ಬೆಂಗಳೂರು,ಫೆ.17- ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ನಿರೀಕ್ಷೆಯಂತೆ ಸ್ತ್ರೀ ಸಬಲೀಕರಣಕ್ಕೆ ಉತ್ತಮ ಕೊಡುಗೆ ನೀಡಿದ್ದಾರೆ.
ವಿಧಾನಸಭೆ ಚುನಾವಣೆಯಲ್ಲಿ ಮಹಿಳಾ ಸಬಲೀಕರಣ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಹೆಣ್ಣು ಮಕ್ಕಳಿಗೆ ಹಾಗೂ ವಿದ್ಯಾರ್ಥಿಗಳಿಗಾಗಿ ಆಕರ್ಷಕ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಬಜೆಟ್ ಮಂಡನೆ ಅನ್ವಯ ಒಂದು ಲಕ್ಷ ಮಹಿಳೆಯರಿಗೆ ಉಚಿತ ಕೌಶಲ್ಯ ತರಬೇತಿ ನೀಡುವ ಬಗ್ಗೆ ಸಿಎಂ ಬೊಮ್ಮಾಯಿ ಬಜೆಟ್‍ನಲ್ಲಿ ಘೋಷಿಸಿದ್ದಾರೆ. ಇದು ಮನೆಯಲ್ಲೇ ಇರುವ ಅನೇಕ ಗೃಹಿಣಿಯರು ಹಾಗೂ ಹೆಣ್ಣು ಮಕ್ಕಳಿಗೆ ಸಹಾಯ ಮಾಡಲಿದೆ. ಮಹಿಳಾ ಕಾರ್ಮಿಕರಿಗೆ 500 ರೂ ಸಹಾಯಧನವನ್ನೂ ಈ ಬಾರಿಯ ಬಜೆಟ್ನಲ್ಲಿ ಘೋಷಿಸಲಾಗಿದೆ. ಆರ್ಥಿಕವಾಗಿ ಕಷ್ಟವನ್ನೆದುರಿಸುತ್ತಿರುವ ಬಡ ವರ್ಷಗ ಮಹಿಳೆಯರಿಗೆ ಈ ಯೋಜನೆ ಲಾಭ ತಂದುಕೊಡಲಿದೆ ಎಂದು ಹೇಳಿದ್ದಾರೆ.
ಬಜೆಟ್‍ನಲ್ಲಿ ಯಾವ ಇಲಾಖೆಗೆ ಎಷ್ಟು ಅನುದಾನ..? ಇಲ್ಲದಿ ಕಂಪ್ಲೀಟ್ ಮಾಹಿತಿ
ಅತ್ತ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಬೊಮ್ಮಾಯಿ ಬಜೆಟ್‍ನಲ್ಲಿ ಘೋಷಿಸಿದ್ದಾರೆ. ಇದು ಸ್ತ್ರೀ ಸಬಲೀಕರಣಕ್ಕೆ ಹೆಚ್ಚು ಬಲ ನೀಡಲಿದ್ದು, ಹೆಣ್ಮಕ್ಕಳ ಶಿಕ್ಷಣಕ್ಕೆ ಮತ್ತಷ್ಟು ಒತ್ತು ನೀಡಲಿದೆ. ಸಂಘಟಿತ ವಲಯದಲ್ಲಿ ದುಡಿಯುವ ಹೆಣ್ಣುಮಕ್ಕಳಿಗೆ ಉಚಿತ ಬಸ್ ಪಾಸ್ ಘೋಷಿಸಲಾಗಿದೆ. ಇದರಡಿ 30 ಲಕ್ಷ ಮಹಿಳೆಯರಿಗೆ ಅನುಕೂಲವಾಗುವಂತೆ ಒಂದು ಸಾವಿರ ಕೋಟಿ ರೂ ವ್ಯಯಿಸಿ ಯೋಜನೆ ಜಾರಿಗೊಳಿಸಲಾಗುತ್ತದೆ ಎಂದು ಪ್ರಕಟಿಸಿದರು.
