ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಸೂರ್ಯ ಸಿಡಿದೇಳಬೇಕಿತ್ತು: ಜಾಫರ್

Social Share

ನವದೆಹಲಿ,ನ.15- ಈ ಬಾರಿಯ ಟಿ-20 ವಿಶ್ವಕಪ್ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಅವರು ತಮ್ಮ ಅದ್ಭುತ ಬ್ಯಾಟಿಂಗ್ ಮೂಲಕ ಗಮನ ಸೆಳೆದರೂ ಪ್ರಮುಖ ಪಂದ್ಯಗಳಲ್ಲಿ ಅವರ ಬ್ಯಾಟ್‍ನಿಂದ ರನ್ ಹರಿದುಬರಲಿಲ್ಲ ಎಂದು ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ ವಾಸೀಂ ಜಾಫರ್ ಅಭಿಪ್ರಾಯಪಟ್ಟಿದ್ದಾರೆ.

ಭಾರತ ತಂಡಕ್ಕೆ ನಿರ್ಣಾಯಕ ಪಂದ್ಯಗಳಾಗಿದ್ದ ಪಾಕಿಸ್ತಾನ ಮತ್ತು ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಅಬ್ಬರಿಸಲಿಲ್ಲ ಹಾಗಂತ ಅವರ ಸಾಧನೆಯನ್ನು ಅಲ್ಲಗಳೆಯುವಂತಿಲ್ಲ ಎಂದು ಜಾಫರ್ ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ಭಾರತ ಆಡಿದ ಆರು ಪಂದ್ಯಗಳಲ್ಲಿ ಸೂರ್ಯಕುಮಾರ್ ಅವರು, 59.75 ಸರಾಸರಿಯಲ್ಲಿ 239 ರನ್ ಗಳಿಸುವ ಮೂಲಕ ವಿಶ್ವಕಪ್‍ನಲ್ಲಿ ಮೂರನೆ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿ ಗುರುತಿಸಿಕೊಂಡಿದ್ದಾರೆ.

ಚೀನಾದೊಂದಿಗೆ ಯಾವುದೇ ಶೀತಲ ಸಮರ ಇಲ್ಲ : ಬಿಡೆನ್

ಆದರೂ ಅವರು ನಿರ್ಣಾಯಕ ಪಂದ್ಯಗಳಾಗಿದ್ದ ಪಾಕ್ ಮತ್ತು ಇಂಗ್ಲೆಂಡ್ ವಿರುದ್ಧದ ಪಂದ್ಯಗಳಲ್ಲಿ ಯಾದವ್ ಉತ್ತಮ ಪ್ರದರ್ಶನ ನೀಡಬೇಕಿತ್ತು. ಒಂದು ವೇಳೆ ಅವರು ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಉತ್ತಮ ಆಟ ಪ್ರದರ್ಶಿಸಿದ್ದರೆ ಭಾರತ ಫೈನಲ್ ತಲುಪಲು ಸಾಧ್ಯವಾಗುತ್ತಿತ್ತು ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಅವರು ಹೇಳಿದ್ದಾರೆ.

ಜಿ-20 ಶೃಂಗಸಭೆಗೆ ಆಗಮಿಸಿದ್ದ ಕಾಂಬೋಡಿಯಾ ಪ್ರಧಾನಿಗೆ ಕೊರೋನಾ ಪಾಸಿಟಿವ್

ಪಾಕಿಸ್ತಾನ ವಿರುದ್ಧದ ಭಾರತದ ಟಿ20 ವಿಶ್ವಕಪ್ ಅಭಿಯಾನದ ಆರಂಭಿಕ ಪಂದ್ಯದಲ್ಲಿ ಸೂರ್ಯಕುಮಾರ್ 15 ರನ್ ಗಳಿಸಿದರು, ಆದರೆ ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಅವರು ಕೇವಲ 14 ರನ್ ಗಳಿಸಿದ್ದರು.

Articles You Might Like

Share This Article