ಚಿಲುಮೆ ಅಕ್ರಮ ಪ್ರಕರಣ : ಇಬ್ಬರು IAS ಅಧಿಕಾರಿಗಳ ಅಮಾನತು ವಾಪಸ್

Social Share

ಬೆಂಗಳೂರು,ಡಿ.24-ಚಿಲುಮೆ ಸಂಸ್ಥೆಯ ಮತದಾರರ ಪಟ್ಟಿ ಅಕ್ರಮ ಪ್ರಕರಣದ ನಂತರ ಸೇವೆಯಿಂದ ಅಮಾನತುಗೊಂಡಿದ್ದ ಇಬ್ಬರು ಐಎಎಸ್ ಅಧಿಕಾರಿಗಳ ಅಮಾನತು ವಾಪಸ್ ಪಡೆಯಲಾಗಿದೆ.

ಬೆಂಗಳೂರು ನಗರ ಜಿಲ್ಲಾಧಿಕಾರಿ ಶ್ರೀನಿವಾಸ್ ಹಾಗೂ ಬಿಬಿಎಂಪಿ ವಿಶೇಷ ಆಯುಕ್ತ ರಂಗಪ್ಪ ಅವರ ಅಮಾನತು ವಾಪಸ್ ಪಡೆದು ಇಬ್ಬರಿಗೂ ಸ್ಥಳ ನಿಯೋಜನೆ ಮಾಡಲಾಗಿದೆ. ಜಿಲ್ಲಾಧಿಕಾರಿಯಾಗಿದ್ದ ಶ್ರೀನಿವಾಸ್ ಅವರನ್ನು ರಾಜೀವ್ ಗಾಂಧಿ ಹೌಸಿಂಗ್ ಕಾರ್ಪೋರೇಶನ್ ಲಿಮಿಟೆಡ್‍ನ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಹಾಗೂ ರಂಗಪ್ಪ ಅವರನ್ನು ಕರ್ನಾಟಕ ರಾಜ್ಯ ಮಿನರಲ್ ಕಾರ್ಪೋರೇಶನ್ ಲಿಮಿಟೆಡ್‍ನ ಎಕ್ಸಿಕ್ಯೂಟಿವ್ ನಿರ್ದೇಶಕರನ್ನಾಗಿ ನಿಯೋಜನೆ ಮಾಡಲಾಗಿದೆ.

ಚಿಲುಮೆ ಸಂಸ್ಥೆಯ ಹಗರಣ ಹೊರ ಬರುತ್ತಿದ್ದಂತೆ ¸ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ಶ್ರೀನಿವಾಸ್ ಮತ್ತು ರಂಗಪ್ಪ ಅವರಿಗೆ ಪೊಲೀಸರು ನೋಟೀಸ ಜಾರಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು.

ಈ ಹೊಸ ಲಸಿಕೆ ಹಾಕಿಸಿಕೊಂಡರೆ ಜ್ವರ, ಮೈಕೈ ನೋವು ಬರಲ್ಲ

ಹೀಗಾಗಿ ಸರ್ಕಾರ ಇಬ್ಬರನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿತ್ತು. ಆದರೆ, ಆರೋಪಿ ಸ್ಥಾನದಲ್ಲಿದ್ದ ಇಬ್ಬರು ಐಎಎಸ್ ಅಧಿಕಾರಿಗಳಿಗೆ ನ್ಯಾಯಲಯ ಜಾಮೀನು ಮಂಜೂರು ಮಾಡಿತ್ತು.
ಇದೀಗ ಸರ್ಕಾರ ಐಎಎಸ್ ಅಧಿಕಾರಿಗಳ ಅಮಾನತು ಆದೇಶ ವಾಪಸ್ ಪಡೆದು ಅವರನ್ನು ಮತ್ತೆ ಸರ್ಕಾರಿ ಸೇವೆಗೆ ನಿಯೋಜನೆ ಮಾಡಿದೆ.

Voter ID Scam, two, IAS officers, Suspension, withdraw,

Articles You Might Like

Share This Article