Friday, July 19, 2024
Homeರಾಜ್ಯ3 ಸಾವಿರ ಕ್ಯೂಸೆಕ್ ನೀರು ಬಿಡುವ ಶಿಫಾರಸ್ಸನ್ನು ಸುಪ್ರೀಂನಲ್ಲಿ ಪ್ರಶ್ನಿಸುತ್ತೇವೆ : ಸಿಎಂ

3 ಸಾವಿರ ಕ್ಯೂಸೆಕ್ ನೀರು ಬಿಡುವ ಶಿಫಾರಸ್ಸನ್ನು ಸುಪ್ರೀಂನಲ್ಲಿ ಪ್ರಶ್ನಿಸುತ್ತೇವೆ : ಸಿಎಂ

ಚಾಮರಾಜನಗರ,ಸೆ.27- ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣಾ ಸಮಿತಿ ನೀಡಿರುವ ಶಿಫಾರಸ್ಸನ್ನು ಸುಪ್ರೀಂಕೋರ್ಟ್‍ನಲ್ಲಿ ಪ್ರಶ್ನಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.ಚಾಮರಾಜನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಿತಿಯ ಆದೇಶದಿಂದಾಗಿ ತಾವು ವಕೀಲರ ಜೊತೆ ಚರ್ಚೆ ನಡೆಸಿದ್ದು, ಅದನ್ನು ಸುಪ್ರೀಂಕೋರ್ಟ್‍ನಲ್ಲಿ ಪ್ರಶ್ನಿಸಬಹುದು ಎಂದು ಸಲಹೆ ನೀಡಿದ್ದಾರೆ. ಅದರಂತೆ ಮೇಲ್ಮನವಿ ಸಲ್ಲಿಸಿದ್ದೇವೆ. ತಮಿಳುನಾಡಿಗೆ ಬಿಡಲು ನಮ್ಮ ಬಳಿ ನೀರೇ ಇಲ್ಲ ಎಂದು ಹೇಳಿದರು.

ತೀರ್ಪಿನ ಹಿನ್ನೆಲೆಯಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಸೆ.29 ರಂದು ಬಂದ್ ನಡೆಸುವುದಾಗಿ ಕನ್ನಡಪರ ಸಂಘಟನೆಗಳು ಘೋಷಣೆ ನೀಡಿವೆ. ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆಗೆ ಅವಕಾಶವಿದೆ. ಆದರೆ ಸುಪ್ರೀಂಕೋರ್ಟಿನ ತೀರ್ಪಿನ ಪ್ರಕಾರ ಬಂದ್, ಪ್ರತಿಭಟನಾ ಮೆರವಣಿಗೆ ಮಾಡಲು ಅವಕಾಶ ಇಲ್ಲ ಎಂದು ಹೇಳಿದರು.

ಇಯರ್-ಫೋನ್ ವಿಚಾರಕ್ಕೆ ಸ್ನೇಹಿತನನ್ನೆ ಕೊಂದ 9ನೇ ತರಗತಿ ವಿದ್ಯಾರ್ಥಿಗಳು

ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗುತ್ತದೆ ಎಂಬ ಮೌಢ್ಯ ಈಗ ಇಲ್ಲವಾಗಿದೆ. ನಾನು ಮೊದಲ ಅವಯಲ್ಲಿ ಮುಖ್ಯಯಾದ ಬಳಿಕ ಚಾಮರಾಜನಗರಕ್ಕೆ ಭೇಟಿ ನೀಡಿದ್ದೆ. ಆ ಬಳಿಕವೂ 5 ವರ್ಷ ಗಟ್ಟಿಯಾಗಿ ಆಡಳಿತ ನಡೆಸಿದೆ. ಮೌಢ್ಯ, ಮೂಢನಂಬಿಕೆ, ಕಂದಾಚಾರದ ಮೇಲೆ ನನಗೆ ನಂಬಿಕೆಯಿಲ್ಲ. ಹಾಗಾಗಿ 12 ಬಾರಿ ಚಾಮರಾಜನಗರಕ್ಕೆ ಬಂದಿದ್ದೇನೆ ಎಂದರು.

ಮಲೈಮಹದೇಶ್ವರ ದೇವಸ್ಥಾನ ಪ್ರಾಕಾರದ ಸಭೆಗಾಗಿ ತಾವಿಂದು ಇಲ್ಲಿಗೆ ಭೇಟಿ ನೀಡಿದ್ದು, ಮಹದೇಶ್ವರನ ದರ್ಶನ ಪಡೆದು, ರಾಜ್ಯದಲ್ಲಿ ಉತ್ತಮ ಮಳೆಯಾಗಲಿ, ಜನರು ಮತ್ತು ರೈತರು ಸೌಖ್ಯವಾಗಿರಲಿ ಎಂದು ಪ್ರಾರ್ಥಿಸಿದ್ದೇನೆ.ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ 195 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಿದ್ದೇವೆ. ಹೀಗಾಗಿ ಮಳೆಗಾಗಿ ದೇವರಲ್ಲಿ ಪ್ರಾರ್ಥಿಸಿದ್ದೇನೆ ಎಂದು ಹೇಳಿದರು.

ಸಚಿವರಾದ ಎಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಸ್ಥಳೀಯ ಶಾಸಕರು, ಜನಪ್ರತಿನಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಮುಖ್ಯಮಂತ್ರಿಯಾದಿಯಾಗಿ ಎಲ್ಲರೂ ಮಹದೇಶ್ವರನ ಮುಂದೆ ಭಕ್ತಿ ಭಾವ ಪರವಶರಾಗಿ ಪೂಜೆ ಸಲ್ಲಿಸಿದ ನಂತರ ಪ್ರಾಕಾರದ ಸಭೆ ನಡೆಸಿದ್ದು, ಮಹದೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಹಲವಾರು ಯೋಜನೆಗಳ ಕುರಿತು ಚರ್ಚೆ ನಡೆಸಲಾಗಿದೆ.ದೇವಸ್ಥಾನದ ಆಡಳಿತ ಮಂಡಳಿ ಮುಖ್ಯಮಂತ್ರಿ ಹಾಗೂ ಗಣ್ಯರಿಗೆ ಪೂರ್ಣ ಕುಂಭ ಸ್ವಾಗತ ಕೋರಿದರು.

RELATED ARTICLES

Latest News