ವೀಕೆಂಡ್ ಕರ್ಫ್ಯೂಗೆ ಆಡಳಿತಾರೂಢ ಬಿಜೆಪಿಯಲ್ಲೇ ವಿರೋಧ

Social Share

ಬೆಂಗಳೂರು,ಜ.6-ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಸೋಂಕು ಮತ್ತು ಓಮಿಕ್ರಾನ್ ತಡೆಗಟ್ಟಲು ಸರ್ಕಾರ ಜಾರಿಗೆ ತಂದಿರುವ ಕಠಿಣ ನಿಯಮ ಮತ್ತು ವೀಕೆಂಡ್ ಕರ್ಫ್ಯೂಗೆ ಆಡಳಿತಾರೂಢ ಬಿಜೆಪಿಯಲ್ಲೇ ವಿರೋಧ ವ್ಯಕ್ತವಾಗಿದೆ.  ಸರ್ಕಾರದ ಕ್ರಮಕ್ಕೆ ಸಚಿವರು ಹಾಗೂ ಶಾಸಕರು ವಿರೋಧ ವ್ಯಕ್ತಪಡಿಸಿದ್ದು, ಈಗತಾನೇ ಆರ್ಥಿಕ ಚಟುವಟಿಕೆಗಳು ಚೇತರಿಸಿಕೊಳ್ಳುತ್ತಿದ್ದು, ಪುನಃ ಮತ್ತೆ ಇಂತಹ ನಿಯಮಗಳನ್ನು ಜಾರಿಗೆ ತರುವ ಅವಶ್ಯಕತೆ ಇತ್ತೆ ಎಂದು ಅನೇಕರು ವಿರೋಧ ವ್ಯಕ್ತಪಡಿಸಿದ್ದಾರೆ.
ಬಿಜೆಪಿಯ ಹಲವು ಸಚಿವರು, ಶಾಸಕರ ಕ್ಷೇತ್ರಗಳಲ್ಲಿ ವ್ಯಾಪಾರಿ ವರ್ಗದವರಿಂದ ವಿರೋಧ ವ್ಯಕ್ತವಾಗುತ್ತಿದ್ದಂತೆ ವೀಕೆಂಡ್ ಕಫ್ರ್ಯೂ, ಶೇ.50ರಷ್ಟು ರೂಲ್ಸï ಏಕಪಕ್ಷೀಯ ನಿರ್ಧಾರ ಎಂದು ಅಸಮಧಾನ ಕೇಳಿಬರುತ್ತಿದೆ. ಕರ್ನಾಟಕದಲ್ಲಿ ಕಂಡು ಬರುತ್ತಿರುವ ಒಟ್ಟು ಕೋವಿಡ್ ಹಾಗೂ ಓಮಿಕ್ರಾನ್ ಪ್ರಕರಣಗಳಲ್ಲಿ ರಾಜಧಾನಿ ಬೆಂಗಳೂರಿನಲ್ಲೇ ಪ್ರತಿ ದಿನ ಶೇ.80ರಷ್ಟು ಪ್ರಕರಣಗಳು ದಾಖಲಾಗುತ್ತಿವೆ.