ಸರ್ಕಾರಿ ಪದವಿ ಪೂರ್ವ ಮತ್ತು ಸರ್ಕಾರಿ ಪದವಿ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ಎಲ್ಲ ವಿದ್ಯಾರ್ಥಿನಿಯರಿಗೆ ಪೂರ್ಣ ಶುಲ್ಕ ವಿನಾಯಿತಿ ನೀಡಲು ನಿರ್ಧಾರ. ಈ ಉಚಿತ ಉನ್ನತ ಶಿಕ್ಷಣದಿಂದ ರಾಜ್ಯದ 8 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.
ಚುನಾವಣಾ ಹೊಸ್ತಿಲಲ್ಲಿ ಸರ್ಕಾರ ಕಾಂಗ್ರೆಸ್ ಪಕ್ಷದ ಹೊಸ ಯೋಜನೆಗೆ ಪರ್ಯಾಯವಾಗಿ ಗೃಹಿಣಿ ಶಕ್ತಿ ಯೋಜನೆ ಘೋಷಣೆ ಮಾಡಲಾಗಿದೆ. ಇದು ಈ ಬಾರಿ ಕಾಂಗ್ರೆಸ್ ಘೋಷಿಸಿದ್ದ ಪ್ರಮುಖ ಘೋಷಣೆಗಳಲ್ಲಿ ಒಂದು.ಆಸಿಡ್ ದಾಳಿಗೊಳಗಾದ ಮಹಿಳೆಯರಿಗೆ ಮಾಸಾಶನ ಹೆಚ್ಚಳ ಮಾಡಲಾಗಿದೆ. ಈ ಮೂಲಕ ಇಂತಹ ಕ್ರೌರ್ಯಕ್ಕೆ ನಲುಗಿದ ಹೆಣ್ಮಕ್ಕಳಿಗೆ ಬಲ ತುಂಬಿದಂತಾಗಿದೆ.
ಬೆಂಗಳೂರಿನಲ್ಲಿ 9 ಕಾನೂನು ಸುವ್ಯವಸ್ಥೆ, ಆರು ಮಹಿಳಾ, ಐದು ಸಂಚಾರಿ ಠಾಣೆಗಳನ್ನ ಹೊಸದಾಗಿ ಸ್ಥಾಪನೆಯ ಘೋಷಣೆ ಮಾಡಲಾಗಿದೆ. ಇದು ಹೆಣ್ಮಕ್ಕಳ ರಕ್ಷಣೆಗೆ ಮತ್ತಷ್ಟು ಒತ್ತು ನೀಡಲಿದೆ.
ಆಶಾ ಕಾರ್ಯಕರ್ತರೆಯರು, ಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕರು, ಬಿಸಿಯೂಟ ತಯಾರಕರು, ಅತಿಥಿ ಉಪನ್ಯಾಸಕರು, ಅತಿಥಿ ಶಿಕ್ಷಕರು, ಗ್ರಾಮಸಹಾಯಕರು, ಗ್ರಾಮ ಪಂಚಾಯ್ತಿ ಗ್ರಂಥಾಲಯ ಮೇಲ್ವಿಚಾರಕರು, ಗ್ರಾಮ ಪಂಚಾಯ್ತ್ರಿ ಸದಸ್ಯರ ಗೌರವ ಧನ 1000 ಹೆಚ್ಚಳ ಹಾಗೂ ಶೂನ್ಯ ಬಡ್ಡಿದರದಲ್ಲಿ ಸ್ವಸಹಾಯ ಗುಂಪುಗಳಿಗೆ ಸಾಲ ನೀಡುವ ಯೋಜನೆಯನ್ನೂ ಘೋಷಿಸಿದ್ದು, ಮಹಿಳಾ ಕೃಷಿ ಕಾರ್ಮಿಕರಿಗೆ ತಿಂಗಳಿಗೆ 500 ಸಹಾಯ ಧನ ವಿತರಣೆ. ಡಿಬಿಟಿ ಮೂಲಕ ನೀಡಲು ನಿರ್ಧಾರಿಸಲಾಗಿದೆ.
#BasavarajBommai #Budget2023, #StateBudget2023, #BommaiBudget, #ಬಜೆಟ್ #ಬಜೆಟ್2023,