Tuesday, December 3, 2024
Homeರಾಜ್ಯವೆಬ್‌ಸೈಟ್‌ ಡೌನ್ : ಹೊಸ ಬಿಪಿಎಲ್‌ ರೇಷನ್ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸಲು ಜನರ ಪರದಾಟ

ವೆಬ್‌ಸೈಟ್‌ ಡೌನ್ : ಹೊಸ ಬಿಪಿಎಲ್‌ ರೇಷನ್ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸಲು ಜನರ ಪರದಾಟ

ಬೆಂಗಳೂರು,ಜು.11– ಒಂದು ವರ್ಷದ ಬಳಿಕ ಆಹಾರ ಇಲಾಖೆ ಬಿಪಿಎಲ್‌ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ.ಹೊಸ ಬಿಪಿಎಲ್‌ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸಲು ಆಹಾರ ನಾಗರೀಕ ಸರಬರಾಜು ಇಲಾಖೆ ಅನುಮತಿ ನೀಡಿದೆ. ಸದ್ಯ ಆಹಾರ ನಾಗಾರೀಕ ವೆಬ್‌ಸೈಟ್‌ ahara.kar.nic.in ರಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು, ಮೊಬೈಲ್‌‍, ಕಂಪ್ಯೂಟರ್‌, ಸೇವಾಸಿಂಧು ಪೋರ್ಟಲ್‌ಗಳಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಇನ್ನು ಬಿಪಿಎಲ್‌‍, ಎಪಿಎಲ್‌‍, ತುರ್ತು ಆರೋಗ್ಯ ಸಂಬಂಧ ಬಿಪಿಎಲ್‌ ಕಾರ್ಡ್‌ ಅರ್ಜಿಗೆ ಸಮಯ ನಿಗದಿ ಮಾಡಿದ್ದು, ಬೆಳಗ್ಗೆ 10 ರಿಂದ ಸಂಜೆ 7 ರವರೆಗೆ ಅರ್ಜಿ ಸಲ್ಲಿಕೆ ಅವಕಾಶ ನೀಡಿದೆ. ಇದರ ಜೊತೆಗೆ ರೇಷನ್‌ ಕಾರ್ಡ್‌ಗಳ ತಿದ್ದುಪಡಿಗೂ ಅವಕಾಶ ನೀಡಿದ್ದು, ಬೆಂಗಳೂರು ಒನ್‌ ಸೆಂಟರ್‌ಗಳಿಗೆ ಫಲನುಭವಿಗಳು ಆಗಮಿಸುತ್ತಿದ್ದಾರೆ.

ಒಂದು ವರ್ಷದ ಬಳಿಕ ರೇಷನ್‌ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸಲು ಅನುಮತಿ ಕೊಟ್ಟಿರುವ ಕಾರಣ ಲಾನುಭವಿಗಳು ಬೆಂಗಳೂರು ಒನ್‌ ಸೆಂಟರ್‌ಗಳಿಗೆ ಧಾವಿಸುತ್ತಿದ್ದಾರೆ. ಆದರೆ ವೆಬ್‌ಸೈಟ್‌ ಓಪನ್‌ ಆಗುತ್ತಿದ್ದು, ಅರ್ಜಿ ಮಾತ್ರ ರವಾನೆಯಾಗುತ್ತಿಲ್ಲ. ಹೀಗಾಗಿ ಆಹಾರ ನಾಗಾರೀಕ ಸರಬರಾಜು ಇಲಾಖೆಯ ವಿರುದ್ಧ ಫಲಾನುಭವಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಅರ್ಜಿ ಸಲ್ಲಿಸಲು ಅವಕಾಶ ಕೊಟ್ಟಿದ್ದೇವೆ ಎಂದು ಹೇಳಿ ಜನರನ್ನು ಮೂರ್ಖರನ್ನಾಗಿ ಮಾಡುತ್ತಿದ್ದಾರೆ. ಆಹಾರ ಇಲಾಖೆ ಅಧಿಕಾರಿಗಳು ಏನು ಮಾಡುತ್ತಿದ್ದಾರೆ. ಪರ್ಮಿಷನ್‌ ಕೊಟ್ಟಿದ್ದಾರೆ ಎಂದು ಎಸಿ ರೂಮಿನಲ್ಲಿ ಸುಮನೆ ಕುಳಿತುಕೊಂಡರೆ ಇಲ್ಲಿನ ಸಮಸ್ಯೆಗಳನ್ನು ಬಗೆಹರಿಸುವುದು ಯಾರು? ತಿದ್ದಪಡಿಗೆ ಒಂದು ವಾರ ಅಲೆದಿದ್ದೇವೆ. ಇದೀಗ ಅರ್ಜಿ ಸಲ್ಲಿಸಲು ಅಲೆದಾಡಿ ಪರದಾಡುವ ಪರಿಸ್ಥಿತಿ ಎದುರಾಗಿದೆ. ನಮ ಸಮಸ್ಯೆಗಳನ್ನು ಯಾರು ಆಲಿಸುತ್ತಾರೆ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

RELATED ARTICLES

Latest News