ಶಿಡ್ಲಘಟ್ಟ, ಫೆ.22- ತಾಯಿ ಹಾಗೂ ಇಬ್ಬರು ಮಕ್ಕಳ ಮೇಲೆ ಹಲ್ಲೆ ಮಾಡಿ ಅವರ ಮೈ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿರುವ ಘಟನೆ ಇಂದು ಮುಂಜಾನೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಹೆಣ್ಣೂರು ಗ್ರಾಮದ ಸೊಣ್ಣೆಗೌಡ ಅವರ ಪತ್ನಿ ನೇತ್ರಾವತಿ(37), ಪುತ್ರಿಯರಾದ ಸ್ನೇಹ(11) ಹಾಗೂ ವರ್ಷ( 9) ಕೊಲೆಯಾದವರು.
ಈ ನಡುವೆ ಸೊಣ್ಣೇಗೌಡ ಕ್ರಿಮಿನಾಶಕ ಔಷಧಿಯನ್ನು ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದು, ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರು ಆಸ್ಪತ್ರೆಗೆ ರವಾನಿಸಲಾಗಿದ್ದು , ಚಿಕಿತ್ಸೆ ಪಡೆಯುತ್ತಿದ್ದಾನೆ.
ಸ್ಥಳಕ್ಕೆ ಶಿಡ್ಲಘಟ್ಟ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಗಣ್ಯವ್ಯಕ್ತಿಗಳಿಗೆ ವಿನಾಯ್ತಿ ಪಾಸ್‍ಟ್ಯಾಗ್ ವಿತರಣೆ
ಕೌಟುಂಬಿಕ ಕಲಹದಿಂದ ಸೊಣ್ಣೇಗೌಡನೇ ಪತ್ನಿ ಹಾಗೂ ಮಕ್ಕಳಿಗೆ ಬೆಂಕಿ ಹಚ್ಚಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸೊಣ್ಣೇಗೌಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆತನಿಂದ ಹೇಳಿಕೆ ಪಡೆದ ನಂತರ ಹಾಗೂ ಪೊಲೀಸರ ತನಿಖೆಯಿಂದ ನಿಜಾಂಶ ಹೊರಬರಲಿದೆ.
ಗೋವಾಕ್ಕೆ ಗೋಮಾಂಸ ರಫ್ತು ಮಾಡುತ್ತಿರುವುದಾಗಿ ಒಪ್ಪಿಕೊಂಡ ರಾಜ್ಯ ಸರ್ಕಾರ
ಮೂವರ ಮೃತ ದೇಹಗಳನ್ನು ಶಿಡ್ಲಘಟ್ಟ ಸಾರ್ವಜನಿಕ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ.
ಪ್ರಕರಣ ದಾಖಲಿಸಿಕೊಂಡಿರುವ ಶಿಡ್ಲಘಟ್ಟ ಗ್ರಾಮಾಂತರ ಠಾಣೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
wife, two children, killed, sidlaghatta,