ಉಗ್ರರ ಫ್ಯಾಕ್ಟರಿ ಪಾಕ್ ವಿರುದ್ಧ ಜೈಶಂಕರ್ ವಾಗ್ದಾಳಿ

Social Share

ನಿಕೋಸಿಯಾ,ಡಿ.31- ನಮ್ಮೊಂದಿಗೆ ಸಂಧಾನಕ್ಕೆ ಒತ್ತಾಯಿಸಲು ಭಯೋತ್ಪಾದನೆಯನ್ನು ಸಾಧನವನ್ನಾಗಿ ಬಳಕೆ ಮಾಡಿಕೊಳ್ಳಲು ಅವಕಾಶ ನೀಡುವುದಿಲ್ಲ ಎಂದು ವಿದೇಶಾಂಗ ಸಚಿವ ಜೈ ಶಂಕರ್ ಅವರು ಪಾಕಿಸ್ತಾನದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸೈಪ್ರಸ್‍ನಲ್ಲಿರುವ ಭಾರತೀಯ ವಲಸಿಗರೊಂದಿಗೆ ಸಂವಾದ ನಡೆಸುತ್ತಿದ್ದ ಸಂದರ್ಭದಲ್ಲಿ ಪಾಕಿಸ್ತಾನ ಹೆಸರು ಉಲ್ಲೇಖಿಸದೆ ಪರೋಕ್ಷ ವಾಗ್ದಾಳಿ ನಡೆಸಿದರು. ಭಯೋತ್ಪಾದನೆಗೆ ಉತ್ತೇಜನ ನೀಡುವ ಮೂಲಕ ನಮ್ಮನ್ನು ಸಂಧಾನ ಮಾತುಕತೆಗೆ ಕರೆತರುವ ಅವರ ಒತ್ತಾಯಕ್ಕೆ ನಾವು ಎಂದು ಮಣಿಯುವುದಿಲ್ಲ. ನಾವು ಉತ್ತಮ ನೆರೆಹೊರೆಯ ದೇಶಗಳೊಂದಿಗೆ ಉತ್ತಮ ಸಂಬಂಧವನ್ನು ಬಯಸುತ್ತೇವೆ ಎಂದರು.

ನಮ್ಮ ಗಡಿಗಳಲ್ಲಿ ನಮಗೆ ಸವಾಲುಗಳಿವೆ. ಕೋವಿಡ್ ಅವಧಿಯಲ್ಲಿ ಗಡಿಗಳಲ್ಲಿನ ಸವಾಲುಗಳು ತೀವ್ರಗೊಂಡಿವೆ. ಮತ್ತು ಇಂದು ಚೀನಾದೊಂದಿಗಿನ ನಮ್ಮ ಸಂಬಂಧಗಳ ಸ್ಥಿತಿಯು ಸಾಮಾನ್ಯವಲ್ಲ ಎಂದು ನಿಮಗೆಲ್ಲರಿಗೂ ತಿಳಿದಿದೆ. ಸಾಮಾನ್ಯ ಏಕೆಂದರೆ ವಾಸ್ತವಿಕ ನಿಯಂತ್ರಣ ರೇಖೆಯನ್ನು (ಎಲ್‍ಎಸಿ) ಏಕಪಕ್ಷೀಯವಾಗಿ ಬದಲಾಯಿಸುವ ಯಾವುದೇ ಪ್ರಯತ್ನವನ್ನು ನಾವು ಒಪ್ಪುವುದಿಲ್ಲ ಎಂದು ಅವರು ಹೇಳಿದ್ದಾರೆ.

