Friday, September 20, 2024
Homeರಾಷ್ಟ್ರೀಯ | Nationalಭೂಕುಸಿತದಿಂದ ತತ್ತರಿಸಿದ ವಯನಾಡಿನಲ್ಲಿ ಪ್ರಧಾನಿ ಮೋದಿ ವೈಮಾನಿಕ ಸಮೀಕ್ಷೆ

ಭೂಕುಸಿತದಿಂದ ತತ್ತರಿಸಿದ ವಯನಾಡಿನಲ್ಲಿ ಪ್ರಧಾನಿ ಮೋದಿ ವೈಮಾನಿಕ ಸಮೀಕ್ಷೆ

ತಿರುವನಂತಪುರಂ,ಆ.10- ಶತಮಾನದಲ್ಲೇ ಕಂಡು ಕೇಳರಿಯದ ಭೀಕರ ಭೂಕುಸಿತಕ್ಕೆ ಸಾಕ್ಷಿಯಾಗಿದ್ದ ದೇವರನಾಡು ಕೇರಳದ ವಯನಾಡಿನಲ್ಲಿ ಪ್ರಧಾನಿ ನರೇಂದ್ರಮೋದಿ ಅವರು ಇಂದು ವೈಮಾನಿಕ ಸಮೀಕ್ಷೆ ನಡೆಸಿದರು.

ವಯನಾಡಿನಲ್ಲಿ ಭೂಕುಸಿತಕ್ಕೆ ತತ್ತರಿಸಿ ಹೋಗಿದ್ದ ಚುರುಲ್‌ಮಲ, ಮುಂಡಕೈ, ಪುಂಚಿನಿಮಟ್ಟಂ ಸೇರಿದಂತೆ ಮತ್ತಿತರ ಕಡೆ ಕೇರಳದ ರಾಜ್ಯಪಾಲ ಹರೀಫ್‌ ಮೊಹಮದ್‌ ಖಾನ್‌, ಮುಖ್ಯಮಂತ್ರಿ ಪಿಣರಾಯ್‌ ವಿಜಯನ್‌, ಕೇಂದ್ರ ಸಚಿವ ಸುರೇಶ್‌ ಗೋಪಿ ಸೇರಿದಂತೆ ಮತ್ತಿತರ ಜೊತೆ ಒಂದು ಗಂಟೆಗೂ ಹೆಚ್ಚು ಕಾಲ ವೈಮಾನಿಕ ಸಮೀಕ್ಷೆ ನಡೆಸಿದರು.

ಬೆಳಗ್ಗೆ ನವದೆಹಲಿಯಿಂದ ವಿಶೇಷ ವಿಮಾನದ ಮೂಲಕ ಕಣ್ಣೂರಿಗೆ ಬಂದ ಮೋದಿ ಅವರನ್ನು ವಿಮಾನ ನಿಲ್ದಾಣದಲ್ಲಿ ಸಿಎಂ ಪಿಣರಾಯ್‌ ವಿಜಯನ್‌, ರಾಜ್ಯಪಾಲರು ಮತ್ತಿತರ ಅಧಿಕಾರಿಗಳು ಬರ ಮಾಡಿಕೊಂಡರು.ನಂತರ ಭಾರತೀಯ ವಾಯುಪಡೆಗೆ ಸೇರಿದ ಹೆಲಿಕಾಪ್ಟರ್‌ನಲ್ಲಿ ಭೂಕುಸಿತದಿಂದ ಉಂಟಾದ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ವೈಮಾನಿಕ ಸಮೀಕ್ಷೆ ಬಳಿಕ ಮೋದಿಯವರು ಸಂತ್ರಸ್ತರನ್ನು ಖುದ್ದು ಭೇಟಿಯಾಗಿ ಸಮಸ್ಯೆಗಳನ್ನು ಆಲಿಸಿದರು. ನಂತರ ನಿರಾಶ್ರಿತರ ಶಿಬಿರ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳು ಭೇಟಿ ಕೊಟ್ಟು ಅವರ ಆರೋಗ್ಯ ಸ್ಥಿತಿಯನ್ನು ವಿಚಾರಿಸಿಕೊಂಡರು.

