Thursday, December 5, 2024
Homeರಾಷ್ಟ್ರೀಯ | Nationalವಯನಾಡಿನಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಾಂಕಾ ವಾದ್ರಾ

ವಯನಾಡಿನಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಾಂಕಾ ವಾದ್ರಾ

Wayanad bypoll: Priyanka Gandhi files nomination for electoral debut

ವಯನಾಡ್‌,ಅ. 23 (ಪಿಟಿಐ) ಕಾಂಗ್ರೆಸ್‌‍ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮುಂಬರುವ ವಯನಾಡು ಲೋಕಸಭಾ ಉಪಚುನಾವಣೆಗೆ ಇಂದು ನಾಮಪತ್ರ ಸಲ್ಲಿಸಿದರು.ಪ್ರಿಯಾಂಕಾ ನಿನ್ನೆ ರಾತ್ರಿ ತನ್ನ ತಾಯಿ ಹಾಗೂ ಕಾಂಗ್ರೆಸ್‌‍ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೊಂದಿಗೆ ಬೆಟ್ಟದ ಜಿಲ್ಲೆಗೆ ಆಗಮಿಸಿದರು.

ಬಳಿಕ ಕಾಂಗ್ರೆಸ್‌‍ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಮತ್ತು ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಜಿಲ್ಲೆಗೆ ಆಗಮಿಸಿದರು. ಪ್ರಿಯಾಂಕಾ ಅವರು ಜಿಲ್ಲಾಧಿಕಾರಿಗಳ ಮುಂದೆ ನಾಮಪತ್ರ ಸಲ್ಲಿಸುವಾಗ ಅವರ ಜೊತೆಗಿದ್ದರು.ಅವರಲ್ಲದೆ, ಕಾಂಗ್ರೆಸ್‌‍ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಹಿರಿಯ ಎಐಸಿಸಿ ನಾಯಕರು ಸಹ ಪ್ರಿಯಾಂಕಾಗೆ ಬೆಂಬಲ ಸೂಚಿಸಿದರು.

ನಾಮಪತ್ರ ಸಲ್ಲಿಸುವ ಮುನ್ನ ಪ್ರಿಯಾಂಕಾ ಅವರು ತಮ ಸಹೋದರ ರಾಹುಲ್‌ ಗಾಂಧಿ ಅವರೊಂದಿಗೆ ಕಲ್ಪೆಟ್ಟಾದಲ್ಲಿ ಬೆಳಗ್ಗೆ 11 ಗಂಟೆಗೆ ರೋಡ್‌ ಶೋ ನಡೆಸಿದರು.ಪ್ರಿಯಾಂಕಾ ಅವರು ಎಲ್‌ಡಿಎಫ್‌ನ ಸತ್ಯನ್‌ ಮೊಕೇರಿ ಮತ್ತು ಬಿಜೆಪಿಯ ನವ್ಯಾ ಹರಿದಾಸ್‌‍ ವಿರುದ್ಧ ಕಣಕ್ಕಿಳಿದಿದ್ದಾರೆ.

ವಯನಾಡ್‌ ಲೋಕಸಭಾ ಕ್ಷೇತ್ರ ಮತ್ತು ರಾಯ್‌ ಬರೇಲಿ ಕ್ಷೇತ್ರದಿಂದ ಗೆಲುವು ಸಾಧಿಸಿದ ರಾಹುಲ್‌ ಗಾಂಧಿ ಅವರು ವಯನಾಡ್‌ ತೆರವು ಮಾಡಲು ನಿರ್ಧರಿಸಿದ ನಂತರ ವಯನಾಡ್‌ ಲೋಕಸಭಾ ಸ್ಥಾನಕ್ಕೆ ಉಪಚುನಾವಣೆ ಅನಿವಾರ್ಯವಾಗಿದೆ.

ಪ್ರಿಯಾಂಕಾ ಗಾಂಧಿ ಬಹುಮತದಿಂದ ಗೆಲುವು :
ಪ್ರಿಯಾಂಕ ಗಾಂಧಿ ಅವರು ಅತ್ಯಂತ ಬಹುಮತದಿಂದ ಈ ಕ್ಷೇತ್ರದಲ್ಲಿ ಜಯ ಗಳಿಸುವುದು ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ವ್ಯಕ್ತಪಡಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಮ ವಿರೋಧಿ. ಬಿಜೆಪಿ ಸೋಲಿಸಲು ಎಲ್ಲಾ ಜಾತ್ಯತೀತ ಶಕ್ತಿ ಮತ್ತು ಮೌಲ್ಯಗಳೊಂದಿಗೆ ನಾವು ಜೊತೆ ಸೇರುತ್ತೇವೆ. ಬಿಜೆಪಿ ಸೋಲಿಸಿ ದೇಶ ಉಳಿಸುವುದು ನಮ ಮೊದಲ ಗುರಿ ಎಂದರು.

ರಾಹುಲ್ ಗಾಂಧಿ ಅವರ ರಾಜೀನಾಮೆಯಿಂದ ತೆರವಾಗಿರುವ ಕ್ಷೇತ್ರದಲ್ಲಿ ಪ್ರಿಯಾಂಕ ಗಾಂಧಿ ಅವರ ಸ್ಫರ್ಧೆಯ ಪರಿಣಾಮ ಏನಾಗಿರಬಹುದು ಎನ್ನುವ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಪ್ರಿಯಾಂಕ ಗಾಂಧಿ ಅವರು ಅತ್ಯಂತ ಬಹುಮತದಿಂದ ಈ ಕ್ಷೇತ್ರದಲ್ಲಿ ಜಯಗಳಿಸುವುದು ಶತಸಿದ್ಧ ಎಂದು ತಿಳಿಸಿದರು.

RELATED ARTICLES

Latest News