ಚಿಲುವೆ ಸಂಸ್ಥೆಯ ಮತ್ತೊಬ್ಬ ಪ್ರಮುಖ ಆರೋಪಿ ಲೋಕೇಶ್ ಬಂಧನಕ್ಕೆ ತೀವ್ರ ಹುಡುಕಾಟ

Social Share

ಬೆಂಗಳೂರು,ನ.21- ಮತದಾರರ ವೈಯಕ್ತಿಕ ಮಾಹಿತಿ ಕಳುವು ಮಾಡಿದ ಆರೋಪಕ್ಕೆ ಗುರಿಯಾಗಿರುವ ಚಿಲುಮೆ ಸಂಸ್ಥೆ ಮುಖ್ಯಸ್ಥ ರವಿಕುಮಾರ್ ಬಂಧನವಾಗುತ್ತಿದ್ದಂತೆ ಮತ್ತೊಬ್ಬ ಪ್ರಮುಖ ಆರೋಪಿ ಲೋಕೇಶ್ ಬಂಧನಕ್ಕೆ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

ಚಿಲುಮೆ ಸಂಸ್ಥೆಯಲ್ಲಿ ಆಡಳಿತಾಧಿಕಾರಿಯಾಗಿದ್ದ ಲೋಕೇಶ್ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ನಾಪತ್ತೆಯಾಗಿದ್ದ ಆತನ ವಿರುದ್ಧ ಕಾಡುಗೋಡಿ ಹಾಗೂ ಹಲಸೂರು ಗೇಟ್ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿತ್ತು.

ಚಿಲುಮೆ ಸಂಸ್ಥೆಯ ಸಿಬ್ಬಂದಿಗಳಿಗೆ ಬಿಎಲ್‍ಓಗಳೆಂದು ಗುರುತಿನ ಚೀಟಿ ಮಾಡಿಕೊಟ್ಟ ಆರೋಪದ ಮೇಲೆ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದೂರಿನಲ್ಲಿ ಲೋಕೇಶ್ ಎ-1 ಆರೋಪಿಯಾಗಿದ್ದರೆ, ಹಲಸೂರು ಗೇಟ್ ಪೊಲೀಸ್ ಠಾಣೆಗೆ ಬಿಬಿಎಂಪಿ ವಿಶೇಷ ಆಯುಕ್ತ ರಂಗಪ್ಪ ಅವರು ನೀಡಿದ್ದ ದೂರಿನಲ್ಲಿ ಇದೇ ಲೋಕೇಶ್ ಎ-2 ಆರೋಪಿಯಾಗಿದ್ದಾನೆ.

ಭಯೋತ್ಪಾದನೆ ಕೃತ್ಯ ಎಸಗುವವರು ಯಾವುದೇ ಜಾತಿ, ಧರ್ಮರಾಗಿದ್ದರೂ ಎನ್‍ಕೌಂಟರ್ ಮಾಡಿ : ಈಶ್ವರಪ್ಪ

ಮತದಾರರ ವೈಯಕ್ತಿಕ ಮಾಹಿತಿ ಕಳುವು ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದ ಕೂಡಲೇ ಚಿಲುಮೆ ಸಂಸ್ಥೆ ಮುಖ್ಯಸ್ಥ ರವಿಕುಮಾರ್ ಹಾಗೂ ಲೋಕೇಶ್ ತಲೆ ಮರೆಸಿಕೊಂಡಿದ್ದರು. ಆರೋಪಿಗಳ ಬಂಧನಕ್ಕೆ ಕಾಡುಗೋಡಿ ಹಾಗೂ ಹಲಸೂರು ಗೇಟ್ ಪೊಲೀಸರ ವಿಶೇಷ ತಂಡಗಳನ್ನು ರಚನೆ ಮಾಡಲಾಗಿತ್ತು.

ಚಿಲುಮೆ ಸಂಸ್ಥೆಯ ಕೆಲವರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದ ಪೊಲೀಸರು ತಲೆ ಮರೆಸಿಕೊಂಡಿದ್ದ ಚಿಲುಮೆ ಸಂಸ್ಥೆ ಮುಖ್ಯಸ್ಥ ರವಿಕುಮಾರ್ ಅವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.

ಇಂಡೋನೇಷ್ಯಾದಲ್ಲಿ ಭೂಕಂಪ, 20 ಸಾವು, 300ಕ್ಕೂ ಹೆಚ್ಚು ಮಂದಿಗೆ ಗಾಯ

ಆದರೆ, ಕಾಡುಗೋಡಿ ಹಾಗೂ ಹಲಸೂರು ಗೇಟ್ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ದೂರಿನಲ್ಲಿ ಮತ್ತೊಬ್ಬ ಪ್ರಮುಖ ಆರೋಪಿಯಾಗಿರುವ ಲೋಕೇಶ್ ಇದುವರೆಗೂ ಯಾರ ಕೈಗೂ ಸಿಗದೆ ತಲೆಮರೆಸಿಕೊಂಡಿರುವುದು ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ.

ತುಂಬಾ ಭಯಾನಕವಾಗಿದೆ ಕುಕ್ಕರ್ ಕಿರಾತಕ ಶಾರೀಕ್ ಹಿನ್ನೆಲೆ

ಹೀಗಾಗಿ ತಲೆಮರೆಸಿ ಕೊಂಡಿರುವ ಲೋಕೇಶ್ ಪತ್ತೆಗೆ ಕಾಡುಗೋಡಿ ಹಾಗೂ ಹಲಸೂರು ಗೇಟ್ ಪೊಲೀಸರ ವಿಶೇಷ ತಂಡಗಳು ಶೋಧ ಮುಂದುವರೆಸಿವೆ. ತಲೆ ಮರೆಸಿಕೊಂಡಿರುವ ಲೋಕೇಶ್ ಬಂಧನವಾದರೆ ಮತದಾರರ ವೈಯಕ್ತಿಕ ಮಾಹಿತಿ ಕಳುವು ಮಾಡಿದ್ದಾರೆ ಎಂಬ ಪ್ರಕರಣಕ್ಕೆ ತಾರ್ಕಿಕ ಅಂತ್ಯ ದೊರೆಯುವ ಸಾಧ್ಯತೆಗಳಿವೆ ಎನ್ನಲಾಗಿದೆ.

Articles You Might Like

Share This Article