ತಿರುವನಂತಪುರ.ಫೆ.17-ಮುಂದಿನ ಐದು ದಿನಗಳಲ್ಲಿ ತಮಿಳುನಾಡು ಮತ್ತು ಕೇರಳದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.
ಕಡಿಮೆ ಉಷ್ಣವಲಯದ ಮಟ್ಟದಲ್ಲಿ ತಮಿಳುನಾಡಿನ ಕರಾವಳಿ ಮೇಲೆ ಈಶಾನ್ಯ ಮಾರುತಗಳುಚಲಿಸುತ್ತಿವೆ ಸಮಭಾಜಕ ಹಿಂದೂ ಮಹಾಸಾಗರ ಮತ್ತು ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಪ್ರಭಾವದ ದಿಂದ ಲಕ್ಷದ್ವೀಪದಲ್ಲಿ ಚದುರಿದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಹೇಳಿದೆ.
ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗಿಲ್ಗಿಟï-ಬಾಲ್ಟಿಸ್ತಾನ್ ಮತ್ತು ಮುಜಫರಾಬಾದ್‍ನಲ್ಲಿ ಲಘು ಮಳೆ ಅಥವಾ ಹಿಮಪಾತದ ಸಾಧ್ಯತೆಯಿದೆ ಎಂದು ತಿಳಿಸಿದೆವ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಪ್ರತ್ಯೇಕವಾದ ಲಘು ಮಳೆಯಾಗುವ ಸಾಧ್ಯತೆಯಿದೆ.
