ಮತದಾರರ ಪಟ್ಟಿ ಪರಿಷ್ಕರಣೆಗೆ ನಾಳೆ ವಿಶೇಷ ಅಭಿಯಾನ

Social Share

ಬೆಂಗಳೂರು,ನ.11- ಮತದಾರರ ಪಟ್ಟಿ ಪರಿಷ್ಕರಣೆಗೆ ನಾಳೆ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಭಾರತ ಚುನಾವಣಾಆಯೋಗದ ಸೂಚನೆ ಮೇರೆಗೆ ಈಗಾಗಲೇ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದ್ದು, ಡಿ.8ರವರೆಗೆ ಸಾರ್ವಜನಿಕರು ತಮ್ಮ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ.

ಈ ಸಮಯದಲ್ಲಿ ಮತದಾರರು ತಮ್ಮ ಹೆಸರು ಸೇರ್ಪಡೆ, ತಿದ್ದುಪತಿ, ಸ್ಥಳಾಂತರಗೊಂಡ ವಿವರ ನಮೂದಿಸಲು
ಅರ್ಜಿ ಸಲ್ಲಿಸಬಹುದಾಗಿದೆ. ಈ ರೀತಿ ಮತದಾರರ ಪಟ್ಟಿಯಲ್ಲಿನ ಬದಲಾವಣೆ ಮಾಡಿಕೊಳ್ಳಲು ಇಚ್ಚಿಸುವ ಮತದಾರರಿಗಾಗಿ ನಾಲ್ಕು ದಿನಗಳ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ.

ಮೊದಲ ಅಭಿಯಾನ ನಾಳೆ ನಡೆಯಲಿದೆ, ನ.20, ಡಿ.3 ಹಾಗೂ ಡಿ.4ರಂದು ಮತ್ತೆ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಈ ಅವಕಾಶ ಸದುಪಡಿಸಿಕೊಳ್ಳಬಹುದಾಗಿದೆ.

ಚೆನ್ನೈ- ಮೈಸೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಮೋದಿ ಚಾಲನೆ

ನಾಳೆ ನಡೆಯಲಿರುವ ವಿಶೇಷ ಅಭಿಯಾನದಂದು ಎಲ್ಲಾ ಮತದಾರರ ನೊಂದಾಣಾಧಿಕಾರಿಗಳು, ಸಹಾಯಕ ಮತದಾರರ ನೊಂದಣಾಧಿಕಾರಿಗಳು, ಬಿಎಲ್‍ಒಗಳು ಮತ್ತು ಬಿಎಲ್‍ಒ ಮೇಲ್ವಿಚಾರಕರು ಹಾಗೂ ಮತಗಟ್ಟೆ ಮಟ್ಟದ ಅಧಿಕಾರಿಗಳು ತಮ್ಮ ತಮ್ಮ ಮತಗಟ್ಟೆಗಳಲ್ಲಿ ಹಾಜರಿರಬೇಕು ಎಂದು ಸೂಚಿಸಲಾಗಿದೆ.

ಇದರ ಜತೆಗೆ ಮುಖ್ಯ ಚುನಾವಣಾದಿಕಾರಿಗಳು ಸೇರಿದಂತೆ ಎಲ್ಲಾ ಹಿರಿಯ ಅಧಿಕಾರಿಗಳು ಅಭಿಯಾನಕ್ಕೆ ಆಗಮಿಸಿ ಪರಿಶೀಲನೆ ನಡೆಸುವುದನ್ನು ಕಡ್ಡಾಯಗೊಳಿಸಲಾಗಿದೆ.

ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರನ ಎನ್‌ಕೌಂಟರ್‌

ಮತದಾರರ ಪಟ್ಟಿ ಪರಿಷ್ಕರಣೆಗೆ ನಡೆಸಲಾಗುತ್ತಿರುವ ವಿಶೇಷ ಅಭಿಯಾನದಲ್ಲಿ ಯಾವುದೇ ಲೋಪದೋಷಗಳು ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಿ ಪ್ರಜಾಪ್ರತಿನಿಧಿ ಕಾಯ್ದೆಯಡಿ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಅಪರ ಜಿಲ್ಲಾ ಚುನಾವಣಾಧಿಕಾರಿಗಳು ಎಚ್ಚರಿಸಿದ್ದಾರೆ.

Articles You Might Like

Share This Article