ಮೂಲಸೌಕರ್ಯ ಅಭಿವೃದ್ಧಿಗೆ ಪ್ರಮುಖ ಆಧ್ಯತೆ : ಮೋದಿ

Social Share

ನವದೆಹಲಿ,ಮಾ.4-ಮುಂಬರುವ 2047ರ ವೇಳೆಗೆ ನಮ್ಮ ದೇಶ ಅಭಿವೃದ್ಧಿ ಹೊಂದಿದ ದೇಶವಾಗಲು ಮೂಲಸೌಕರ್ಯ ಅಭಿವೃದ್ಧಿಯನ್ನು ಆರ್ಥಿಕತೆಯ ಪ್ರೇರಕ ಶಕ್ತಿ ಎಂದು ಕೇಂದ್ರ ಸರ್ಕಾರ ಪರಿಗಣಿಸುತ್ತದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ಮೂಲಸೌಕರ್ಯ ಮತ್ತು ಹೂಡಿಕೆ ಕುರಿತು ಬಜೆಟ್ ನಂತರದ ವೆಬ್‍ನಾರ್ ಅನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ವರ್ಷದ ಬಜೆಟ್ ದೇಶದ ಮೂಲಸೌಕರ್ಯ ಕ್ಷೇತ್ರದ ಬೆಳವಣಿಗೆಗೆ ಹೊಸ ಶಕ್ತಿಯನ್ನು ನೀಡುತ್ತದೆ ಎಂದು ಹೇಳಿದರು.

ನಾವು ಮೂಲಸೌಕರ್ಯ ಅಭಿವೃದ್ಧಿಯನ್ನು ಆರ್ಥಿಕತೆಯ ಪ್ರೇರಕ ಶಕ್ತಿ ಎಂದು ಪರಿಗಣಿಸುತ್ತೇವೆ; ಈ ಮಾರ್ಗವನ್ನು ಅನುಸರಿಸುವ ಮೂಲಕ ಭಾರತವು 2047 ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಗುರಿಯನ್ನು ಸಾಧಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು.

ಇಬ್ಬರು ಉಗ್ರರಿಗೆ ಜಾಮೀನು ನೀಡಿದ ಅಲಹಾಬಾದ್ ಹೈಕೋರ್ಟ್

ಈಗ ಈ ಅಭಿವೃದ್ಧಿಯ ವೇಗವನ್ನು ಹೆಚ್ಚಿಸುವ ಮತ್ತು ಉನ್ನತ ಗೇರ್‍ನಲ್ಲಿ ಚಲಿಸುವ ಅವಶ್ಯಕತೆಯಿದೆ ಮತ್ತು ಇದರಲ್ಲಿ ಪ್ರಧಾನ ಮಂತ್ರಿ ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಯೋಜನೆ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ ಎಂದು ಹೇಳಿದರು.

ರಸ್ತೆಗಳು, ರೈಲ್ವೆಗಳು, ಬಂದರುಗಳು ಮತ್ತು ವಿಮಾನ ನಿಲ್ದಾಣಗಳಂತಹ ಎಲ್ಲಾ ಕ್ಷೇತ್ರಗಳಲ್ಲಿ ಆಧುನಿಕ ಮೂಲಸೌಕರ್ಯಗಳನ್ನು ರಚಿಸಲು ಸರ್ಕಾರ ಕೆಲಸ ಮಾಡುತ್ತಿದೆ ಎಂದು ಅವರು ಹೇಳಿದರು.

ಸರ್ಕಾರಿ ಇಂಧನ ಸಂಗ್ರಹಣ ಡಿಪೋದಲ್ಲಿ ಅಗ್ನಿ ಅವಘಡ, 16 ಮಂದಿ ಸಾವು

ಇದು ವ್ಯವಹಾರಗಳ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸಲು ಮತ್ತು ಲಾಜಿಸ್ಟಿಕ್ಸ್ ವೆಚ್ಚವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ.

consider, infrastructure, development, , driving, force, economy, PM Modi,

Articles You Might Like

Share This Article