ಬೆಂಗಳೂರು,ನ.26- ಮತದಾರರಗುರುತಿನ ಚೀಟಿ ಪರಿಷ್ಕರಣೆ ಪ್ರಕರಣದಲ್ಲಿ ಯಾವುದೇ ಅಧಿಕಾರಿಗಳು ಭಾಗಿಯಾಗಿದ್ದರೆ ಅವರ ಮೇಲೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಎಚ್ಚರಿಸಿದ್ದಾರೆ.
ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಅವರನ್ನು ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ. ಐಎಎಸ್ ಇರಲಿ ಅಥವಾ ಇನ್ಯಾವುದೇ ಅಧಿಕಾರಿ ಇರಲಿ ಕಾನೂನು ಮುಂದೆ ಎಲ್ಲರೂ ಒಂದೇ ಎಂದು ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತದಾರರ ಗುರುತಿನ ಚೀಟಿ ಪರಿಷ್ಕರಣೆಯಲ್ಲಿ ಕೆಲವು ಲೋಪದೋಷಗಳು ಕಂಡುಬಂದ ಹಿನ್ನೆಲೆಯಲ್ಲಿ ಇಬ್ಬರು ಐಎಎಸ್ ಅಧಿಕಾರಿಗಳನ್ನು ಚುನಾವಣಾ ಆಯೋಗ ಅಮಾನತು ಮಾಡಿದೆ. ತಪ್ಪು ಮಾಡಿದ್ದರೆ ಕ್ರಮ ಜರುಗಿಸಲು ಚುನಾವಣಾ ಆಯೋಗ ಮುಕ್ತವಾಗಿದೆ ಎಂದು ಹೇಳಿದರು.
ಆಸ್ಟ್ರೇಲಿಯಾದಲ್ಲಿ ಮಹಿಳೆ ಹತ್ಯೆ ಮಾಡಿ ತಲೆಮರೆಸಿಕೊಂಡಿದ್ದ ಭಾರತಿಯನ ಬಂಧನ
ಚುನಾವಣಾ ಆಯೋಗದ ಯಾವುದೇ ವಿಷಯದಲ್ಲೂ ಸರ್ಕಾರ ಹಸ್ತಕ್ಷೇಪ ಮಾಡುವುದಿಲ್ಲ. ಅದೊಂದು ಸ್ವಾಯತ್ತ ಸಂಸ್ಥೆ. ಮುಕ್ತವಾಗಿ ಕೆಲಸ ಮಾಡುತ್ತದೆ. ಚುನಾವಣಾ ಆಯೋಗ ಇಷ್ಟು ವೇಗದಲ್ಲಿ ಮಧ್ಯಪ್ರವೇಶ ಮಾಡಿರುವುದು ಹಾಗೂ ತನಿಖೆಗೆ ಸೂಚನೆ ನೀಡಿರುವ ಕ್ರಮವನ್ನು ಸ್ವಾಗತಿಸುತ್ತೇನೆ ಎಂದರು.
ಇತ್ತೀಚೆಗೆ ಮತದಾರರು ಎರಡರಿಂದ ಮೂರು ಕಡೆ ತಮ್ಮ ಹೆಸರು ಚುನಾವಣಾ ಪಟ್ಟಿಗೆ ಸೇರ್ಪಡೆ ಮಾಡುತ್ತಿದ್ದಾರೆ. ಒಂದೇ ಕಡೆ ಮತ ಚಲಾಯಿಸಲು ಅವಕಾಶ ಇರುವುದರಿಂದ ಎಲ್ಲಿ ಹೆಚ್ಚುವರಿಯಾಗಿ ಹೆಸರುಗಳು ಇರುತ್ತವೆಯೋ ಅದನ್ನು ಪಟ್ಟಿಯಿಂದ ತೆಗೆದು ಹಾಕುವುದು ನಿರಂತರ ಪ್ರಕ್ರಿಯೆ ಎಂದು ವಿವರಿಸಿದರು.
ಈಗಾಗಲೇ ಪಟ್ಟಿಯಿಂದ ಹೆಸರುಗಳನ್ನು ತಗೆದು ಹಾಕಿರುವುದು ಕಂಡುಬಂದರೆ ಅಂಥ ಹೆಸರುಗಳನ್ನು ಮರುಸೇರ್ಪಡೆ ಮಾಡಬೇಕೆಂದು ಆಯೋಗಕ್ಕೆ ನಾವೇ ಮನವಿ ಮಾಡುತ್ತೇವೆ. ಮತದಾನದ ಹಕ್ಕನ್ನು ಕಿತ್ತುಕೊಳ್ಳುವ ಅಧಿಕಾರ ಯಾರಿಗೂ ಇಲ್ಲ ಎಂದು ಬೊಮ್ಮಾಯಿ ಸ್ಪಷ್ಟಪಡಿಸಿದರು.
