Tuesday, February 11, 2025
Homeರಾಜ್ಯನಾಳೆ ಮತದಾನ : ಮತಗಟ್ಟೆಗಳತ್ತ ತೆರಳುತ್ತಿರುವ ಚುನಾವಣಾ ಸಿಬ್ಬಂದಿ

ನಾಳೆ ಮತದಾನ : ಮತಗಟ್ಟೆಗಳತ್ತ ತೆರಳುತ್ತಿರುವ ಚುನಾವಣಾ ಸಿಬ್ಬಂದಿ

ಬೆಂಗಳೂರು,ಏ.25- ನಾಳೆ ಮತದಾನ ನಡೆಯಲಿರುವ ದಕ್ಷಿಣ ಕರ್ನಾಟಕದ 14 ವಿಧಾನಸಭಾ ಕ್ಷೇತ್ರಗಳ ಮತಗಟ್ಟೆಗಳಿಗೆ ಚುನಾವಣಾ ಸಿಬ್ಬಂದಿ ಹಾಗೂ ಭದ್ರತಾ ಸಿಬ್ಬಂದಿ ಇಂದು ಮಧ್ಯಾಹ್ನ ತೆರಳಿದರು.

ಇಂದು ಬೆಳಿಗ್ಗೆ ಆಯಾ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮಸ್ಟರಿಂಗ್ ಕೇಂದ್ರಗಳಲ್ಲಿ ಚುನಾವಣಾ ಸಿಬ್ಬಂದಿ ಸಮಾವೇಶಗೊಂಡು ನಿಗದಿಪಡಿಸಿದ ಮತಗಟ್ಟೆಗಳಿಗೆ ಮತಯಂತ್ರ ಹಾಗೂ ಇತರ ಸಾಮಗ್ರಿಗಳೊಂದಿಗೆ ತೆರಳಿದರು.

ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಕ್ಷೇತ್ರಗಳಲ್ಲಿ ಒಟ್ಟು 30,602 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

ಮತಗಟ್ಟೆಯ 200 ಮೀಟರ್ ದೂರದಲ್ಲಿ ಅಭ್ಯರ್ಥಿಗಳ ತಾತ್ಕಾಲಿಕ ಕಚೇರಿಗಳನ್ನು ಸ್ಥಾಪಿಸಲು ಅಭ್ಯರ್ಥಿಗಳಿಗೆ ಚುನಾವಣಾ ಆಯೋಗ ಅವಕಾಶ ಮಾಡಿಕೊಟ್ಟಿದೆ.

RELATED ARTICLES

Latest News