ಮಂಗಳೂರು,ಏ.20– ನಮಗೆ ಧರ್ಮ ಬೇಕು, ಧರ್ಮಕ್ಕೆ ನಾವಲ್ಲ, ನಾವು ಧರ್ಮವನ್ನು ಕಾಪಾಡಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಧರ್ಮಸ್ಥಳದ ಮಂಜುನಾಥ ದೇವಾಲಯಕ್ಕೆ ಭೇಟಿ ಮಾಡಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಇಂದು ಪ್ರತಿಕ್ರಿಯೆ ನೀಡಿದರು.
ಈ ಧರ್ಮಕ್ಷೇತ್ರ ಜನಸೇವೆ. ಸಾಮಾಜಿಕ, ಶೈಕ್ಷಣಿಕ ಸೇವೆ ಮಾಡಿಕೊಂಡು ಬಂದಿದೆ. ಇದಕ್ಕೆ ಸಹಕಾರ ನೀಡಬೇಕಾಗಿರುವುದು ನಮ್ಮ ಕರ್ತವ್ಯ ಎಂದರು. ಕರಾವಳಿ ನಮ್ಮ ರಾಜ್ಯದ ಮುಖ್ಯವಾದ ಅಂಗ. ಮನುಷ್ಯನಿಗೆ ದೇಹದ ಅಂಗಗಳು ಎಷ್ಟು ಮುಖ್ಯವೋ, ಕರಾವಳಿ ಭಾಗವೂ ಅಷ್ಟೇ ಮುಖ್ಯ ಎಂದು ತಿಳಿಸಿದರು.