ಬೆಂಗಳೂರು,ಡಿ.3- ಮತದಾರರ ಪಟ್ಟಿ ಪರಿಷ್ಕರಣೆ ಅಕ್ರಮಗಳ ಕುರಿತು ವಿಚಾರಣೆಗೆ ಹಾಜರಾಗಲು ಇಬ್ಬರು ಐಎಎಸ್ ಅಧಿಕಾರಿಗಳು 10 ದಿನಗಳ ಕಾಲಾವಕಾಶ ಕೇಳಿದ್ದಾರೆ. ಕಳೆದ ತಿಂಗಳು ಬೆಳಕಿಗೆ ಬಂದ ಮತದಾರರ ಪಟ್ಟಿ ಪರಿಷ್ಕರಣೆಯ ಅಕ್ರಮಗಳು ಭಾರೀ ಚರ್ಚೆಗೆ ಗ್ರಾಸವಾಗಿದ್ದವು.
ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ನೀಡಿದ ದೂರು ಆಧರಿಸಿ ಕೇಂದ್ರ ಚುನಾವಣಾ ಆಯೋಗ ಕ್ರಮ ಕೈಗೊಂಡಿದ್ದು, ತನಿಖೆಗೆ ಆದೇಶ ನೀಡಿದೆ. ಹಲಸೂರು ಗೇಟ್ ಹಾಗೂ ಕಾಡುಗೋಡಿ ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ.
ತನಿಖೆ ನಡೆಸುತ್ತಿರುವ ಪೊಲೀಸರು ಅಕ್ರಮದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಹೇಳಲಾದ ಚಿಲುಮೆ ಸಂಸ್ಥೆಯ ಮುಖ್ಯಸ್ಥ ರವಿಕುಮಾರ್, ಬಿಬಿಎಂಪಿಯ ಕೆಲ ಆರ್‍ಒಗಳು ಸೇರಿದಂತೆ 15 ಮಂದಿಯನ್ನು ಈವರೆಗೂ ಬಂಧಿಸಿದ್ದಾರೆ.
ಸುಂದರ್ ಪಿಚೈಗೆ ಅಮೆರಿಕಾದಲ್ಲಿ ಪದ್ಮಭೂಷಣ ಪ್ರದಾನ
ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿಗಳಾದ ಬಿಬಿಎಂಪಿಯ ವಿಶೇಷ ಆಯುಕ್ತ ರಂಗಪ್ಪ, ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್‍ರನ್ನು ಕೇಂದ್ರ ಚುನಾವಣಾ ಆಯೋಗದ ಶಿಫಾರಸ್ಸು ಮೇರೆ ಸರ್ಕಾರ ಅಮಾನತು ಮಾಡಿದೆ. ಈ ಇಬ್ಬರು ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಗಳಾಗಿ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಕೆಲಸ ಮಾಡಿದ್ದರು. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಹಲಸೂರುಗೇಟ್ ಠಾಣೆ ಪೊಲೀಸರು ನೋಟಿಸ್ ನೀಡಿದ್ದರು.
ಬೆಂಗಳೂರಿನಲ್ಲಿ ಡಿ.8ರಿಂದ 10ರವರೆಗೆ ಫ್ಯೂಚರ್ ಡಿಸೈನ್ ಸಮಾವೇಶ
ಆರೋಗ್ಯ ಹಾಗೂ ವೈಯಕ್ತಿಕ ಸಮಸ್ಯೆಗಳಿಂದ ಇಂದು ವಿಚಾರಣೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿರುವ ಇಬ್ಬರು ಐಎಎಸ್ ಅಕಾರಿಗಳು, 10 ದಿನಗಳ ಕಾಲಾವಕಾಶ ನೀಡುವಂತೆ ಮನವಿ ಮಾಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಈ ಸಂಜೆಗೆ ತಿಳಿಸಿದ್ದಾರೆ.
ಪಿಎಸ್‍ಐ ನೇಮಕಾತಿ ಅಕ್ರಮ : ಅಮೃತ್‍ಪೌಲ್ ವಿರುದ್ಧ ಪ್ರಾಸಿಕ್ಯೂಷನ್‍ಗೆ ಅನುಮತಿ
ಬಿಬಿಎಂಪಿ ಮುಖ್ಯ ಆಯುಕ್ತರು ಹಾಗೂ ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಹಿರಿಯ ಐಎಎಸ್ ಅಧಿಕಾರಿ ತುಷಾರ್ ಗಿರಿನಾಥ್‍ರನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಆದರೆ ಅವರು ಅನಾರೋಗ್ಯದಿಂದ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು.
#VoterID, #Scam, #Inquiry, #BBMP, #IASofficer,