ವೋಟರ್ ಐಡಿ ಹಗರಣ ಕಾಂಗ್ರೆಸ್‍ನವರಿಗೇ ತಿರುಗುಬಾಣವಾಗುತ್ತೆ : ಬೊಮ್ಮಾಯಿ

Social Share

ಬೆಂಗಳೂರು, ನ. 20- ಚುನಾವಣಾ ಆಯೋಗದ ನಿಯಮಗಳನ್ನು ಗಾಳಿಗೆ ತೂರಿ ಕಾಂಗ್ರೆಸ್ ಸರ್ಕಾರ ಚಿಲುಮೆ ಸಂಸ್ಥೆಗೆ ಆದೇಶವನ್ನು ನೀಡಿದ್ದು, ತನಿಖೆಯ ಮೂಲಕ ಎಲ್ಲ ಸತ್ಯಗಳು ಹೊರಬರಲಿವೆ. ಕಾಂಗ್ರೆಸ್‍ನವರ ಆರೋಪ ನಿರಾಧಾರವಾಗಿದ್ದು, ಈ ಪ್ರಕರಣ ಅವರಿಗೇ ತಿರುಗುಬಾಣವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಹದ್ದುಮೀರಿ ಅಧಿಕಾರ ದುರುಪಯೋಗ ಮಾಡಿಕೊಂಡಿದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದ ಅವಧಿಯಿಂದಲೂ ತನಿಖೆಯಾಗಬೇಕು ಎಂದು ಸೂಚನೆ ನೀಡಲಾಗಿದೆ ಎಂದರು.

ಕಳೆದ 2013 ರಿಂದ ಯಾವ ಆದೇಶಗಳನ್ನು ನೀಡಿದ್ದಾರೆ ಎಂಬ ಎಲ್ಲ ಸ್ಪಷ್ಟವಾದ ಸತ್ಯಗಳು ಹೊರಗೆ ಬರಲಿ ಎಂಬ ಉದ್ದೇಶದಿಂದ ತನಿಖೆಗೆ ಆದೇಶ ನೀಡಲಾಗಿದೆ. ಚಿಲುಮೆ ಸಂಸ್ಥೆಗೆ ಯಾವ ಉದ್ದೇಶದಿಂದ ಆದೇಶ ನೀಡಲಾಗಿತ್ತು ಎಂಬುದರ ಸತ್ಯಾಸತ್ಯತೆ ಜನರಿಗೆ ಗೊತ್ತಾಗಬೇಕು ಎಂದು ಹೇಳಿರು.

ಮಂಗಳೂರು ಆಟೋ ಸ್ಪೋಟಕ್ಕೆ ತುಮಕೂರು ರೈಲ್ವೆ ಸಿಬ್ಬಂದಿ ಹೆಸರು ಲಿಂಕ್..!

ನಮ್ಮ ಸರ್ಕಾರದ ಆದೇಶದಲ್ಲಿ ಮತದಾನದ ಜಾಗೃತಿ ಮೂಡಿಸುವ ಕಾರ್ಯಕ್ಕೆ ಆದೇಶ ನೀಡಲಾಗಿದ್ದು, ಚಿಲುಮೆ ಸಂಸ್ಥೆಗೆ ಯಾವುದೇ ರಾಜಕೀಯ ಪಕ್ಷದ ಜೊತೆ ಸಂಬಂಧವಿರಬಾರದು ಎಂಬ ಷರತ್ತನ್ನು ವಿಧಿಸಲಾಗಿದೆ. ಆದರೆ ಸಿದ್ದರಾಮಯ್ಯ ಅವರು ನೀಡಿರುವ ಆದೇಶದಲ್ಲಿ ಚುನಾವಣಾ ಆಯೋಗ ನಿರ್ವಹಿಸಬೇಕಾ ಮತ ಪರಿಷ್ಕರಣೆಯ ಕಾರ್ಯವನ್ನೇ ಸಂಸ್ಥೆಗೆ ನೀಡಿದ್ದಾರೆ ಎಂದು ಆರೋಪಿಸಿದರು.

