ವೀಕೆಂಡ್ ಕರ್ಫ್ಯೂ ವೇಳೆ ಸಿಗಲ್ಲ ಎಣ್ಣೆ : ಬಾರ್, ಪಬ್ ಬಂದ್

Social Share

ಬೆಂಗಳೂರು,ಜ.6- ಕೊವೀಡ್-19 ಉಲ್ಬಣಿಸುತ್ತಿರುವ ಹಿನ್ನೆಲೆಯಲ್ಲಿ ಬಾರ್, ಪಬ್, ಹೊಟೇಲ್, ರೆಸ್ಟೋರೆಂಟ್ ಹಾಗೂ ರೆಸಾರ್ಟ್ ಗಳನ್ನು ವೀಕೆಂಡ್ ಕಫ್ರ್ಯೂ ವೇಳೆ ಮುಚ್ಚಿಸುವಂತೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಎಲ್ಲಾ ಜಿಲ್ಲಾಕಾರಿಗಳಿಗೆ ಆದೇಶ ಹೊರಡಿಸಿದ್ದಾರೆ.
ರಾಜ್ಯಾದ್ಯಂತ ಶುಕ್ರವಾರ ರಾತ್ರಿ 10 ರಿಂದ ಸೋಮವಾರ ಬೆಳಗ್ಗೆ 5 ಗಂಟೆವರೆಗೆ ಎಲ್ಲಾ ಮದ್ಯದ ಅಂಗಡಿಗಳು ಬಂದಾಗಿರುತ್ತವೆ. ಕೊರೊನಾ ಮೂರನೆ ಅಲೆ ತಡೆಯಲು ಸರ್ಕಾರ ಕಟ್ಟುನಿಟ್ಟಿನ ಆದೇಶ ನೀಡಿದ್ದು , ಅದರ ಅನ್ವಯ ಎಲ್ಲಾ ಬಾರ್, ಪಬ್ ಮತ್ತು ರೆಸ್ಟೋರೆಂಟ್‍ಗಳನ್ನು ಮುಚ್ಚುವಂತೆ ಆದೇಶಿಸಲಾಗಿದೆ ಎಂದು ಅಬಕಾರಿ ಇಲಾಖೆ ಅಪರ ಮುಖ್ಯ ಆಯುಕ್ತ ರಾಜೇಂದ್ರ ಪ್ರಸಾದ್ ತಿಳಿಸಿದ್ದಾರೆ.

Articles You Might Like

Share This Article