ಬಳಿಕ ಈ ಪ್ರದೇಶದಲ್ಲಿ ಪುನರ್ವಸತಿ ಪ್ರಯತ್ನಗಳ ಮೇಲ್ವಿಚಾರಣೆಯನ್ನು ನಡೆಸಿದರು.ವಿಪತ್ತು ಪೀಡಿತ ಪ್ರದೇಶದಲ್ಲಿ ಪುನರ್ವಸತಿ ಮತ್ತು ಪರಿಹಾರ ಕಾರ್ಯಗಳಿಗಾಗಿ ಕೇರಳ ಸರ್ಕಾರ ಕೇಂದ್ರಕ್ಕೆ 2,000 ಕೋಟಿ ರೂ.ಗಳ ಸಹಾಯಧನ ಒದಗಿಸುವಂತೆ ಮನವಿ ಮಾಡಿದ ಬೆನ್ನಲ್ಲೇ ಪ್ರಧಾನಿಯವರ ಈ ಭೇಟಿ ನಿರೀಕ್ಷೆ ಮೂಡಿಸಿದೆ.

ದುರಂತ ಪೀಡಿತ ಸ್ಥಳಗಳ ಭೇಟಿಯ ನಂತರ ನಡೆದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ ಪ್ರಧಾನಿ ಮೋದಿ ರಕ್ಷಣಾ ಕಾರ್ಯಾಚರಣೆ ಮತ್ತು ಪುನರ್ವಸತಿಗಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಿದರು.

ಜುಲೈ 30ರಂದು ವಯನಾಡಿನ ಮೆಪ್ಪಾಡಿ ಪ್ರದೇಶದ ಮುಂಡಕೈಯಲ್ಲಿ ಭೂಕುಸಿತ ಸಂಭವಿಸಿ ಅಪಾರ ಜೀವ ಹಾನಿ ಮತ್ತು ವ್ಯಾಪಕ ನಾಶನಷ್ಟಕ್ಕೆ ಉಂಟಾಗಿದೆ. ದುರಂತದಲ್ಲಿ ಮೃತರ ಸಂಖ್ಯೆ 400 ದಾಟಿದೆ. ಕೇರಳದಲ್ಲಿ ನಡೆದ ಅತೀ ಭೀಕರ ದುರಂತಗಳಲ್ಲಿ ಇದೂ ಒಂದು ಎನಿಸಿಕೊಂಡಿದೆ.

ವಯನಾಡಿನ ಮಾಜಿ ಸಂಸದ, ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಭೂಕುಸಿತ ಪ್ರದೇಶಕ್ಕೆ ಭೇಟಿ ನೀಡುತ್ತಿರುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಅರ್ಪಿಸಿದ್ದು, ಭೇಟಿಯ ನಂತರ ಪ್ರಧಾನಿ ವಯನಾಡ್‌ ಭೂಕುಸಿತವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುತ್ತಾರೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ.

ಮೋದಿ ಜೀ, ಭೀಕರ ದುರಂತದ ಬಗ್ಗೆ ವೈಯಕ್ತಿಕವಾಗಿ ಅವಲೋಕನ ಮಾಡಲು ವಯನಾಡ್‌ಗೆ ಭೇಟಿ ನೀಡುತ್ತಿರುವುದಕ್ಕಾಗಿ ಧನ್ಯವಾದಗಳು. ಇದೊಂದು ಒಳ್ಳೆಯ ನಿರ್ಧಾರ. ಪ್ರಧಾನಿ ಒಮೆ ವಿನಾಶದ ಪ್ರಮಾಣವನ್ನು ನೇರವಾಗಿ ನೋಡಿದ ನಂತರ, ಅವರು ಅದನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ಎಕ್‌್ಸನಲ್ಲಿ ಬರೆದುಕೊಂಡಿದ್ದಾರೆ.

RELATED ARTICLES

Latest News