ವರ್ಷಕ್ಕೊಮ್ಮೆ ನೀರಿನ ದರ ಏರಿಸಲು ಜಲಮಂಡಳಿ ಪ್ರಸ್ತಾಪ

Social Share

ಬೆಂಗಳೂರು, ನ.17- ವಿದ್ಯುತ್ ದರ ಪರಿಷ್ಕರಣೆ ಮಾದರಿಯಲ್ಲಿ ಬೆಂಗಳೂರಿನ ನೀರಿನ ದರ ಪರಿಷ್ಕರಣೆ ಮಾಡಲು ಅವಕಾಶ ನೀಡಬೇಕೆಂದು ಜಲಮಂಡಳಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಜನರಿಗೆ ಮತ್ತೊಂದು ದರ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ಇದೆ.

ರಾಜಧಾನಿ ಬೆಂಗಳೂರಿನಲ್ಲಿ ವರ್ಷಕ್ಕೊಮ್ಮೆ ನೀರಿನ ದರ ಪರಿಷ್ಕರಿ ಸಲು ಅವಕಾಶ ನೀಡಬೇಕೆಂದು ಬೆಂಗಳೂರು ಜಲಮಂಡಳಿಯು ಸರ್ಕಾರಕ್ಕೆ ಪ್ರಸ್ತಾವನೆ ನೀಡಿದೆ ಎಂದು ತಿಳಿದು ಬಂದಿದೆ.

ಮಂಡಳಿಯ ಆಡಳಿತ ನಿರ್ವಹಣಾ ವೆಚ್ಚ ಸರಿದೂಗಿಸುವುದು ಕಷ್ಟಸಾಧ್ಯವಾಗಿದೆ. ಹೀಗಾಗಿ ವರ್ಷಕ್ಕೊಮ್ಮೆಯಾದರೂ ನೀರಿನ ದರ ಪರಿಷ್ಕರಣೆಗೆ ಅವಕಾಶ ನೀಡಬೇಕೆಂದು ಜಲಮಂಡಳಿಯ ಪ್ರಸ್ತಾಪವಾಗಿದ್ದು, ಸದ್ಯ ಈಗ ಅದು ರಾಜ್ಯ ಸರ್ಕಾರದ ಮುಂದಿದೆ.

ಉಮೇಶ್ ಕತ್ತಿ, ಆನಂದ ಮಾಮನಿ ಕ್ಷೇತ್ರಗಳಿಗೆ ಅಭ್ಯರ್ಥಿಗಳಿಲ್ಲದೆ ಹೆಣಗಾಡುತ್ತಿರುವ ಬಿಜೆಪಿ

ಈ ಪ್ರಸ್ತಾವಕ್ಕೆ ರಾಜ್ಯ ಸರ್ಕಾರ ಹಸಿರು ನಿಶಾನೆ ತೋರಿದರೆ ವಿದ್ಯುತ್ ಬಿಲ್ ಮಾದರಿಯಲ್ಲಿ ನೀರಿನ ಬಿಲ್ ಸಹ ಹೆಚ್ಚಾಗುತ್ತದೆ. ಪ್ರತಿ ವರ್ಷವೂ ನೀರಿನ ದರ ಹೆಚ್ಚಳಕ್ಕೆ ಅವಕಾಶ ಕಲ್ಪಿಸಿದಂತಾಗುತ್ತದೆ.

2014 ಅಕ್ಟೋಬರ್ 20 ರಿಂದ ಈ ವರೆಗೆ ಕಾವೇರಿ ನೀರಿನ ದರ ಪರಿಷ್ಕರಣೆಯಾಗಿಲ್ಲ. ಆದರೆ, ವಿದ್ಯುತ್ ದರ 10 ಬಾರಿ ಪರಿಷ್ಕರಣೆಯಾಗಿದೆ. ಇದನ್ನು ಪರಿಗಣಿಸಿ ನಾವು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ ಎಂದು ಜಲಮಂಡಳಿ ತಿಳಿಸಿದೆ.

ನೀರಿನ ದರ ಹೆಚ್ಚಿಸಬೇಕೆಂದು ಕಳೆದ ಜನವರಿಯಲ್ಲಿ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಆದರೆ, ಸರ್ಕಾರ ನಮ್ಮ ಪ್ರಸ್ತಾವನೆಯನ್ನು ತಳ್ಳಿ ಹಾಕಿತ್ತು.ಎಂಟು ವರ್ಷಗಳ ಬಳಿಕ ನೀರಿನ ದರ ಏರಿಕೆಗೆ ಮತ್ತೆ ಪ್ರಸ್ತಾವನೆ ಸಲ್ಲಿಸಿದ್ದರೂ ಕೂಡ ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರ ದರ ಏರಿಕೆಗೆ ಒಪ್ಪಿರಲಿಲ್ಲ.

ಈಗ ನಿರ್ವಹಣಾ ವೆಚ್ಚ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನೀರಿನ ದರ ಏರಿಸಬೇಕೆಂಬ ಪ್ರಸ್ತಾವನೆ ಸಲ್ಲಿಸಲಾಗಿದೆ.ಹಾಲಿನ ದರ ಏರಿಕೆಗೆ ಸರ್ಕಾರ ಸಹಮತ ವ್ಯಕ್ತಪಡಿಸಿಲ್ಲ. ನೀರಿನ ದರ ಏರಿಕೆ ಶಿಫಾರಸಿಗೆ ಸರ್ಕಾರ ಯಾವ ರೀತಿ ಸ್ಪಂದಿಸುತ್ತದೆ ಎಂಬುದು ಕುತೂಹಲ ಮೂಡಿಸಿದೆ.

#WaterBoard, #proposal #Increase, #WaterRate, #Everyyear,

Articles You Might Like

Share This Article