ಬೆಂಗಳೂರು,ಜ.8- ಕೋವಿಡ್ ನಿಯಂತ್ರಿಸಲು ರಾಜ್ಯ ಸರ್ಕಾರ ತೆಗೆದುಕೊಂಡಿರುವ ವೀಕೆಂಡ್ ಕರ್ಫ್ಯೂಗೆ ರಾಜ್ಯಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜನ ದಟ್ಟಣೆ ಇಲ್ಲದೆ ಪ್ರಮುಖ ನಗರಗಳು ಬಿಕೋ ಎನ್ನುತ್ತಿವೆ.ರಾಜಧಾನಿ ಬೆಂಗಳೂರು, ಸಾಂಸ್ಕøತಿಕ ನಗರ ಮೈಸೂರು, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ದಾವಣಗೆರೆ, ಶಿವಮೊಗ್ಗ, ಕೊಡಗು, ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ರಾಜ್ಯಾದ್ಯಂತ ಎಲ್ಲೆಡೆ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಕಫ್ರ್ಯೂಗೆ ನಿರೀಕ್ಷೆಗೂ ಮೀರಿ ಬೆಂಬಲ ವ್ಯಕ್ತವಾಗುತ್ತಿದೆ.
ಸದಾ ಜನ ಜನಜಂಗುಳಿಯಿಂದ ಕೂಡಿದ್ದ ಬಸ್ ನಿಲ್ದಾಣ, ಆಟೋ ನಿಲ್ದಾಣಗಳು, ಮಾಲ್‍ಗಳು, ಮಾರುಕಟ್ಟೆಗಳು, ಸಂತೆ ಮೈದಾನ, ಧಾರ್ಮಿಕ ಕೇಂದ್ರಗಳು ಸೇರಿದಂತೆ ಮತ್ತಿತರ ಕಡೆ ಸೀಮಿತ ಜನಸಂಖ್ಯೆಯಲ್ಲಿ ದೈನಂದಿನ ವಹಿವಾಟು ನಡೆಸುತ್ತಿದ್ದ ದೃಶ್ಯ ಕಂಡುಬಂತು. ಬೆಳಗ್ಗೆಯಿಂದಲೇ ಪೊಲೀಸರು ಮಾರ್ಕೆಟ್ ಸೇರಿದಂತೆ ಜನನಿಬಿಡ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದು, ಜನ ಸಂಚಾರಕ್ಕೆ ಬ್ರೇಕ್ ಹಾಕಿದ್ದರು.
ಮಾರ್ಷಲ್ ಮತ್ತು ಪೊಲೀಸರ ನಿಯೋಜನೆ ಮಾಡಿ ಜನರನ್ನು ನಿಯಂತ್ರಿಸಲಾಗಿದ್ದು, ಇನ್ನೊಂದೆಡೆ ಮಾಸ್ಕ್ ಧರಿಸದವರಿಗೆ ಬೆಳ್ಳಂಬೆಳಗ್ಗೆ ಮಾರ್ಷಲ್‍ಗಳು ದಂಡ ಹಾಕುತ್ತಿದ್ದ ದೃಶ್ಯ ಅಲ್ಲಲ್ಲಿ ಕಂಡುಬಂತು.ಕೆಲವು ಕಡೆ ಅನಗತ್ಯವಾಗಿ ಜನರು ಸಂಚರಿಸುತ್ತಿದ್ದ ಕಡೆ ಪೊಲೀಸರು ಬಲವಂತವಾಗಿ ಅವರನ್ನು ಮನೆಗೆ ಕಳುಹಿಸಿದರೆ ಕೆಲವು ಕಡೆ ಮಾತಿನ ಚಕಮಕಿ, ಊರಿಗೆ ಹೋಗಲು ಪ್ರಯಾಣಿಕರ ಪರದಾಟ, ಖಾಸಗಿ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುವ ನೌಕರರು ಪರದಾಡುತ್ತಿದ್ದ ದೃಶ್ಯವೂ ಕಂಡುಬಂತು.
