಣ್ಣನ್ನು ಸಂಗ್ರಹಿಸಿ ವಿಮಾನ ನಿಲ್ದಾಣ ಆವರಣದಲ್ಲಿ ಅಭಿವೃದ್ಧಿಪಡಿಸುತ್ತಿರುವ 23 ಎಕರೆ ವಿಶಾಲವಾದ ಕೆಂಪೇಗೌಡ ಥೀಮ್ ಪಾರ್ಕ್‍ನಲ್ಲಿ ಬಳಸಿಕೊಳ್ಳುವುದು ಒಳ್ಳೆಯ ಕಾರ್ಯ ಎಂದು ಅವರು ಶ್ಲಾಘಿಸಿದ್ದಾರೆ.

Articles You Might Like

Share This Article