ವೋಟರ್ ಐಡಿ ಹಗರಣ : ಸಾಫ್ಟ್ ವೇರ್ ಎಂಜಿನಿಯರ್ ವಶಕ್ಕೆ

Social Share

ಬೆಂಗಳೂರು,ನ.20- ಮತದಾರರ ಪಟ್ಟಿ ಪರಿಷ್ಕರಣೆ ಅಕ್ರಮದ ಕುರಿತಂತೆ ಕೇಂದ್ರ ವಿಭಾಗ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದು ಡಿಜಿಟಲ್ ಆ್ಯಪ್ ಸೃಷ್ಟಿಸಿದ್ದ ಪ್ರಮುಖ ಸಾಫ್ಟ್‍ವೇರ್ ಇಂಜಿನಿಯರ್ ಒಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಸಮೀಕ್ಷಾ ಆ್ಯಪ್ ಸೃಷ್ಟಿಸಿದ್ದ ಈತ ಪ್ರಮುಖ ಸಾಫ್ಟ್‍ವೇರ್ ಡೆವಲಪರ್ ಎಂದು ಪೊಲೀಸರು ತಿಳಿಸಿದ್ದಾರೆ. ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಈತ ಯಾವ ಯಾವ ಕ್ಷೇತ್ರಗಳಲ್ಲಿ ಬದಲಾವಣೆ ಮಾಡಿದ್ದಾರೆ ಮತ್ತು ಈ ಆ್ಯಪ್‍ನ ಉದ್ದೇಶ ಮತ್ತು ಅಕ್ರಮಗಳ ಕುರಿತಂತೆ ವ್ಯಾಪಕ ತನಿಖೆ ನಡೆಸಲಾಗುತ್ತಿದೆ. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲಸೂರು ಗೇಟ್ ಠಾಣೆ ಪೊಲೀಸರು ಮೂವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದು, ಹಲವು ಮಾಹಿತಿಗಳನ್ನು ಕಲೆ ಹಾಕಿದ್ದಾರೆ.

ಪ್ರಮುಖ ಆರೋಪಿ ರವಿಕುಮಾರ್ ಹಾಗೂ ಇನ್ನಿತರ ಆರೋಪಿಗಳಿಗಾಗಿ ಕೇಂದ್ರ ವಿಭಾಗದ ಪೊಲೀಸರು ವ್ಯಾಪಕ ಶೋಧ ನಡೆಸುತ್ತಿದ್ದಾರೆ. ಈ ಆರೋಪಿಗಳನ್ನು ಬಂಧಿಸಲು 8 ವಿಶೇಷ ತಂಡಗಳನ್ನು ರಚಿಸಲಾಗಿದೆ. ತಂಡಗಳು ಈಗಾಗಲೇ ಕಾರ್ಯಾಚರಣೆ ಕೈಗೊಂಡಿದ್ದು, ರಾಜ್ಯ ಹಾಗು ಹೊರರಾಜ್ಯಗಳಲ್ಲಿ ಶೋಧ ನಡೆಸುತ್ತಿವೆ.

ಮಂಗಳೂರು ಆಟೋ ಸ್ಪೋಟಕ್ಕೆ ತುಮಕೂರು ರೈಲ್ವೆ ಸಿಬ್ಬಂದಿ ಹೆಸರು ಲಿಂಕ್..!

ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ಆರೋಪಿ ಲೋಕೇಶ್‍ನ ಪತ್ತೆಗೂ ವೈಟ್‍ಫೀಲ್ಡ್ ವಿಭಾಗದ ಪೊಲೀಸರು ಬಲೆಬೀಸಿದ್ದಾರೆ. ಈತ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಮಾಡಿದ್ದ ಎಂದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ.

ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿ ಹಾಗೂ ಚಿಲುಮೆ ಸಂಸ್ಥೆಯ ಮುಖ್ಯಸ್ಥ ರವಿಕುಮಾರ್ ಸಿಕ್ಕಿದ ನಂತರವೇ ಈ ಪ್ರಕರಣದ ಆಳ-ಅಗಲ ಗೊತ್ತಾಗಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಈ ಸಂಜೆಗೆ ತಿಳಿಸಿದ್ದಾರೆ.

ಮೋದಿ ಆರ್‌ಎಸ್‌ಎಸ್‌ ನಿಯಂತ್ರಣದಲ್ಲಿ ಇಲ್ಲ : ಭಾಗವತ್

ಈಗ ನಾವು ಚಿಲುಮೆ ಸಂಸ್ಥೆಯ ನಿರ್ದೇಶಕರ ಕುಟುಂಬದವರು ಮತ್ತು ಅಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯವರನ್ನು ಕರೆತಂದು ವಿಚಾರಣೆಗೊಳಪಡಿಸಿ ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದೇವೆ ಎಂದು ಹೇಳಿದರು.

ಇಂದು ಸಹ ಕೆಲವರನ್ನು ಕರೆತಂದು ವಿಚಾರಣೆಗೊಳಪಡಿಸಿ ಪ್ರಕರಣದ ಬಗ್ಗೆ ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದೇವೆ ಎಂದು ಅವರು ತಿಳಿಸಿದರು.

ಖಾಸಗಿ ಬಸ್ ಪಲ್ಟಿ : 40 ಮಂದಿಗೆ ಗಾಯ, 6 ಮಂದಿ ಸ್ಥಿತಿ ಗಂಭೀರ

Articles You Might Like

Share This Article