ಚುನಾವಣಾ ಆಯೋಗ ನಿರ್ವಹಿಸಬೇಕಾದ ಕಾರ್ಯವನ್ನು ಖಾಸಗಿ ಸಂಸ್ಥೆಗೆ ವಹಿಸಿರುವುದು ಅಕ್ಷಮ್ಯ ಅಪರಾಧ. ಅವರ ಅವಧಿಯಲ್ಲಿ ತºಸೀಲ್ದಾರ್‍ರವರಿಗೆ ಬಿಎಲ್‍ಓಗಳ ನೇಮಕ ಮಾಡುವ ಆದೇಶವನ್ನೂ ನೀಡಿದ್ದಾರೆ. ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಸರ್ಕಾರದಲ್ಲಿ ಹದ್ದುಮೀರಿ ಅಧಿಕಾರದ ದುರುಪಯೋಗ ಮಾಡಲಾಗಿದೆ ಎಂದರು.

ಮತದಾರರ ಪರಿಷ್ಕರಣೆಯ ಕಾರ್ಯದಲ್ಲಿ ಮತದಾರರ ಹೆಸರನ್ನು ಸೇರಿಸುವುದು ಹಾಗೂ ಕೈಬಿಡುವುದು ಚುನಾವಣಾ ಆಯೋಗದ ಕೆಲಸವೇ ಹೊರತು ಸರ್ಕಾರದ್ದಲ್ಲ. ನಮ್ಮ ಸರ್ಕಾರದ ಮೇಲೆ ರಾಜಕೀಯ ಪ್ರೇರಿತವಾಗಿ ಆರೋಪ ಹೊರಿಸಲಾಗುತ್ತಿದೆ ಎಂದರು.

ಮೋದಿ ಆರ್‌ಎಸ್‌ಎಸ್‌ ನಿಯಂತ್ರಣದಲ್ಲಿ ಇಲ್ಲ : ಭಾಗವತ್

ಮತದಾರರ ವಿವರ ಪಡೆಯಲು ಏಜೆನ್ಸಿಯಾಗಿ ಸಚಿವರು ಬಳಸಿಕೊಂಡಿದ್ದಾರೆ ಎಂಬ ಆರೋಪದ ಬಗ್ಗೆ ಪ್ರತಿಕ್ರಿಯಿಸಿ, ಎಲ್ಲಾ ಪಕ್ಷಗಳವರು ಸಂಸ್ಥೆಗಳನ್ನು ಏಜೆನ್ಸಿಯಾಗಿ ಬಳಸಿಕೊಳ್ಳುತ್ತಾರೆ. ರಾಜಕೀಯ ಪಕ್ಷಗಳು ಸಮೀಕ್ಷೆಯನ್ನು ಮಾಡಿಸುತ್ತವೆ. ಇಲ್ಲಿ ಸರ್ಕಾರ ಯಾವ ರೀತಿಯ ಆದೇಶವನ್ನು ನೀಡಿದೆ ಎಂಬುದಷ್ಟೇ ಮುಖ್ಯ.

ನಮ್ಮ ಸರ್ಕಾರದ ಆದೇಶದಲ್ಲಿ ರಾಜಕೀಯ ಪಕ್ಷಗಳೊಂದಿಗೆ ಸಂಬಂಧವಿರಬಾರದು ಎಂಬ ಷರತ್ತು ವಿಧಿಸಲಾಗಿದೆ. ಅವರ ಆದೇಶದಲ್ಲಿ ಈ ಷರತ್ತನ್ನು ವಿಧಿಸಿಯೇ ಇಲ್ಲ ಮತ್ತು ಬಿಎಲಓ ನೇಮಕಾತಿಗೂ ಅನುಮತಿಯನ್ನು ಕಾನೂನುಬಾಹಿರವಾಗಿ ನೀಡಿದ್ದಾರೆ.

ಉನ್ನತ ಮಟ್ಟದ ತನಿಖೆ ಮಾಡಿಸಲಾಗುತ್ತದೆಯೇ ಎಂಬುದಕ್ಕೆ ಪ್ರತಿಕ್ರಿಯಿಸಿದ ಅವರು, ಈ ಮೊದಲು ಕೇವಲ 2022ರದ್ದು ತನಿಖೆ ಮಾಡಿಸಲು ಸೂಚಿಸಲಾಗಿತ್ತು. ಆದರೆ ಈಗ 2013 ರಿಂದ ತನಿಖೆ ಮಾಡಿಸಲು ಸೂಚಿಸಲಾಗಿದ್ದು, ಎಲ್ಲ ಸತ್ಯಗಳೂ ಹೊರಬರಲಿವೆ ಎಂದರು.