ಎರಡು ಕಡೆ ಮತದಾರ ಗುರುತಿನಚೀಟಿಗಳಿದ್ದರೆ ಈಗಿನ ತಾಂತ್ರಿಕತೆಯಲ್ಲಿ ಹೆಸರನ್ನು ತೆಗೆದು ಹಾಕಲಾಗುತ್ತದೆ. ಒಂದು ವೇಳೆ ನಿಜವಾದ ಮತದಾರರಿಗೆ ಅನ್ಯಾಯವಾಗಿದ್ದರೆ ಸೇರ್ಪಡೆ ಮಾಡಲು ಸರ್ಕಾರ ಹಿಂದೆಮುಂದೆ ನೋಡುವುದಿಲ್ಲ ಎಂದು ಹೇಳಿದರು.
ವೋಟರ್ ಡೇಟಾ ಅಕ್ರಮ ನಡೆದಿಲ್ಲ ಎಂದಾದರೆ IAS ಅಧಿಕಾರಿಗಳ ಅಮಾನತಾಗಿದ್ದೇಕೆ..?
ಪರಿಷ್ಕøತ ಪಟ್ಟಿಯಲ್ಲಿ ಕೆಲವು ಅಕ್ರಮಗಳು ಎಸಗಿದ್ದಾರೆ ಎಂಬ ಕಾರಣಕ್ಕಾಗಿ ಹಲವರನ್ನು ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಚುನಾವಣಾ ಆಯೋಗವು ತನಿಖೆ ನಡೆಸಲು ಸೂಚನೆ ನೀಡಿದೆ. ತನಿಖೆ ನಡೆದ ನಂತರ ಸತ್ಯಾಂಶ ಹೊರಬರಲಿದೆ ಎಂದು ಮಾಹಿತಿ ನೀಡಿದರು.
ಬೆಳಗಾವಿಯ ಸುವರ್ಣಸೌಧ ಮುಂಭಾಗದಲ್ಲಿ, ಬ್ರಿಟಿಷರ ವಿರುದ್ಧ ಕೆಚ್ಚೆದೆಯ ಹೋರಾಟ ನಡೆಸಿದ್ದ ವೀರರಾಣಿ ಕಿತ್ತೂರು ಚೆನ್ನಮ್ಮ ಮತ್ತು ಸ್ವಾತಂತ್ರ್ಯ ಸೇನಾನಿ ಸಂಗೊಳ್ಳಿ ರಾಯಣ್ಣ ಪ್ರತಿಮೆಗಳನ್ನು ನಿರ್ಮಾಣ ಮಾಡಲಾಗುವುದು. ಈಗಾಗಲೇ ಈ ಸಂಬಂಧ ಆದೇಶವನ್ನು ನೀಡಲಾಗಿದೆ.
ಡಿ.19ರಿಂದ ಬೆಳಗಾವಿಯಲ್ಲಿ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಆ ಸಂದರ್ಭದಲ್ಲಿ ಪ್ರತಿಮೆ ನಿರ್ಮಾಣಕ್ಕೆ ಅಡಿಗಲ್ಲು ಹಾಕುತ್ತೇವೆ ಎಂದು ಬೊಮ್ಮಾಯಿ ಹೇಳಿದರು. ಮಹಾರಾಷ್ಟ್ರದಲ್ಲಿ ಕೆಲವು ಕಿಡಿಗೇಡಿಗಳು ಕರ್ನಾಟಕಕ್ಕೆ ಸೇರಿದ ಸಾರಿಗೆ ಬಸ್‍ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ನಾನು ಈಗಾಗಲೇ ಸಂಬಂಧಪಟ್ಟವರ ಜೊತೆ ಮಾತುಕತೆ ನಡೆಸಿ ಈ ರೀತಿ ಆಗದಂತೆ ನೋಡಿಕೊಳ್ಳಬೇಕೆಂದು ಸೂಚನೆ ನೀಡಿದ್ದೇನೆ ಎಂದರು.
ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್‍ಸೂದ್ ಅವರು ಮಹಾರಾಷ್ಟ್ರದ ಅvಕಾರಿಗಳ ಜೊತೆ ಮಾತನಾಡಲಿದ್ದಾರೆ. ನಮ್ಮ ಬಸ್‍ಗಳಿಗೆ ಹಾನಿಯಾಗದಂತೆ ಹಾಗೂ ಉಭಯ ರಾಜ್ಯಗಳ ನಡುವೆ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಸೌಹಾರ್ದತೆಗೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕೆಂದು ಮನವಿ ಮಾಡಿರುವುದಾಗಿ ತಿಳಿಸಿದರು.
ಮುಂಬೈ ದಾಳಿ ನಡೆದು ಇಂದಿಗೆ 14 ವರ್ಷ
Voter, ID, scam, CM Bommai, Election, Commission,