ಈ ನಗರಕ್ಕೆ ಮಾತ್ರ ಕಠಿಣ ನಿಯಮಗಳನ್ನು ಜಾರಿ ಮಾಡಬೇಕಾದ ಅಗತ್ಯವಿದೆ. ಇದನ್ನು ರಾಜ್ಯಾದ್ಯಂತ ವಿಸ್ತರಣೆ ಮಾಡುವ ಅಗತ್ಯವಾದರೂ ಏನಿತ್ತು ಎಂದು ಹೆಸರು ಹೇಳಲಿಚ್ಚಿಸದ ಅನೇಕರು ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಕೆಲವು ಜಿಲ್ಲಾಗಳಲ್ಲಿ ಕೋವಿಡ್ ಕಡಿಮೆ ಇದೆ. ಜಿಲ್ಲಾಗಳಲ್ಲಿ ಆತಂಕ, ಭಯದ ವಾತಾವರಣವಿಲ್ಲ. ಕೋವಿಡ್ ಕಡಿಮೆ ಇರುವ ಕಡೆ ವೀಕೆಂಡ್ ಕಫ್ರ್ಯೂ ಬೇಕಾಗಿರಲಿಲ್ಲ. ವೀಕೆಂಡ್ ಕಫ್ರ್ಯೂನಿಂದಾಗಿ ಜನಜೀವನ, ವ್ಯಾಪಾರ ವಹಿವಾಟಿಗೆ ತೊಡಕು ಉಂಟಾಗಿದೆ ಎಂಬುದು ಅನೇಕರ ಅಸಮಾಧಾನವಾಗಿದೆ.
ಇಂತಹ ಸಂದರ್ಭದಲ್ಲಿ ಬರಸಿಡಿಲಿನಂತೆ ವೀಕೆಂಡ್ ಕಫ್ರ್ಯೂ ಮಾಡಿರುವ ಬಗ್ಗೆ ಜನಸಾಮಾನ್ಯರು, ವ್ಯಾಪಾರಿ ವರ್ಗದವರಿಂದ ತಮ್ಮ, ತಮ್ಮ ಕ್ಷೇತ್ರದ ಸಚಿವರು, ಶಾಸಕರಿಗೆ ಪ್ರಶ್ನೆ ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ಸಾಧ್ಯವಾದಷ್ಟು ಕಠಿಣ ನಿಯಮಗಳನ್ನು ಜಾರಿಗೊಳಿಸಲಿ. ಇದಕ್ಕೆ ನಮ್ಮ ಅಭ್ಯಂತರವೇನೂ ಇಲ್ಲ. ಜಿಲ್ಲಾ ಕೇಂದ್ರಗಳಲ್ಲಿ ಕಡಿಮೆ ಸೋಂಕು ದಾಖಲಾಗುತ್ತಿದೆ. ಗ್ರಾಮೀಣ ಭಾಗದಲ್ಲಿ ಅಷ್ಟಾಗಿ ಪರಿಣಾಮ ಬೀರಿಲ್ಲ. ಎಲ್ಲಾ ವರ್ಗದವರೂ ಅಸಮಾಧಾನಗೊಂಡರೆ ಅವರನ್ನು ನಿಭಾಯಿಸುವುದು ಹೇಗೆಂದು ಮನಸ್ಸಿನಲ್ಲೇ ಗೊಣಗುತ್ತಿದ್ದಾರೆ.
ಸಚಿವರು ಮತ್ತು ಶಾಸಕರು ಹೊಸ ಮಾರ್ಗಸೂಚಿಯಲ್ಲಿ ವಿನಾಯಿತಿ ಕೊಡಿ ಎಂದು ಮುಖ್ಯಮಂತ್ರಿಗಳಲ್ಲಿ ಒತ್ತಾಯಿಸುತ್ತಿದ್ದು, ಸಚಿವರ ಜತೆ ಸಂಪುಟದಲ್ಲಿ ಚರ್ಚಿಸಿ ಕಠಿಣ ನಿಯಮಗಳನ್ನು ಜಾರಿ ಮಾಡುವುದಾಗಿ ಹೇಳಿದ್ದರು. ಆದರೆ, ಏಕಾಏಕಿ ಈ ನಿಯಮಗಳನ್ನು ಜಾರಿ ಮಾಡಿರುವುದರಿಂದ ನಾವು ಕ್ಷೇತ್ರಗಳಲ್ಲಿ ಸಾರ್ವಜನಿಕರಿಂದ ಹಿಡಿ ಶಾಪ ಹಾಕಿಸಿಕೊಳ್ಳುವಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.
