ಪತ್ನಿ ಕೊಂದು ವಿಮಾನದಲ್ಲಿ ಪರಾರಿಯಾಗಿದ್ದ ಖತರ್ನಾಕ್ ಪತಿ ಸೆರೆ

Social Share

ಬೆಂಗಳೂರು,ಜ.22- ಪತ್ನಿಯನ್ನು ಕೊಂದು ವಿಮಾನದಲ್ಲಿ ದೆಹಲಿಗೆ ಪರಾರಿಯಾಗಿದ್ದವನನ್ನು ಸದ್ದುಗುಂಟೆ ಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಾಫ್ಟ್‍ವೇರ್ ಎಂಜಿನಿಯರ್ ನಾಝ್‍ಳನ್ನು ಪ್ರೀತಿಸಿ ವಿವಾಹವಾಗಿ ಕೊಲೆ ಮಾಡಿ ಪರಾರಿಯಾಗಿದ್ದ ನಾಸಿರ್ ಹುಸೇನ್‍ನನ್ನು ಪೊಲೀಸರು ದೆಹಲಿಯಲ್ಲಿ ಬಂಧಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘಟನೆ ವಿವರ:
ಅನಾಥನಾಗಿದ್ದ ನಾಸೀರ್ ಹುಸೇನ್ ಮತ್ತು ನಾಝ್ ಪರಸ್ಪರ ಪ್ರೀತಿಸಿ ಕಳೆದ ಆರು ತಿಂಗಳಷ್ಟೇ ವಿವಾಹವಾಗಿ ತಾವರೆಕೆರೆಯ ಸುಭಾಷ್ ನಗರದ ಅಪಾರ್ಟ್‍ಮೆಂಟ್‍ವೊಂದರಲ್ಲಿ ವಾಸವಾಗಿದ್ದರು. ಇತ್ತೀಚೆಗಷ್ಟೇ ಗರ್ಭಿಣಿಯಾಗಿದ್ದ ನಾಝ್ ಮೇಲೆ ನಾಸಿರ್ ಅನುಮಾನ ವ್ಯಕ್ತಪಡಿಸಿದ್ದ. ಇದರಿಂದ ದಂಪತಿ ಮಧ್ಯೆ ಇತ್ತೀಚೆಗೆ ಕಲಹ ಏರ್ಪಟ್ಟಿತ್ತು.

ದುಬೈ ಅಧಿಕಾರಿಯಂತೆ ನಟಿಸಿ ಲೀಲಾ ಪ್ಯಾಲೇಸ್‍ಗೆ ವಂಚಿಸಿದ್ದ ಆರೋಪಿ ಸೆರೆ

ನಿನ್ನ ಹೊಟ್ಟೆಯಲ್ಲಿರುವ ಮಗು ನನ್ನದಲ್ಲ ಎನ್ನುತ್ತಿದ್ದ ನಾಸಿರ್, ಗರ್ಭಪಾತ ಮಾಡಿಸಿಕೊಳ್ಳುವಂತೆಯೂ ಒತ್ತಾಯಿಸಿದ್ದ. ಇದು ನಾಝ್‍ಗೆ ಇಷ್ಟವಿಲ್ಲದಿದ್ದರಿಂದ ಇಬ್ಬರ ನಡುವೆ ಆಗಾಗ ಗಲಾಟೆ ಆಗುತ್ತಿತ್ತು. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಜಗಳ ವಿಕೋಪಕ್ಕೆ ಹೋಗಿತ್ತು. ಸಂಚು ರೂಪಿಸಿದ್ದ ನಾಸಿರ್ ನಾಝ್‍ಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ಪರಾರಿಯಾಗಿದ್ದ.

ಕೊಲೆ ಮಾಡುವ ಮೊದಲೇ ನಾಸಿರ್ ದೆಹಲಿಗೆ ವಿಮಾನ ಟಿಕೆಟ್ ಬುಕ್ ಮಾಡಿದ್ದ. ನಂತರ ಕೊಲೆ ಮಾಡಿ ಟ್ಯಾಕ್ಸಿ ಮೂಲಕ ವಿಮಾನ ನಿಲ್ದಾಣಕ್ಕೆ ತೆರಳಿದ್ದ. ನಂತರ ಟ್ಯಾಕ್ಸಿ ಚಾಲಕನಿಗೆ 4000 ರೂ. ಹಣ ಫೋನ್ ಪೇ ಮಾಡಿ 3500 ರೂ. ಹಣವನ್ನು ಮರಳಿ ಪಡೆದುಕೊಂಡಿದ್ದ.

ಜೆಡಿಎಸ್ ಸ್ವಂತಬಲದ ಮೇಲೆ ಅಧಿಕಾರ ಹಿಡಿಯಲು ಬೆಂಬಲ ನೀಡಿ: ನಿಖಿಲ್

ದೆಹಲಿ ವಿಮಾನ ಟೇಕ್‍ಆಫ್ ಆಗುತ್ತಿದ್ದಂತೆ ಕೊನೆ ಕ್ಷಣದಲ್ಲಿ ಪತ್ನಿ ನಾಝ್‍ಳನ್ನು ಕೊಲೆ ಮಾಡಿರುವುದಾಗಿ ಆಕೆಯ ಸಹೋದರನಿಗೆ ಮೆಸೇಜ್ ಮಾಡಿ ನಿನ್ನ ತಂಗಿಯ ಅಕ್ರಮ ಸಂಬಂಧಕ್ಕೆ ಕೋಪಗೊಂಡು ಕೊಲೆ ಮಾಡಿದ್ದೇನೆ. ಮನೆಗೆ ಹೋಗಿ ಮೃತದೇಹವನ್ನು ತೆಗೆದುಕೊಳ್ಳಿ ಎಂದು ಮೆಸೇಜ್ ಮಾಡಿ ಮೊಬೈಲ್ ಸ್ವಿಚ್‍ಆಫ್ ಮಾಡಿ ಪರಾರಿಯಾಗಿದ್ದ.

ಈ ಸಂಬಂಧ ಪ್ರಕರಣ ದಾಖಲಿಸಿ ಕಾರ್ಯಾಚರಣೆ ಕೈಗೊಂಡ ಸದ್ದುಗುಂಟೆ ಪಾಳ್ಯ ಠಾಣೆ ಪೊಲೀಸರು ಮೊಬೈಲ್ ಜಾಡು ಹಿಡಿದು ದೆಹಲಿಗೆ ತೆರಳಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿಚಿತ್ರವೆಂದರೆ ಮಗಳನ್ನು ಕೊಟ್ಟ ಮದುವೆ ಮಾಡಿಕೊಟ್ಟ ಮನೆಯವರಿಗೆ ಅಳಿಯ ನಾಸಿರ್ ಬಗ್ಗೆ ಸಂಪೂರ್ಣ ಮಾಹಿತಿಯೇ ಇರಲಿಲ್ಲ ಎಂಬುದು ತಿಳಿದು ಬಂದಿದೆ.

wife, killed, husband, escaped, Delhi, police, arrested,

Articles You Might Like

Share This Article