ಮೀಸಲಾತಿ ಹೆಚ್ಚಳ : ಹೋರಾಟದ ರೂಪುರೇಷೆ ಬಗ್ಗೆ 27ಕ್ಕೆ ಒಕ್ಕಲಿಗರ ಸಭೆ

Social Share

ಬೆಂಗಳೂರು,ನ.24- ಒಕ್ಕಲಿಗ ಸಮುದಾಯದ ಮೀಸಲಾತಿ ಪ್ರಮಾಣ ಹೆಚ್ಚಿಸುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಲು ಕೈಗೊಳ್ಳಲಿರುವ ಹೋರಾಟದ ರೂಪುರೇಷೆ ಬಗ್ಗೆ ಚರ್ಚಿಸಲು ನ.27ರಂದು ಒಕ್ಕಲಿಗರ ಸಮುದಾಯದ ಪ್ರಮುಖ ಮುಖಂಡರ ಸಭೆ ಕರೆಯಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಶಾಸಕ ಸಿ.ಎನ್.ಬಾಲಕೃಷ್ಣ ಅವರು, ಅಂದು ಬೆಳಿಗ್ಗೆ 10.30 ಗಂಟೆಗೆ ನಮ್ಮ ಸಂಘದ ಆವರಣದಲ್ಲಿರುವ ಕುವೆಂಪು ಕಲಾಕ್ಷೇತ್ರದಲ್ಲಿ ಒಕ್ಕಲಿಗರ ಮೀಸಲಾತಿ ಹೆಚ್ಚಿಸುವ ವಿಚಾರವಾಗಿ ಸಮಾಜದ ಪ್ರಮುಖರ ಸಭೆಯನ್ನು ಕರೆಯಲಾಗಿದೆ.

ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ, ಪಟ್ಟನಾಯಕನಹಳ್ಳಿ ಮಠದ ಶ್ರೀ ನಂಜಾವಧೂತ ಮಹಾಸ್ವಾಮೀಜಿ ಮತ್ತು ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನದ ಶ್ರೀ ಕುಮಾರ ಚಂದ್ರಶೇಖರನಾಥ ಮಹಾಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ಈ ಸಭೆ ನಡೆಯಲಿದೆ ಎಂದು ಹೇಳಿದರು.

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು, ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ.ಕೃಷ್ಣ, ಡಿ.ವಿ. ಸದಾನಂದಗೌಡರು, ಹೆಚ್.ಡಿ ಕುಮಾರಸ್ವಾಮಿ, ರಾಜ್ಯ ಸರ್ಕಾರದ ಸಚಿವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಸಭೆಗೆ ಆಹ್ವಾನಿಸಲಾಗಿದೆ.

ವೋಟರ್ ಐಡಿ ಹಗರಣ: ರಾಜಕಾರಣಿಗಳ ಸಂಪರ್ಕದ ಬಗ್ಗೆ ಬಾಯಿ ಬಿಡದ `ಚಿಲುಮೆ’ ರವಿ

ರಾಜ್ಯದ ಜನಸಂಖ್ಯೆಯಲ್ಲಿ ಶೇ.16ಕ್ಕೂ ಹೆಚ್ಚು ಅಂದರೆ, ಶೇ.20ರಷ್ಟು ಇದ್ದಾರೆ. ಒಕ್ಕಲಿಗ ಸಮುದಾಯದ ಜನಸಂಖ್ಯೆ ಇದ್ದರೂ ಜಾತಿವಾರು ಜನಗಣತಿ ಸರಿಯಾಗಿ ನಡೆದಿಲ್ಲ ಎಂಬ ಅಸಮಾಧಾನವು ಕೇಳಿಬರುತ್ತಿದೆ. ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿಯನ್ನು ಅವರ ಜನಸಂಖ್ಯೆಗೆ ಅನುಗುಣವಾಗಿ ಹೆಚ್ಚಳ ಮಾಡಿರುವುದನ್ನು ರಾಜ್ಯ ಒಕ್ಕಲಿಗರ ಸಂಘವು ಸ್ವಾಗತಿಸಿದೆ ಎಂದರು.

