ಶಿವಮೊಗ್ಗ,ಸೆ.9- ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿರುವ ಆರೋಪಿಗಳನ್ನು ಪತ್ತೆ ಹಚ್ಚಿ ಶೀಘ್ರದಲ್ಲಿ ಬಂಧಿಸುತ್ತೇವೆ ಎಂದು ಎಸ್‌ಪಿ ಮಿಥುನ್‌ಕುಮಾರ್ ತಿಳಿಸಿದ್ದಾರೆ.
ತಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ಗಾಂಧಿವೃತ್ತದಲ್ಲಿ ಈದ್‌ಮಿಲಾದ್ ಮೆರವಣಿಗೆ ಹೋಗುತ್ತಿದ್ದ ವೇಳೆ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿರುವ ಬಗ್ಗೆ ಮಾಹಿತಿ ಬಂದಿದೆ.
ಸಾಮಾಜಿಕ ಮಾಧ್ಯಮದಲ್ಲೂ ವಿಡಿಯೋ ಹರಿದಾಡಿದೆ. ಆ ವಿಡಿಯೋ ಆಧರಿಸಿ ಕ್ರಮ ಕೈಗೊಳ್ಳುವುದಾಗಿ ಅವರು ಹೇಳಿದರು.ಈಗಾಗಲೇ ಪೊಲೀಸರು ಆರೋಪಿಗಳ ಪತ್ತೆಕಾರ್ಯದಲ್ಲಿ ತೊಡಗಿದ್ದಾರೆ. ವಿಡಿಯೋ ತುಣುಕು ಆಧರಿಸಿ ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ನಡುವೆ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿರುವ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಸಂಘಟನೆಗಳು ಆಗ್ರಹಿಸಿವೆ.