ಸಂಪುಟ ಸಭೆಗೂ ಮುನ್ನವೇ ಇಂತಹ ನಿಯಮಗಳನ್ನು ಜಾರಿ ಮಾಡಬೇಕಾದ ಅಗತ್ಯವಿರಲಿಲ್ಲ. ಬೆಂಗಳೂರಿಗೆ ಹೊರ ರಾಜ್ಯ ಮತ್ತು ವಿದೇಶಗಳಿಂದ ಬರುವವರಿಗೆ ಕಡಿವಾಣ ಹಾಕುವುದು, ವಿದೇಶದಿಂದ ಬಂದವರಿಗೆ ಎರಡು ವಾರ ಹೋಮ್ ಕ್ವಾರಂಟೈನ್ ಕಡ್ಡಾಯ ಮಾಡುವುದು, ಕೇರಳ, ತಮಿಳುನಾಡು ಮತ್ತು ಮಹಾರಾಷ್ಟ್ರದ ಗಡಿ ಭಾಗಗಳಲ್ಲಿ ಬಿಗಿಯಾದ ತಪಾಸಣೆ ನಡೆಸುವ ನಿಯಮಗಳನ್ನು ಜಾರಿ ಮಾಡಲಿ. ಆದರೆ, ರಾಜ್ಯಾದ್ಯಂತ ನಿಯಮಗಳನ್ನು ವಿಸ್ತರಣೆ ಮಾಡಿರುವುದು ಸರಿಯಲ್ಲ ಎಂದು ಆಕ್ಷೇಪಿಸಿದ್ದಾರೆ.
ಈ ನಡುವೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಬೆಂಗಳೂರಿನಲ್ಲಿ ಕೊರೊನಾ ಹೆಚ್ಚು ಇರುವುದು ನಿಜ. ರಾಜ್ಯದ ಎಲ್ಲಾ ಕಡೆಯೂ ಇದು ಇಲ್ಲ. ಕೆಲವೆಡೆ 2-3-4-5 ಈ ರೀತಿ ಇದೆ. ಹೆಚ್ಚು ಅಂದರೆ 10 ರವರೆಗೆ ಈ ಪ್ರಕರಣಗಳಿವೆ. ಬೆಂಗಳೂರಿನಲ್ಲಿ ಕೋವಿಡ್ ನಿಯಂತ್ರಣ ಮಾಡುವುದು ಎಲ್ಲರ ಕರ್ತವ್ಯವಾಗಿದೆ. ಆದರೆ, ರಾಜಧಾನಿಯಲ್ಲಿ ಸೋಂಕಿತರ ಪ್ರಮಾಣ ಹೆಚ್ಚಳವಾಗುತ್ತಿರುವುದರಿಂದ ಇಡೀ ರಾಜ್ಯಕ್ಕೆ ನಿಯಮ ತರುವುದು ಸರಿಯೇ ಎಂದು ಅನೇಕರು ನನಗೆ ಪ್ರಶ್ನೆ ಮಾಡ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.
ಆಟೋ ಚಾಲಕರು, ಕೂಲಿ ಕಾರ್ಮಿಕರು, ಟೈಲರ್, ವ್ಯಾಪಿರಿಗಳ ಜೀವನಕ್ಕೆ ಎಲ್ಲಿ ಹೋಗಬೇಕು? ಎಲ್ಲರಿಗೂ ತೊಂದರೆ ಆಗುತ್ತದೆ. ಇಡೀ ರಾಜ್ಯದ ಜನರ ಅಭಿಪ್ರಾಯವನ್ನು ಸಚಿವ ಸಂಪುಟದ ಹಾಗೂ ಮುಖ್ಯಮಂತ್ರಿಗಳ ಮುಂದೆ ಚರ್ಚಿಸುವುದಾಗಿ ಈಶ್ವರಪ್ಪ ಹೇಳಿದ್ದಾರೆ.

Articles You Might Like

Share This Article