Sunday, April 20, 2025
Homeರಾಜ್ಯಕಾಂಗ್ರೆಸ್‌‍-ಜೆಡಿಎಸ್‌‍ ಮೈತ್ರಿ ಸರ್ಕಾರದಲ್ಲಿ ಜಾರಿಗೆ ತಂದಿದ್ದ ಋಣಮುಕ್ತ ಕಾಯ್ದೆ ಏನಾಯ್ತು. ? : ಹೆಚ್‌ಡಿಕೆ ಪ್ರಶ್ನೆ

ಕಾಂಗ್ರೆಸ್‌‍-ಜೆಡಿಎಸ್‌‍ ಮೈತ್ರಿ ಸರ್ಕಾರದಲ್ಲಿ ಜಾರಿಗೆ ತಂದಿದ್ದ ಋಣಮುಕ್ತ ಕಾಯ್ದೆ ಏನಾಯ್ತು. ? : ಹೆಚ್‌ಡಿಕೆ ಪ್ರಶ್ನೆ

What happened to the debt-free law implemented during the Congress-JDS coalition government?

ಮೈಸೂರು,ಜ.25-ಕಾಂಗ್ರೆಸ್‌‍-ಜೆಡಿಎಸ್‌‍ ಮೈತ್ರಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದಿದ್ದ ಋಣ ಮುಕ್ತ ಕಾಯ್ದೆ ಎಂದು ಕೇಂದ್ರ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದಾರೆ.

ಕೆ.ಆರ್‌.ನಗರದಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಮಂಡಲ ಅಧಿವೇಶನದಲ್ಲಿ ಋಣ ಮುಕ್ತ ಕಾಯ್ದೆಯ ಮಸೂದೆ ಅಂಗೀಕಾರವಾಗಿದೆ. ರಾಜ್ಯಪಾಲರು ಒಪ್ಪಿಗೆ ಕೊಟ್ಟ ಮೇಲೆ ನಾನೇ ಸ್ವತಃ ದೆಹಲಿಗೆ ಹೋಗಿ ರಾಷ್ಟ್ರಪತಿಗಳ ಅಂಕಿತ ಹಾಕಿಸಿಕೊಂಡು ಬಂದೆ. ನಂತರ ಬಂದ ಸರ್ಕಾರಗಳು ಆ ಕಾಯ್ದೆಯನ್ನು ಏನು ಮಾಡಿದವು? ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಮಹಿಳೆಯರಿಗೆ 2000 ಗೃಹಲಕ್ಷಿ ಹಣ ಕೊಟ್ಟು ಸಬಲೀಕರಣ ಮಾಡುತ್ತೇವೆ ಎನ್ನುವ ರಾಜ್ಯ ಸರ್ಕಾರ, ಇನ್ನೊಂದು ಕಡೆ ಅದೇ ಮಹಿಳೆಯರ ಫೈನಾನ್ಸ್ ಗಳಿಗೆ ಧಾರಾಳವಾಗಿ ಅವಕಾಶ ಕೊಟ್ಟಿದೆ ಎಂದು ಅವರು ಕಿಡಿಕಾರಿದ್ದಾರೆ.

ಉತ್ತಮ ಆಡಳಿತಕ್ಕೆ ಕರ್ನಾಟಕ ಮಾದರಿ ಆಗಿತ್ತು. ಅದನ್ನು ಸರ್ವನಾಶ ಮಾಡಲು ಇವರು ಹೊರಟಿದ್ದಾರೆ. ಅಧಿಕಾರಕ್ಕಾಗಿ ಕಚ್ಚಾಡುತ್ತಿರುವ ಇವರು ಜನರಿಗೆ ಏನು ಮಾಡಿದ್ದಾರೆ. ಒಂದು ತಿಂಗಳ ಹಿಂದೆಯೇ ಚಾಮರಾಜನಗರದಲ್ಲಿ ಮೈಕ್ರೋಫೈನಾನ್ಸ್ ಹಾವಳಿ ಶುರುವಾಯಿತು. ಜನರು ಊರೇ ಬಿಟ್ಟು ಹೋದರು. ಸಮಸ್ಯೆ ಶುರುವಾಗಿ ಇಷ್ಟು ದಿನವಾದರೂ, ಹಾವಳಿಯ ಬಗ್ಗೆ ಮಾಧ್ಯಮಗಳಲ್ಲಿ ವರದಿಗಳು ಬಂದರೂ ಸರ್ಕಾರ ಯಾರ ವಿರುದ್ಧವೂ ಕ್ರಮ ಕೈಗೊಳ್ಳಲಿಲ್ಲ ಎಂದು ಅವರು ಆರೋಪಿಸಿದ್ದಾರೆ.

