Saturday, October 12, 2024
Homeರಾಜ್ಯಮತದಾರರ ಜಾಗೃತಿಯ ವ್ಯಂಗ್ಯ ಚಿತ್ರ ಪ್ರದರ್ಶನಕ್ಕೆ ಚಾಲನೆ

ಮತದಾರರ ಜಾಗೃತಿಯ ವ್ಯಂಗ್ಯ ಚಿತ್ರ ಪ್ರದರ್ಶನಕ್ಕೆ ಚಾಲನೆ

ಬೆಂಗಳೂರು, ಜ.21-ಮುಂಬರುವ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತದಾರರ ಜಾಗೃತಿಗಾಗಿ ವಿಧಾನಸೌಧ ಪೂರ್ವ ದಿಕ್ಕಿನಲ್ಲಿರುವ ಬಸವಣ್ಣನ ಪ್ರತಿಮೆಯ ಮುಂಬಾಗ ಹಮ್ಮಿಕೊಂಡಿರುವ ರಾಜ್ಯ ಮಟ್ಟದ ವ್ಯಂಗ್ಯ ಚಿತ್ರಕಾರರ ಕಾರ್ಯಾಗಾರ ಮತ್ತು ಪ್ರದರ್ಶನಕ್ಕೆ ರಾಜ್ಯ ಮುಖ್ಯ ಚುನಾವಣಾಧಿಕಾರಿಯಾದ ಮನೋಜ್ ಕುಮಾರ್ ಮೀನಾ ಅವರು ಚಾಲನೆ ನೀಡಿದರು.

ಲೋಕಸಭಾ ಚುನಾವಣೆಯ ಪ್ರಯುಕ್ತ ಮತದಾರರಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸಲು ಮುಖ್ಯ ಚುನಾವಣಾಧಿಕಾರಿ ಕಚೇರಿಯಿಂದ ವ್ಯಂಗ್ಯಚಿತ್ರಗಳನ್ನು ಆಹ್ವಾನಿಸಲಾಗಿತ್ತು. ಅದರಂತೆ ಕಲಾವಿದರು, ವ್ಯಂಗ್ಯಚಿತ್ರಕಾರರು, ಹವ್ಯಾಸಿ ಕಲಾವಿದರು ಸೇರಿದಂತೆ ವಿಧ್ಯಾರ್ಥಿಗಳು ಈ ಅಭಿಯಾನದಲ್ಲಿ ಭಾಗವಹಿಸಿದ್ದರು.

ಕಲಾವಿದರು ಮತದಾನದ ಕುರಿತು ಜಾಗೃತಿ ಹಾಗೂ ಮತದಾನದ ಮಹತ್ವವನ್ನು ಸಾರುವಂತಹ ಚಿತ್ರಗಳನ್ನು ರಚಿಸಿ, ಆಯ್ಕೆಯಾದ ಚಿತ್ರಗಳನ್ನು ಇಂದು ವಿಶೇಷ ಕಾರ್ಯಕ್ರಮದ ಮೂಲಕ ಪ್ರದರ್ಶನ ಮಾಡಲಾಯಿತು. ಜಾಗೃತಿ ಮೂಡಿಸುವ ಅತ್ಯುತ್ತಮ 25 ಚಿತ್ರಗಳನ್ನು ಚುನಾವಣಾ ಆಯೋಗದಿಂದ ಮತದಾನದಜಾಗೃತಿಯ ಪ್ರಚಾರಕ್ಕಾಗಿ ಬಳಸಿಕೊಳ್ಳಲಾಗುವುದು.

ರಾಮಸೇತು ಅರಿಚಲಮುನೈನಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ

ಈ ವೇಳೆ ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಆರ್. ರಾಮಚಂದ್ರನ್, ಸ್ವೀಪ್ ನೋಡಲ್ ಅಕಾರಿಯಾದ ಪಿ.ಎನ್ ವಸ್ತ್ರದ್, ಮಾಹಿತಿ ತಂತ್ರಜ್ಞಾನದ ವಿಶೇಷ ಅಕಾರಿಯಾದ ಸೂರ್ಯ ಸೇನ್ ಮೊದಲಾದವರು ಉಪಸ್ಥಿತರಿದ್ದರು.

RELATED ARTICLES

Latest News