ಗದಗ, ಜೂ.22- ಅಕ್ರಮ ಗಣಿ ಪ್ರಕರಣಗಳ ಕುರಿತು ಸರ್ಕಾರದ ಕ್ರಮದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಕಾನೂನು ಸಚಿವ ಎಚ್.ಕೆ. ಪಾಟೀಲ ಅವರು ಬರೆದಿರುವ ಪತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಗೆ ಸ್ಪಂದಿಸುತ್ತಾರೆ ಎನ್ನುವುದು ರಾಜ್ಯದ ಜನರ ಪ್ರಶ್ನೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಚ್. ಕೆ. ಪಾಟೀಲರು ಗಣಿಯಲ್ಲಿ ನೋಂದಾಯಿತವಾಗಿರುವ ಕೇಸ್‌ಗಳ ಬಗ್ಗೆ ಶೇ. 90 ಕೇಸ್‌ಗಳು ಇತ್ಯರ್ಥವಾಗಿಲ್ಲ ಎಂದು ಅತ್ಯಂತ ಮಹತ್ವದ ವಿಚಾರ ಹೊರ ತಂದಿದ್ದಾರೆ. ಈಗಲೂ ಅವರದೇ ಸರ್ಕಾರ ಇದೆ. ಅವರದೇ ಸಚಿವ ಸಂಪುಟದ ಸದಸ್ಯರು ಎತ್ತಿರುವ ಪ್ರಕರಣಕ್ಕೆ ಮುಖ್ಯಮಂತ್ರಿಗಳು ಹೇಗೆ ಸ್ಪಂದಿಸುತ್ತಾರೆ? ಎಂದು ಪ್ರಶ್ನಿಸಿದರು.
ಎಚ್.ಕೆ. ಪಾಟೀಲರು ವಿಶೇಷ ನ್ಯಾಯಾಲಯ ಮಾಡಬೇಕು. ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ಹೇಳಿದ್ದಾರೆ. ಈಗಾಗಲೇ ಹಲವಾರು ಕೇಸುಗಳು ನೋಂದಣಿಯಾಗಿ ಎಸ್‌ಐಟಿ ರಚನೆ ಆಗಿವೆ. ಸಿಬಿಐ ತನಿಖೆ ನಡೆಯುತ್ತಿವೆ. ಎಸ್‌ಐಟಿ ಮುಖ್ಯಸ್ಥರ ಮೇಲೆ ಹಲವಾರು ಆರೋಪಗಳು ಕೇಳಿ ಬಂದಿವೆ.
ಎಚ್.ಕೆ. ಪಾಟೀಲರು 2017-18ರ ಪೂರ್ವದ ಪ್ರಕರಣಗಳ ಬಗ್ಗೆ ಮಾತನಾಡಿದ್ದಾರೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಇದ್ದಾಗ ಇಡೀ ದೇಶದಲ್ಲಿ ಗಣಿಗಳನ್ನು ಇ -ಹರಾಜು ಮಾಡಬೇಕೆಂದು ಕೇಂದ್ರ ಸರ್ಕಾರ ಕಾನೂನು ಜಾರಿ ಮಾಡಿತು. ಕೇಂದ್ರ ಸರ್ಕಾರ ಕಾನೂನು ಜಾರಿ ಮಾಡುವ ಹಿಂದಿನ ದಿನ ಕರ್ನಾಟಕ ಸರ್ಕಾರ ತನಗೆ ಬೇಕಾದವರಿಗೆ ಹಲವಾರು ಗಣಿ ಗುತ್ತಿಗೆ ನವೀಕರಣ ಮಾಡಿತ್ತು. ಅವುಗಳ ಬಗ್ಗೆಯೂ ತನಿಖೆ ಮಾಡಲು ಎಚ್.ಕೆ. ಪಾಟೇಲರ್ ಒಪ್ಪುತ್ತಾರಾ? ಎಂದರು.
ಇದೇ ವೇಳೆ ಆಳಂದ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ ಅವರು, ಸರ್ಕಾರಿ ಮನೆ ಹಂಚಿಕೆಯಲ್ಲಿ ಭ್ರಷ್ಟಾಚಾರವಾಗುತ್ತಿರುವ ಬಗ್ಗೆ ನೀಡಿರುವ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು. ಬಿ. ಆರ್. ಪಾಟೀಲ್ ಹಲವಾರು ವಿಚಾರ ಎತ್ತುತ್ತಾರೆ. ಅವರ ಮಾತಿಗೆ ಕಾಂಗ್ರೆಸ್‌ನವರು ಯಾರೂ ಮರ್ಯಾದೆ ಕೊಡುತ್ತಿಲ್ಲ. ಭ್ರಷ್ಟಾಚಾರದ ವಿರುದ್ಧ ಮಾತನಾಡುವವರಿಗೆ ಕಾಂಗ್ರೆಸ್‌ನಲ್ಲಿ ಮರ್ಯಾದೆ ಇಲ್ಲ ಎನ್ನುವುದು ಬಹಳ ಸ್ಪಷ್ಟವಾಗಿದೆ ಎಂದು ಹೇಳಿದರು.
- “ಸಿದ್ದರಾಮಯ್ಯನವರೇ, ಗುಲಾಮಿ ಸಂಸ್ಕೃತಿಯ ಕಾಂಗ್ರೆಸ್ ನೆರಳಿನಲ್ಲಿ ನಿಂತು RSS ಕುರಿತು ಮಾತನಾಡುವ ಅರ್ಹತೆ ನಿಮಗಿಲ್ಲ”
- ವಿಶ್ವದ ಅತ್ಯಂತ ದುಬಾರಿ ನಿಸಾರ್ ಉಪಗ್ರಹವನ್ನು ಯಶಸ್ವಿಯಾಗಿ ಕಕ್ಷೆಗೆ ಜೋಡಿಸುವಲ್ಲಿ ಇಸ್ರೋ -ನಾಸಾ ಯಶಸ್ವಿ
- ಭಾರತ- ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ : ಮತೊಮ್ಮೆ ಕನವರಿಸಿದ ಟ್ರಂಪ್
- ಶ್ರೀ ಕ್ಷೇತ್ರದ ಕುರಿತು ಅಪಪ್ರಚಾರ ಖಂಡಿಸಿ ಬಿಜೆಪಿಯಿಂದ ‘ಧರ್ಮಸ್ಥಳ ಚಲೋ’ ಅಭಿಯಾನ
- ಧರ್ಮಸ್ಥಳ ಅನಾಮಿಕನ ಪ್ರಕರಣ : ಎಸ್ಐಟಿಯಿಂದ ಮಧ್ಯಂತರ ವರದಿ