ಮಂಗಳೂರಿನ ಆಟೋ ಸ್ಪೋಟ ಪ್ರಕರಣ ಎನ್‍ಐಎಗೆ ಹಸ್ತಾಂತರ

ಮತದಾರರ ಹೆಸರನ್ನು ಕೈಬಿಟ್ಟಿರುವ ಆರೋಪ ನಿರಾಧಾರ: ಮತದಾರರನ್ನು ಪಟ್ಟಿಯಿಂದ ಕೈಬಿಡಲಾಗಿದೆ ಎಂಬುದು ಕಾಂಗ್ರೆಸ್ ನವರ ಆರೋಪವಾಗಿದೆ. 27 ಲಕ್ಷ ಮತದಾರರನ್ನು ಕೈಬಿಡಲಾಗಿದೆ ಎಂಬುದು ಶುದ್ಧ ಸುಳ್ಳು. ಶಿವಾಜಿನಗರ ಕ್ಷೇತ್ರದಲ್ಲಿ ಕೇವಲ 15000 ಹೆಸರನ್ನು ಹಾಗೂ ಕೆ.ಆರ್.ಪುರ, ಮಹದೇವಪುರಗಳಲ್ಲಿ ಕೇವಲ 45 ರಿಂದ 47 ಸಾವಿರ ಹೆಸರುಗಳನ್ನು ಕೈಬಿಡಲಾಗಿದೆ. ಆದ್ದರಿಂದ ಈ ಆರೋಪ ನಿರಾಧಾರ ಎಂದರು.

ಈ ಬಾರಿ ಚುನಾವಣಾ ಆಯೋಗವು ಕೃತಕ ಬುದ್ಧಿಮತ್ತೆ ಬಳಸಿ ಎರಡು ಪ್ರದೇಶದಲ್ಲಿ ಇರುವ ವೋಟರ್ ಐಡಿಗಳನ್ನು ತೆಗೆಯುವ ಕೆಲಸವನ್ನು ಮಾಡುತ್ತಿದ್ದಾರೆ. ಈ ರೀತಿ ನಕಲಿ ಮತದಾರರನ್ನು ತೆಗೆದರೆ ಮಾತ್ರ ನ್ಯಾಯಸಮ್ಮತವಾದ ಚುನಾವಣೆ ನಡೆಸಲು ಸಾಧ್ಯ. ಒಂದು ಪ್ರದೇಶದಲ್ಲಿದ್ದವರನ್ನು ಬೇರೆ ಯಾವುದೇ ಪ್ರದೇಶಕ್ಕೆ ಸೇರಿಸಿ ಮತ ಹಾಕಿಸುವ ಕಾಂಗ್ರೆಸ್‍ನವರ ತಂತ್ರ ಬಂದ್ ಆಗಲಿದೆ ಎಂಬ ಆತಂಕದಿಂದ ಈ ರೀತಿ ಹುಲ್ಲೇಬ್ಬಿಸಿದ್ದಾರೆ ಎಂದರು.

ಖಾಸಗಿ ಬಸ್ ಪಲ್ಟಿ : 40 ಮಂದಿಗೆ ಗಾಯ, 6 ಮಂದಿ ಸ್ಥಿತಿ ಗಂಭೀರ

ಕೇಂದ್ರ ಚುನಾವಣಾ ಆಯೋಗಕ್ಕೂ ಕಾಂಗ್ರೆಸ್ ದೂರು ನೀಡಲಿದೆ ಎಂಬುದಕ್ಕೆ ಉತ್ತರಿಸಿದ ಅವರು, ಯಾರಿಗೆ ಬೇಕಾದರೂ ದೂರು ನೀಡಲಿ, ನ್ಯಾಯ ಹಾಗೂ ಸತ್ಯ ಖಂಡಿತ ಹೊರಬರಲಿದೆ. ಅವರು ಎಬ್ಬಿಸಿರುವ ಈ ಪ್ರಕರಣ ಅವರಿಗೆ ತಿರುಗುಬಾಣವಾಗಲಿದೆ ಎಂದು ತಿಳಿಸಿದರು.

Articles You Might Like

Share This Article