Thursday, June 20, 2024
Homeರಾಷ್ಟ್ರೀಯಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ವಿದೇಶಿ ಗಣ್ಯರಿಗೆ ಆಹ್ವಾನ

ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ವಿದೇಶಿ ಗಣ್ಯರಿಗೆ ಆಹ್ವಾನ

ನವದೆಹಲಿ, ಜೂ.6 (ಪಿಟಿಐ) ವಾರಾಂತ್ಯದಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಶ್ರೀಲಂಕಾ, ಬಾಂಗ್ಲಾದೇಶ ಸೇರಿದಂತೆ ಹಲವು ನೆರೆಯ ರಾಷ್ಟ್ರಗಳ ನಾಯಕರನ್ನು ಆಹ್ವಾನಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ನೇತತ್ವದ ರಾಷ್ಟ್ರೀಯ ಪ್ರಜಾಸತ್ತಾತಕ ಒಕ್ಕೂಟ (ಎನ್‌ಡಿಎ) 293 ಸ್ಥಾನಗಳನ್ನು ಗೆಲ್ಲುವ ಮೂಲಕ ಐತಿಹಾಸಿಕ ಮೂರನೇ ಅವಧಿಗೆ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಳ್ಳಲು ಮೋದಿ ಸಜ್ಜಾಗಿದ್ದಾರೆ.
ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ವಿದೇಶಿ ನಾಯಕರಲ್ಲಿ ಬಾಂಗ್ಲಾದೇಶ, ಶ್ರೀಲಂಕಾ, ಭೂತಾನ್‌, ನೇಪಾಳ ಮತ್ತು ಮಾರಿಷಸ್‌‍ನ ಪ್ರಮುಖ ನಾಯಕರು ಆಹ್ವಾನಿತರಾಗುವ ಸಾಧ್ಯತೆಯಿದೆ.

ಶ್ರೀಲಂಕಾ ಅಧ್ಯಕ್ಷ ರನಿಲ್‌ ವಿಕ್ರಮಸಿಂಘೆ ಅವರ ಕಚೇರಿಯ ಮಾಧ್ಯಮ ವಿಭಾಗವು ಮೋದಿ ಅವರನ್ನು ಪ್ರಮಾಣ ವಚನ ಸಮಾರಂಭಕ್ಕೆ ಆಹ್ವಾನಿಸಿದ್ದಾರೆ ಎಂದು ಹೇಳಿದೆ. ವಿಕ್ರಮಸಿಂಘೆ ಅವರು ಆಹ್ವಾನವನ್ನು ಸ್ವೀಕರಿಸಿದರು ಮತ್ತು ಚುನಾವಣಾ ವಿಜಯಕ್ಕಾಗಿ ಮೋದಿಯನ್ನು ದೂರವಾಣಿ ಕರೆಯಲ್ಲಿ ಅಭಿನಂದಿಸಿದರು ಎನ್ನಲಾಗಿದೆ.

ಸಂವಾದದ ಸಮಯದಲ್ಲಿ, ಪ್ರಧಾನ ಮಂತ್ರಿ ಮೋದಿ ಅವರು ತಮ ಪ್ರಮಾಣವಚನ ಸಮಾರಂಭಕ್ಕೆ ಅಧ್ಯಕ್ಷ ವಿಕ್ರಮಸಿಂಘೆ ಅವರನ್ನು ಆಹ್ವಾನಿಸಿದರು ಎಂದು ತಿಳಿದುಬಂದಿದೆ.ಮೋದಿ ಅವರು ಬಾಂಗ್ಲಾದೇಶದ ಪ್ರಧಾನಿ ಶೇಖ್‌ ಹಸೀನಾ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು ಮತ್ತು ಅವರು ತಮ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನಿಸಿದರು ಎಂದು ರಾಜತಾಂತ್ರಿಕ ಮೂಲಗಳು ತಿಳಿಸಿವೆ.

ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ನೇಪಾಳದ ಪ್ರಧಾನಿ ಪುಷ್ಪ ಕಮಲ್‌ ದಹಲ್‌ ಪ್ರಚಂಡ, ಭೂತಾನ್‌ ಪ್ರಧಾನಿ ತ್ಶೆರಿಂಗ್‌ ತೊಬ್ಗೇ ಮತ್ತು ಮಾರಿಷಸ್‌‍ ಪ್ರಧಾನಿ ಪ್ರವಿಂದ್‌ ಜುಗ್ನಾಥ್‌ ಅವರನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ವರದಿಯಾಗಿದೆ.

ಬಿಜೆಪಿಗೆ ಭಾರೀ ಚುನಾವಣಾ ಗೆಲುವಿನ ನಂತರ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಮೋದಿ ಅವರ ಮೊದಲ ಪ್ರಮಾಣ ವಚನ ಸಮಾರಂಭದಲ್ಲಿ ಪ್ರಾದೇಶಿಕ ಗುಂಪುಗಳಾದ ಸಾರ್ಕ್‌ (ದಕ್ಷಿಣ ಏಷ್ಯಾದ ಪ್ರಾದೇಶಿಕ ಸಹಕಾರ ಸಂಘ) ದೇಶಗಳ ನಾಯಕರು ಭಾಗವಹಿಸಿದ್ದರು.

RELATED ARTICLES

Latest News