ಅದೇ ರೀತಿ ನಮ್ಮ ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಳ ಮಾಡಬೇಕೆಂದು ಒಕ್ಕೊರಲಿನಿಂದ ಆಗ್ರಹಿಸುತ್ತೇವೆ. ಬೇರೆ ಸಮುದಾಯದವರಿಗೆ ಮೀಸಲಾತಿ ಹೆಚ್ಚಿಸಲು ನಮ್ಮ ಅಭ್ಯಂತರವಿಲ್ಲ. ಆದರೆ ಆದೇ ರೀತಿ ರಾಜ್ಯದಲ್ಲಿ ಅಕ ಜನಸಂಖ್ಯೆ ಹೊಂದಿರುವ ನಮ್ಮ ಸಮುದಾಯಕ್ಕೆ ನ್ಯಾಯ ಒದಗಿಸಬೇಕು ಎಂದು ಅವರು ತಿಳಿಸಿದ್ದಾರೆ.

ನೇಮಕ ಮಾಡದಿದ್ದರೆ ಆಕಾಶ ಕಳಚಿಬೀಳುತ್ತಿತ್ತೇ: ಸುಪ್ರೀಂ ಗರಂ

ಸಂಘದ ಪ್ರಧಾನ ಕಾರ್ಯದರ್ಶಿ ಟಿ.ಕೋನಪ್ಪರೆಡ್ಡಿ ಮಾತನಾಡಿ, ಆರ್ಥಿಕವಾಗಿ ಹಿಂದುಳಿದವರಿಗೆ(ಇಡಬ್ಲ್ಯುಎಸ್) ನೀಡುವ ಶೇ.10ರ ಮೀಸಲಾತಿಯಲ್ಲೂ ನಗರ ಪ್ರದೇಶದಲ್ಲಿ ಆರ್ಥಿಕವಾಗಿ ಬಡವರಾಗಿರುವ ಹಾಗೂ ಮೀಸಲಾತಿಯಿಂದ ಹೊರಗಿರುವ ಒಕ್ಕಲಿಗ ಸಮು ದಾಯದವರಿಗೂ ಮೀಸಲಾತಿ ಒದಗಿಸ ಬೇಕು ಎಂದು ಸರ್ಕಾರವನ್ನು ಆಗ್ರಹಿಸುತ್ತೇವೆ ಎಂದರು.

ರಾಜ್ಯ ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿಯ ಅಧ್ಯಕ್ಷ ಡಾ.ಗಾನಂ ಶ್ರೀಕಂಠಯ್ಯ ಮಾತನಾಡಿ, ಕಾಂತರಾಜ್ ನೇತೃತ್ವದ ಜಾತಿಗಣತಿ ಅವೈಜ್ಞಾನಿಕವಾಗಿದ್ದು ತಿರಸ್ಕರಿಸಬೇಕು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಿ.ಹನುಮಂತಯ್ಯ, ಆಂತರಿಕ ಲೆಕ್ಕ ಪರಿಶೋಧಕರಾದ ಆರ್.ಹನುಮಂತರಾಯಪ್ಪ, ಕಾನೂನು ಸಲಹೆ ಸಲಹೆಗಾರರಾದ ನೆಲ್ಲಿಗೆರೆ ಬಾಲು, ಬಿಐಟಿ ಅಧ್ಯಕ್ಷರಾದ ಎಂ.ಪುಟ್ಟಸ್ವಾಮಿ ನಿರ್ದೇಶಕರಾದ ಲೋಕೇಶ್ ನಾಗರಾಜಯ್ಯ, ಹೋರಾಟ ಸಮಿತಿಯ ಪ್ರಧಾನ ಸಂಚಾಲಕ ಆಡಿಟರ್ ನಾಗರಾಜ್ ಯಲಚವಾಡಿ ಮತ್ತಿತರರಿದ್ದರು.

vokkaligara, sangha, reservation, Increase, meeting,

Articles You Might Like

Share This Article