ಒಂದು ಮತ್ತು 2ನೇ ಕೋವಿಡ್ ಅಲೆಯಲ್ಲಿ ಸಾಕಷ್ಟು ಸಾವು-ನೋವು ಕಂಡುಬಂದ ಹಿನ್ನೆಲೆಯಲ್ಲಿ ಈ ಬಾರಿ ಎಚ್ಚೆತ್ತುಕೊಂಡಿರುವ ಸಾರ್ವಜನಿಕರು ಸ್ವಯಂಪ್ರೇರಿತವಾಗಿ ತಮಗೆ ತಾವೇ ನಿರ್ಬಂಧ ಹಾಕಿಕೊಂಡಿದ್ದರು.ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ಬಹುತೇಕ ಕಡೆ ಜನಜಂಗುಳಿ ಇಲ್ಲದೆ ಖಾಲಿ ಖಾಲಿಯಾಗಿದ್ದ ದೃಶ್ಯ ಕಂಡುಬಂದಿತು. ಮೆಜೆಸ್ಟಿಕ್, ಬಿಎಂಟಿಸಿ, ರೈಲ್ವೆ ನಿಲ್ದಾಣ, ಕೆ.ಆರ್.ಮಾರುಕಟ್ಟೆ ಸೇರಿದಂತೆ ವಾಹನಗಳ ಸಂಚಾರ ವಿರಳವಾಗಿತ್ತು.
ಗುರುತಿನ ಚೀಟಿಯನ್ನು ಹೊಂದಿದ್ದವರಿಗೆ ಮಾತ್ರ ಸಂಚರಿಸಲು ಪೊಲೀಸರು ಅವಕಾಶ ಕೊಟ್ಟಿದ್ದರು. ಎಂದಿನಂತೆ ಅಗತ್ಯ ವಸ್ತುಗಳಾದ ಹಾಲು, ಹಣ್ಣು, ತರಕಾರಿ, ಔಷ, ಸಿಲಿಂಡರ್, ದಿನಸಿ ಅಂಗಡಿಗಳು, ತರಕಾರಿ ಮಾರಾಟಕ್ಕೆ ಅವಕಾಶ ನೀಡಲಾಗಿತ್ತು.ಉಳಿದಂತೆ ಮದ್ಯದಂಗಡಿ, ಬಾರ್ ಮತ್ತು ರೆಸ್ಟೋರೆಂಟ್, ಕ್ಲಬ್‍ಗಳು, ಸಿನಿಮಾ ಮಂದಿರಗಳು, ಉದ್ಯಾನವನಗಳನ್ನು ಬಂದ್ ಮಾಡಲಾಗಿತ್ತು.
ಕಫ್ರ್ಯೂ ಹಿನ್ನೆಲೆಯಲ್ಲಿ ನಗರದ ಎಲ್ಲ ವಿಭಾಗದ ಡಿಸಿಪಿಗಳು ಖುದ್ದು ರಸ್ತೆಗಿಳಿದಿದ್ದರು. ನಿತ್ಯ ಜನರಿಂದ ತುಂಬಿ ತುಳುಕುತ್ತಿದ್ದ ಮಲ್ಲೇಶ್ವರಂ, ಯಶವಂತಪುರ, ಜಯನಗರ ಮುಂತಾದ ಕಡೆ ನಿಷೇಧಾಜ್ಞೆ ಕಾರಣ ಅಂಗಡಿಗಳೆಲ್ಲ ಬಂದ್ ಆಗಿದ್ದವು.
ಸರ್ಕಾರವು ಅಗತ್ಯ ವಸ್ತುಗಳ ಖರೀದಿಗೆ ಮಾತ್ರ ಅವಕಾಶ ನೀಡಿದ್ದು, ಜನಜಂಗುಳಿ ತಪ್ಪಿಸುವ ನಿಟ್ಟಿನಲ್ಲಿ ಕೆ.ಆರ್.ಮಾರುಕಟ್ಟೆ, ಸುತ್ತಮುತ್ತ ವ್ಯಾಪಾರಕ್ಕೆ ಅವಕಾಶವನ್ನು ನಿರಾಕರಿಸಲಾಗಿತ್ತು. ಬೀದಿಬದಿ ವ್ಯಾಪಾರಿಗಳಿಗೆ ಅವಕಾಶವಿದ್ದರಿಂದ ಹಣ್ಣು, ತರಕಾರಿ ಮಾರಾಟದಲ್ಲಿ ತೊಡಗಿದ್ದರು. ತಿಂಡಿ, ತಿನಿಸುಗಳ ಹೋಟೆಲ್‍ಗಳಿಗೂ ಕೂಡ ಪಾರ್ಸೆಲ್‍ಗೆ ಅವಕಾಶ ಕೊಡಲಾಗಿತ್ತು.