ರೈತ ಮಹಿಳೆಯರು ಮತ್ತು ಬಡ ಮಹಿಳೆಯರೇ ಹೆಚ್ಚಾಗಿ ಮೈಕ್ರೋಫೈನಾನ್ಸ್ ಗಳಿಗೆ ಗುರಿಯಾಗುತ್ತಿದ್ದಾರೆ. ಇವರೆಲ್ಲರೂ ತಮ ಮನೆ ಊರುಗಳನ್ನು ಬಿಟ್ಟು ಹೋಗುತ್ತಿದ್ದಾರೆ. ಇದಕ್ಕೆ ಯಾರು ಕಾರಣ ಕೇಂದ್ರ ಸಚಿವರು ಪ್ರಶ್ನಿಸಿದ್ದಾರೆ.

ಮೈಕ್ರೋಫೈನಾನ್ಸ್ ಕಂಪನಿಗಳು ರಾಜ್ಯದಲ್ಲಿ ನಾಯಿಕೊಡೆಗಳಂತೆ ತಲೆ ಎತ್ತಿವೆ. ಕಾನೂನುಬಾಹಿರವಾಗಿ ಚಟುವಟಿಕೆಗಳನ್ನು ನಡೆಸುತ್ತಿವೆ. ಕಾನೂನು ನಿಯಂತ್ರಣ ಇಲ್ಲ.
ದೇವರಾಜ ಅರಸು ಅವರಿಗೆ ಸರಿಸಮಾನವಾದ ಅಧಿಕಾರ ಮಾಡಿದವರು ಎಂದು ಹೇಳುತ್ತಿದ್ದೀರಿ..ಈ ಐದು ವರ್ಷ ಅಲ್ಲ, ಮುಂದಿನ ಐದು ವರ್ಷವೂ ನೀವೇ ಬನ್ನಿ. ಆದರೆ, ಜನರಿಗೆ ಒಳ್ಳೆಯದು ಮಾಡೊರುವುದನ್ನು ಹೇಳಿ ಎಂದಿದ್ದಾರೆ.

ಮಂಡ್ಯಜಿಲ್ಲೆ ಒಂದರಲ್ಲಿಯೇ 60 ಮೈಕ್ರೋಫೈನಾನ್ಸ್ ಗಳಿವೆ. ಅದರಲ್ಲಿ 14-15 ೈನಾನ್‌್ಸಗಳು ಪರವಾನಗಿ ಪಡೆದಿವೆ. ಉಳಿದವು ಕಾನೂನು ಬಾಹಿರವಾಗಿ ಚಟುವಟಿಕೆ ನಡೆಸುತ್ತಾ ಜನರಿಗೆ ತೊಂದರೆ ಕೊಡುತ್ತಿವೆ. ರಾಜ್ಯಕ್ಕೆ ಒಳ್ಳೆಯದು ಮಾಡಿ ಎಂದು ಕಾಂಗ್ರೆಸ್‌‍ ಪಕ್ಷಕ್ಕೆ ಅಧಿಕಾರ ಕೊಟ್ಟರು. ಆದರೆ, ಅವರು ಅಧಿಕಾರಕ್ಕೆ ಬಂದಾಗಿನಿಂದ ವಿರೋಧ ಪಕ್ಷಗಳನ್ನು ಅಸ್ಥಿರಗೊಳಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಅವರು ಆರೋಪ ಮಾಡಿದ್ದಾರೆ.

RELATED ARTICLES

Latest News