Wednesday, December 4, 2024
Homeರಾಜ್ಯತಂಬಾಕು ಬೆಳೆಗೆ ಬೆಂಬಲ ಬೆಲೆ ನೀಡಲು ಮನವಿ ಸಲ್ಲಿಸಿದ್ದೇವೆ : ನಿಖಿಲ್‌ ಕುಮಾರಸ್ವಾಮಿ

ತಂಬಾಕು ಬೆಳೆಗೆ ಬೆಂಬಲ ಬೆಲೆ ನೀಡಲು ಮನವಿ ಸಲ್ಲಿಸಿದ್ದೇವೆ : ನಿಖಿಲ್‌ ಕುಮಾರಸ್ವಾಮಿ

We have submitted a request to provide support price for tobacco crop: Nikhil Kumaraswamy

ನವದೆಹಲಿ, ಡಿ.3-ರಾಜ್ಯದ ತಂಬಾಕು ಬೆಳೆಯನ್ನು ಪ್ರಧಾನ ಮಂತ್ರಿ ಫಸಲ್‌ ಭೀಮಾ ಯೋಜನೆ ವ್ಯಾಪ್ತಿಗೆ ತರಬೇಕು ಹಾಗೂ ತಂಬಾಕಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಜೆಡಿಎಸ್‌‍ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರು ಹೇಳಿದ್ದಾರೆ.

ನವದೆಹಲಿಯಲ್ಲಿ ನಿನ್ನೆ ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವ ಪಿಯೂಷ್‌ ಗೋಯಲ್‌ ಅವರನ್ನು ಭೇಟಿ ಮಾಡಿ ಈ ಬಗ್ಗೆ ಮನವಿ ಸಲ್ಲಿಸಲಾಯಿತು. ನಮ್ಮ ಮನವಿಗೆ ಕೇಂದ್ರ ಸಚಿವರು ಸಕಾರಾತಕವಾಗಿ ಸ್ಪಂದಿಸಿದ್ದಾರೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬೆಲೆ ಕುಸಿತ ಸೇರಿದಂತೆ ಹಲವಾರು ಸಮಸ್ಯೆಗಳಿಗೆ ಸಿಲುಕಿ ತೀವ್ರ ಸಂಕಷ್ಟದಲ್ಲಿರುವ ರಾಜ್ಯದ ತಂಬಾಕು ಬೆಳೆಗಾರರ ಹಿತದೃಷ್ಟಿಯಿಂದ ನಾವು ಸಚಿವರಿಗೆ ಈ ಮನವಿ ಸಲ್ಲಿಸಿದ್ದೇವೆ. ಇದೇ ವೇಳೆ ನಮ ಜತೆಯಲ್ಲಿದ್ದ ಕೇಂದ್ರ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್‌.ಡಿ.ಕುಮಾರಸ್ವಾಮಿ ಅವರು ಕೂಡ ಸಚಿವ ಗೋಯಲ್‌ ಅವರಿಗೆ ತಂಬಾಕು ಬೆಳೆಗಾರರ ಸಮಸ್ಯೆಗಳನ್ನು ಮನವರಿಕೆ ಮಾಡಿಕೊಟ್ಟರು ಎಂದು ಅವರು ಹೇಳಿದ್ದಾರೆ.