ಬಿಎಂಟಿಸಿ ಬಸ್ ಸಂಚಾರ ಸ್ಥಗಿತಗೊಂಡಿರುವುದರಿಂದ ಓಲಾ, ಊಬರ್ ಆಟೋಗಳಿಗೆ ಬೇಡಿಕೆ ಹೆಚ್ಚಿತ್ತು. ಇನ್ನು ಕೆಲವು ಜಿಲ್ಲೆಗಳಲ್ಲಿ ಕಫ್ರ್ಯೂಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ವೀಕೆಂಡ್ ಕಫ್ರ್ಯೂಗೆ ಬಹುತೇಕ ಕಡೆ ಜಿಲ್ಲೆಗಳಲ್ಲಿ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದವು. ನಗರದ ಜನ ಪ್ರಮುಖ ಸ್ಥಳ ಮತ್ತು ರಸ್ತೆಗಳಲ್ಲಿ ಜನ ಸಂಚಾರ ವಿರಳವಾಗಿತ್ತು.
ಹೋಟೆಲ್, ಮೆಡಿಕಲ್ ಶಾಪ್, ಹಾಲು, ತರಕಾರಿ ಸೇರಿದಂತೆ ಅಗತ್ಯ ವಸ್ತುಗಳ ಅಂಗಡಿಗಳು ಎಂದಿನಂತೆ ಕಾರ್ಯ ನಿರ್ವಹಿಸುತ್ತಿವೆ.ಬಸ್ ನಿಲ್ದಾಣ ಸೇರಿದಂತೆ ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆಯಿದ್ದು, ಆಯಕಟ್ಟಿನ ಜಾಗಗಳಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ವೀಕೆಂಡ್ ಕಫ್ರ್ಯೂ ಹಿನ್ನೆಲೆಯಲ್ಲಿ ಬೆಳಗ್ಗೆಯೇ ಪೊಲೀಸರು ಫೀಲ್ಡಿಗಿಳಿದಿದ್ದರು. ಅಲ್ಲಲ್ಲಿ ಬ್ಯಾರಿಕೇಡ್ ಹಾಕಿ ವಾಹನ ತಪಾಸಣೆ ನಡೆಸಲಾಯಿತು. ಕಫ್ರ್ಯೂ ಜಾರಿಯಲ್ಲಿದ್ದರೂ ಜನರ ಓಡಾಟ ನಿಂತಿಲ್ಲ. ವಿನಾಕಾರಣ ಮನೆಯಿಂದ ಆಚೆ ಬರಬಾರದೆಂದು ಪೊಲೀಸರು ತಾಕೀತು ಮಾಡಿದರು.
# ಬಸ್ ಸಂಚಾರ ವಿರಳ:
ಬಸ್ ಸಂಚಾರ ಎಂದಿನಂತೆ ಶುರುವಾದರೂ ವಿರಳವಾಗಿವೆ. ಪ್ರಯಾಣಿಕರ ಸಂಖ್ಯೆಗನುಗುಣವಾಗಿ ಬಸ್ ಸಂಚರಿಸುತ್ತಿವೆ. ಆದರೂ ನಗರ ಸಾರಿಗೆ ಹಾಗೂ ಅಂತರ ಜಿಲ್ಲಾ ಸಾರಿಗೆ ಬಸ್ ಸಂಚರಿಸುತ್ತಿದ್ದು, ಪ್ರಯಾಣಿಕರ ಅವಶ್ಯಕತೆಗೆ ತಕ್ಕಂತೆ ಸಂಚರಿಸುತ್ತಿವೆ.
ಚಾಮರಾಜನಗರ ಜಿಲ್ಲೆಯ ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟಕ್ಕೆ ಜ.7ರ ಸಂಜೆ 5 ಗಂಟೆಯಿಂದ ಜ.10 ರ ಬೆಳಗ್ಗೆ 7 ಗಂಟೆಯವರೆಗೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಸಲಾಗಿದೆ. ಇದಲ್ಲದೆ ಮೂರು ದಿನ ಭಕ್ತರ ವಾಸ್ತವ್ಯಕ್ಕೂ ನಿಷೇಧ ಹೇರಲಾಗಿದೆ.
ಉಳಿದ ದಿನಗಳಲ್ಲಿ ಜನವರಿ 19ರವರೆಗೆ ದರ್ಶನಕ್ಕೆ ಮಾತ್ರ ಅವಕಾಶವಿದ್ದು, ಚಿನ್ನದತೇರು, ಬಸವ ವಾಹನ, ರುದ್ರಾಕ್ಷಿ ಮಂಟಪೋತ್ಸವ ಸೇರಿದಂತೆ ಎಲ್ಲಾ ಉತ್ಸವ ಹಾಗೂ ಸೇವೆಗಳನ್ನು ಮುಂದಿನ ಆದೇಶದವರೆಗೆ ರದ್ದುಪಡಿಸಲಾಗಿದೆ.