ಮುಂದಿನ ಅವೇಶನದಲ್ಲಿ ಮೊದಲು ಉತ್ತರ ಕರ್ನಾಟಕ ಸಮಸ್ಯೆಗಳ ಕುರಿತು ಚರ್ಚೆ

ಮುಂದಿನ ದಿನಗಳಲ್ಲಿ ಭಾರತ ಬಲಿಷ್ಠ ಆರ್ಥಿಕತೆ ಮತ್ತು ಸ್ವತಂತ್ರ ರಾಷ್ಟ್ರವಾಗಿ ಹೊರಹೊಮ್ಮುವುದನ್ನು ನಾವು ಎದುರು ನೋಡುತ್ತಿದ್ದೇವೆ ಇದರೊಂದಿಗೆ ಹಲವಾರು ಸಮಸ್ಯೆಗಳಿಗೆ ನಾವು ಸೂಕ್ತ ಉತ್ತರ ಕಂಡುಕೊಳ್ಳುವ ಭರವಸೆಯನ್ನು ನಾನು ನೀಡುತ್ತೇನೆ ಎಂದು ಅವರು ತಿಳಿಸಿದರು.

ಭಾರತದಿಂದ ನಿರೀಕ್ಷೆಗಳ ಬಗ್ಗೆ ಮಾತನಾಡಿದ ಎಸ್ ಜೈಶಂರ್ಕ, ಹೊಸ ದೆಹಲಿಯು ಸಮಸ್ಯೆಗಳನ್ನು ಪರಿಹರಿಸುತ್ತದೆ ಎಂದು ನೋಡುವುದರಿಂದ ಸಾಕಷ್ಟು ನಿರೀಕ್ಷೆಗಳಿವೆ ಎಂದು ಹೇಳಿದರು. ಭಾರತವನ್ನು ಬಲಿಷ್ಠ ಆರ್ಥಿಕತೆ ಮತ್ತು ಸ್ವತಂತ್ರ ರಾಷ್ಟ್ರವಾಗಿ ನೋಡಲಾಗುತ್ತಿದೆ ಎಂದು ಅವರು ಹೇಳಿದರು.

ಸೈಪ್ರಸ್‍ನೊಂದಿಗೆ 3 ಒಪ್ಪಂದಗಳ ಬಗ್ಗೆ ಮಾತುಕತೆ ನಡೆಸುತ್ತಿದ್ದೇವೆ. ರಕ್ಷಣಾ ಕಾರ್ಯಾಚರಣೆಗಳ ಸಹಕಾರ, ವಲಸೆ ಮತ್ತು ಚಲನಶೀಲತೆ ಒಪ್ಪಂದ ಎರಡೂ ದೇಶಗಳ ಜನರ ಕಾನೂನು ಚಲನೆಗೆ ಅನುಕೂಲವಾಗುವಂತೆ ಮತ್ತು ಅಂತರರಾಷ್ಟ್ರೀಯ ಸೌರ ಒಕ್ಕೂಟದ ಒಪ್ಪಂದ ಇದಾಗಿದೆ ಎಂದು ಜೈಶಂಕರ್ ಹೇಳಿದರು.

2022ರಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಭಾರತದ ಸಾಧಿಸಿದ್ದೇನು..?

ವಿದೇಶದಲ್ಲಿರುವ ಭಾರತೀಯರ ಬಗ್ಗೆ ನಾನು ಕೆಲವು ಮಾತುಗಳನ್ನು ಹೇಳುತ್ತೇನೆ. ವಿದೇಶದಲ್ಲಿರುವ ಭಾರತೀಯರು ತಾಯ್ನಾಡಿಗೆ ಶಕ್ತಿಯ ದೊಡ್ಡ ಮೂಲ ಎಂದು ಅವರು ಇದೇ ಸಂದರ್ಭದಲ್ಲಿ ಉಲ್ಲೇಖಿಸಿದರು.3.3 ಕೋಟಿ ಭಾರತೀಯರು ಮತ್ತು ಭಾರತೀಯ ಮೂಲದ ಜನರು ವಿದೇಶಗಳಲ್ಲಿ ವಾಸಿಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

We want good neigbourly relations , Minister Jaishankar, terrorism,

Articles You Might Like

Share This Article