ನೆರೆ ರಾಜ್ಯಗಳಲ್ಲಿ ತಂಬಾಕು ಬೆಳೆಗಾರಿಗೆ ಉತ್ತಮ ದರ ಸಿಗುತ್ತಿದ್ದರೂ ಕರ್ನಾಟಕದ ಬೆಳೆಗಾರರಿಗೆ ಆ ಧಾರಣೆ ಸಿಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ತಾವು ಗಮನ ಹರಿಸಿ ಬೆಳೆಗಾರರಿಗೆ ಉತ್ತಮ ಬೆಲೆ ಸಿಗುವಂತೆ ಮಾಡಬೇಕು. ಆಂಧ್ರ ಪ್ರದೇಶದಲ್ಲಿ ತಂಬಾಕಿನ ಬೆಲೆ ಪ್ರತಿ ಕೆಜಿಗೆ ಸರಾಸರಿ 320ರೂ. ಇದೆ. ಕರ್ನಾಟಕದಲ್ಲಿ ಪ್ರತಿ ಕೆಜಿಗೆ 265ರೂ.ಇದೆ. ಕಡಿಮೆ ಬೆಳೆಯಿಂದಾಗಿ ಬಡ ಹಾಗೂ ಮಧ್ಯಮ ಬೆಳೆಗಾರರಿಗೆ ಬಹಳ ನಷ್ಟವಾಗುತ್ತಿದೆ ಎಂಬ ಅಂಶವನ್ನು ಗೋಯಲ್‌ ಅವರ ಗಮನಕ್ಕೆ ತರಲಾಗಿದೆ ಎಂದು ಅವರು ತಿಳಿಸಿದ್ದಾರೆ.

ತಂಬಾಕು ಬೆಳೆಯನ್ನು ಪ್ರಧಾನ ಮಂತ್ರಿ ಫಸಲ್‌ ಭೀಮಾ ಯೋಜನೆ ವ್ಯಾಪ್ತಿಗೆ ತಂದರೆ ಸಣ್ಣ, ಅತಿ ಸಣ್ಣ ಹಾಗೂ ಮಧ್ಯಮ ಗಾತ್ರದ ಬೆಳೆಗಾರರಿಗೆ ಸಹಾಯವಾಗುತ್ತದೆ ಹಾಗೂ ತಂಬಾಕು ಬೆಳೆಗೂ ಬೆಂಬಲ ಬೆಲೆ ನೀಡಿದರೆ ಬಡ ಕುಟುಂಬಗಳಿಗೆ ಆರ್ಥಿಕವಾಗಿ ಶಕ್ತಿ ತುಂಬಿದಂತಾಗುತ್ತದೆ.

ಐಟಿಸಿಯಂತಹ ಬೃಹತ್‌ ಕಂಪನಿಗಳು ಇಂತಹ ಬೆಳೆಗಾರರಿಂದ ನೇರವಾಗಿ ತಂಬಾಕು ಖರೀದಿಸುವಂತೆ ಸೂಚನೆ ಕೊಡಬೇಕು ಎಂದು ಪಿಯೂಷ್‌ ಗೋಯಲ್‌ ಅವರಲ್ಲಿ ಮನವಿ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಅತ್ಯಂತ ಸಕಾರಾತಕವಾಗಿ ಸಚಿವರು ಸ್ಪಂದಿಸಿ, ಅಧಿಕಾರಿಗಳಿಗೆ ಕೆಲ ಆದೇಶಗಳನ್ನು ನೀಡಿದ್ದಾರೆ. ಮತ್ತೊಮೆ ಅಧಿಕಾರಿಗಳನ್ನು ಭೇಟಿ ಮಾಡಿ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಆಮೂಲಾಗ್ರವಾಗಿ ಚರ್ಚೆ ಮಾಡುವಂತೆ ಹೇಳಿದರು. ಅದರಂತೆ ನಾವು ಅವರ ಇಲಾಖೆಯ ಅಧಿಕಾರಿಗಳನ್ನು ಭೇಟಿಯಾಗಿ ಮಾಹಿತಿ ಕೊಡಲಿದ್ದೇವೆ ಎಂದು ಅವರು ಹೇಳಿದ್ದಾರೆ. ಸಂಸದರಾದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌, ಮಲ್ಲೇಶ್‌ ಬಾಬು, ಮಾಜಿ ಸಚಿವ ಸಾ.ರಾ.ಮಹೇಶ್‌, ಶಾಸಕ ಜಿ.ಟಿ.ಹರೀಶ್‌ಗೌಡ ಅವರು ತಂಬಾಕು ಬೆಳೆಗಾರರು ನಿಯೋಗದಲ್ಲಿದ್ದರು.

RELATED ARTICLES

Latest News