ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಮತದಾರರಿಗೆ ಕುಕ್ಕರ್ ಭಾಗ್ಯ

Social Share

ಬೆಂಗಳೂರು,ಜ.31- ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆ ರಾಜಕಾರಣಿಗಳು ಮತದಾರರ ಓಲೈಕೆಗೆ ನಡೆಸುತ್ತಿರುವ ಕಸರತ್ತುಗಳು ಒಂದೊಂದಾಗಿ ಬೆಳಕಿಗೆ ಬರುತ್ತಿದೆ. ಹೆಬ್ಬಾಳ ಶಾಸಕ ಭೈರತಿ ಸುರೇಶ್ ಮತದಾರರಿಗೆ ಟಿವಿ ಭಾಗ್ಯ ನೀಡಿರುವ ಬೆನ್ನಲ್ಲೆ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಬಹಿರಂಗವಾಗಿಯೇ ಮತದಾರರಿಗೆ ಕುಕ್ಕರ್ ಭಾಗ್ಯ ಕರುಣಿಸಿ ಮತ ಸೆಳೆಯಲು ಮುಂದಾಗಿದ್ದಾರೆ.

ಬಿಜೆಪಿ ಶಾಸಕರಾಗಿದ್ದರೂ ಪಕ್ಷದಿಂದ ಸ್ವಲ್ಪ ಅಂತರ ಕಾಯ್ದುಕೊಂಡೆ ಬಂದಿರುವ ಚಿಕ್ಕಪೇಟೆ ಶಾಸಕ ಉದಯ್ ಗರುಡಾಚಾರ್ ಅವರು ಮುಂಬರುವ ಚುನಾವಣೆಯಲ್ಲಿ ಮತ್ತೆ ಗೆದ್ದುಬಂದು ಶಾಸಕರಾಗುವ ಹೆಬ್ಬಯಕೆಯಿಂದ ಕ್ಷೇತ್ರದ ಮತದಾರರಿಗೆ ಕುಕ್ಕರ್ ನೀಡುತ್ತಿದ್ದಾರೆ.

ಈ ಹಿಂದೆ ಸಂಕ್ರಾತಿ ಹೆಸರಿನಲ್ಲಿ ಕೆಲವರಿಗೆ ಪೊಂಗಲ್ ಹೆಸರಿನಲ್ಲಿ ತಮಿಳರಿಗೆ ಕುಕ್ಕರ್ ಹಂಚಿಕೆ ಮಾಡಿದ್ದ ಶಾಸಕರು ಇದೀಗ ಅಲ್ಪಸಂಖ್ಯಾತರ ಓಲೈಕೆಗೆ ಮುಂದಾಗಿದ್ದಾರೆ. ಚಿಕ್ಕಪೇಟೆ ಕ್ಷೇತ್ರವೊಂದು ಮಿನಿ ಭಾರತದಂತಿದೆ. ಇಲ್ಲಿ ತಮಿಳು, ತೆಲುಗು, ಗುಜರಾತಿಗಳು, ರಾಜಸ್ಥಾನಿಗಳು ಹಾಗೂ ಅಲ್ಪಸಂಖ್ಯಾತರು ಸೇರಿದಂತೆ ನಾನಾ ಜನಾಂಗದ ಜನರು ವಾಸಿಸುತ್ತಿದ್ದಾರೆ.

ಭಾರತೀಯರ ಮೇಲೆ ಖಲಿಸ್ತಾನಿ ಉಗ್ರರ ದಾಳಿಗೆ ಖಂಡನೆ

ಈ ಕ್ಷೇತ್ರದಲ್ಲಿ ಯಾರೇ ಗೆಲುವು ಸಾಧಿಸಬೇಕಾದರೂ ಅಲ್ಪಸಂಖ್ಯಾತರ ಮತಗಳೇ ನಿರ್ಣಾಯಕ ಹೀಗಾಗಿ ಎಲ್ಲ ಪಕ್ಷದವರು ಅಲ್ಪಸಂಖ್ಯಾತರ ಓಲೈಕೆ ಮಾಡುವುದು ಮಾಮೂಲಾಗಿದೆ. ಈ ಅಂಶ ಅರಿತಿರುವ ಉದಯ್ ಗರುಡಾಚಾರ್ ಅವರು ಇದೀಗ ಕ್ಷೇತ್ರದಲ್ಲಿರುವ 30 ಸಾವಿರಕ್ಕೂ ಹೆಚ್ಚು ಅಲ್ಪ ಸಂಖ್ಯಾತರಿಗೆ ಕುಕ್ಕರ್ ವಿತರಣೆ ಮಾಡುವ ಮೂಲಕ ಅವರ ಮತಬ್ಯಾಂಕ್‍ಗೆ ಕೈ ಹಾಕಲು ಮುಂದಾಗಿದ್ದಾರೆ.

ಕಳೆದ ಐದು ವರ್ಷಗಳಿಂದ ಶಾಸಕರಾಗಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸದ ಶಾಸಕರು ಚುನಾವಣೆ ಸಂದರ್ಭದಲ್ಲಿ ಅಲ್ಪಸಂಖ್ಯಾತ ಮತದಾರರ ಓಲೈಕೆಗಾಗಿ ಕುಕ್ಕರ್ ನೀಡುತ್ತಿರುವ ಕ್ರಮಕ್ಕೆ ಬಿಜೆಪಿಗರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪಾಕ್ ಮಸೀದಿ ಸ್ಪೋಟದಲ್ಲಿ ಸತ್ತವರ ಸಂಖ್ಯೆ 80ಕ್ಕೆ ಏರಿಕೆ

ಹಿಂದಿನಿಂದಲೂ ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಲೆ ಬರುತ್ತಿರುವ ಉದಯ್ ಗರುಡಾಚಾರ್ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ಸಿಗುವುದು ಅನುಮಾನ ಎಂಬ ಮಾತುಗಳು ಕೇಳಿ ಬರುತ್ತಿರುವ ಸಂದರ್ಭದಲ್ಲೇ ಅವರು ಅಲ್ಪಸಂಖ್ಯಾತರ ಓಲೈಕೆಗೆ ಮುಂದಾಗಿರುವುದು ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

voters, cooker, gift, MLA,Uday Garudachar,

Articles You Might Like

Share This Article