Monday, October 28, 2024
Homeಕ್ರೀಡಾ ಸುದ್ದಿ | Sportsದಕ್ಷಿಣ ಆಫ್ರಿಕಾ ವಿರುದ್ಧದ ಟ್ವೆಂಟಿ-20 ಸರಣಿಗೆ ಭಾರತ ತಂಡಕ್ಕೆ ವಿವಿಎಸ್ ಲಕ್ಷ್ಮಣ್ ಹೆಡ್ ಕೋಚ್

ದಕ್ಷಿಣ ಆಫ್ರಿಕಾ ವಿರುದ್ಧದ ಟ್ವೆಂಟಿ-20 ಸರಣಿಗೆ ಭಾರತ ತಂಡಕ್ಕೆ ವಿವಿಎಸ್ ಲಕ್ಷ್ಮಣ್ ಹೆಡ್ ಕೋಚ್

VVS Laxman set to be India's head coach in South Africa

ಬೆಂಗಳೂರು, ಅ.28- ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ 4 ಪಂದ್ಯಗಳ ಟ್ವೆಂಟಿ-20 ಕ್ರಿಕೆಟ್ ಸರಣಿ ನಿಮಿತ್ತ ಗೌತಮ್ ಗಂಭೀರ್ ಬದಲಿಗೆ ವಿವಿಎಸ್ ಲಕ್ಷ್ಮಣ್ ಅವರು ಹಂಗಾಮಿ ಹೆಡ್ಕೋಚ್ ಆಗಿ ತಂಡದೊಂದಿಗೆ ಪ್ರಯಾಣ ಬೆಳೆಸಲಿದ್ದಾರೆ.

ನವೆಂಬರ್ 22 ರಿಂದ ಕಾಂಗರೂ ನಾಡಿನಲ್ಲಿ ಟೀಮ್ ಇಂಡಿಯಾ ಹಾಗೂ ಆಸ್ಟ್ರೇಲಿಯಾ ನಡುವೆ ಪ್ರತಿಷ್ಠಿತ ಬಾರ್ಡರ್- ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಐದು ಪಂದ್ಯಗಳ ಟೆಸ್ಟ್ ಸರಣಿ ಆರಂಭಗೊಳ್ಳುವುದರಿಂದ ಹೆಡ್ ಕೋಚ್ ಗೌತಮ್ ಗಂಭೀರ್ ಅವರು ರೋಹಿತ್ ಶರ್ಮ ಸಾರಥ್ಯದ ತಂಡದೊಂದಿಗೆ ಇರುವುದು ಅವಶ್ಯಕವಾಗಿದೆ.

ನವೆಂಬರ್ 8, 10, 13 ಹಾಗೂ 15 ರಂದು ಭಾರತ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧ 4 ಪಂದ್ಯಗಳ ಚುಟುಕು ಸರಣಿ  ನಡೆಯಲಿದೆ.

RELATED ARTICLES

Latest News