ಕಾಂಗ್ರೆಸ್, ಎಡಪಕ್ಷಗಳ ಮೈತ್ರಿ ಸಹವಾಸ ಸಾಕು ; ದೀದಿ

Social Share

ಕೋಲ್ಕತ್ತಾ, ಮಾ.3- ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಮ್ಮ ಪಕ್ಷ ಏಕಾಂಗಿಯಾಗಿ ಹೋರಾಡಲಿದೆ. ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಟಿಎಂಸಿ ಹೇಳಿದೆ ಇದರಿಂದಾಗಿ ಪ್ರಾದೇಶಿಕ ಪಕ್ಷಗಳ ಮೈತ್ರಿಯೊಂದಿಗೆ 2024ರ ಲೋಕಸಭಾ ಚುನಾವಣೆಯಲ್ಲಿ ಒಗ್ಗೂಡಿ ಬಿಜೆಪಿ ವಿರುದ್ಧ ಹೋರಾಡಿ ಗೆಲ್ಲುವ ಕನಸು ಕಾಣುತ್ತಿದ್ದ ಕಾಂಗ್ರೆಸ್ ಪಕ್ಷಕ್ಕೆ ಮತ್ತೆ ನಿರಾಶೆಯಾಗಿದೆ.

ಬಿಜೆಪಿ ವಿರೋಧಿಗಳೆಂದು ಹೇಳಿಕೊಳ್ಳುತ್ತಿರುವ ಸಿಪಿಎಂ ಮತ್ತು ಕಾಂಗ್ರೆಸ್ ಪಕ್ಷಗಳು ಕೇಸರಿ ಪಕ್ಷದೊಂದಿಗೆ ಅಪವಿತ್ರ ಮೈತ್ರಿ ಮಾಡಿಕೊಂಡಿವೆ ಅಂತಹ ಪಕ್ಷದೊಂದಿಗೆ ನಮ್ಮ ಪಕ್ಷ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ತೃಣಮೂಲ ಕಾಂಗ್ರೆಸ್ ಪಕ್ಷದ ಮುಖ್ಯಸ್ಥೆ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ಪಷ್ಟಪಡಿಸಿದ್ದಾರೆ.

ಬಂಗಾಳದ ಸರ್ದಿಘಿ ವಿಧಾನಸಭೆಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಟಿಎಂಸಿ ಪಕ್ಷದ ಅಭ್ಯರ್ಥಿಯನ್ನು ಸೋಲಿಸಿದ ನ ಂತರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ದೀದಿ ಆ ಪಕ್ಷದ ಸಹವಾಸವೇ ಬೇಡ ಎಂದಿದ್ದಾರೆ.

ಪ್ರವಾಹ ಅವಘಡಗಳ ತಡೆಗೆ ಬಿಬಿಎಂಪಿ ಬಜೆಟ್​​​ನಲ್ಲಿ 55ಕೋಟಿ ರೂ. ಅನುದಾನ

ಕಾಂಗ್ರೆಸ್, ಎಡ ಪಕ್ಷಗಳು ಮತ್ತು ಬಿಜೆಪಿ ಎಲ್ಲರೂ ಸರ್ದಿಘಿಯಲ್ಲಿ ಕೋಮು ಭಾವನೆಯ ಆಟ ಆಡಿದ್ದಾರೆ. ವ್ಯತ್ಯಾಸವೆಂದರೆ ಬಿಜೆಪಿ ಇದನ್ನು ಬಹಿರಂಗವಾಗಿ ಆಡಿದೆ, ಆದರೆ ಸಿಪಿಎಂ ಮತ್ತು ಕಾಂಗ್ರೆಸ್ ಪಕ್ಷಗಳು ಕದ್ದು ಮುಚ್ಚಿ ತಮ್ಮ ಬೇಳೆ ಬೇಯಿಸಿಕೊಂಡಿವೆ ಎಂದು ದೀದಿ ಕಿಡಿ ಕಾರಿದ್ದಾರೆ.

ನಾವು ಸಿಪಿಎಂ ಅಥವಾ ಕಾಂಗ್ರೆಸ್ ಮಾತನ್ನು ಕೇಳಬಾರದು… ಬಿಜೆಪಿ ಜತೆ ಕೆಲಸ ಮಾಡುವವರು ಅವರೊಂದಿಗೆ ಮೈತ್ರಿ ಮಾಡಿಕೊಳ್ಳಲು ಸಾಧ್ಯವಿಲ್ಲ’ ಎಂಬುದಕ್ಕೆ ಇದೊಂದು ಪಾಠ ಎಂದು ಅವರು ಹೇಳಿದರು.

ಕುಡಿದು ನಿಂದಿಸಿದ ವ್ಯಕ್ತಿ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಮುಂದಿನ ಪ್ರಧಾನಿ ಹುದ್ದೆ ಮೇಲೆ ದೀದಿ ಕಣ್ಣಿಟ್ಟಿರುವುದು ಎಲ್ಲರಿಗೂ ತಿಳಿದಿರುವ ವಿಚಾರವೇ ನಿತೀಶ್‍ಕುಮಾರ್, ಆರವಿಂದ್ ಕೇಜ್ರಿವಾಲ್, ಕೆ. ಚಂದ್ರಶೇಖರ ರಾವ್ ಅವರೊಂದಿಗೆ ದೀದಿ ಅವರ ಹೆಸರು ಮುಂದಿನ ಪ್ರಧಾನಿ ಹುದ್ದೇಗೆ ಕೇಳಿ ಬಂದಿದೆ. ಇಂತಹ ಸಂದರ್ಭದಲ್ಲಿ ಅವರು ಸಿಪಿಎಂ ಮತ್ತು ಕಾಂಗ್ರೆಸ್ ಪಕ್ಷಗಳ ಮೇಲೆ ವಾಗ್ದಾಳಿ ನಡೆಸಿರುವುದು ಅಚ್ಚರಿ ಮೂಡಿಸಿದೆ.

ಬಿಜೆಪಿಯನ್ನು ಸೋಲಿಸಲು ಬಯಸುವವರು, ಅವರು ನಮಗೆ ಮತ ಹಾಕುತ್ತಾರೆ ಎಂದು ನಾನು ನಂಬುತ್ತೇನೆ . ಕಾಂಗ್ರೆಸ್, ಎಡಪಕ್ಷ ಹಾಗೂ ಬಿಜೆಪಿ ವಿರುದ್ಧ ಹೋರಾಡಲು ನಮ್ಮ ಪಕ್ಷ ಸಮರ್ಥವಾಗಿದೆ ಎಂದು ಅವರು ಹೇಳಿಕೊಂಡಿದ್ದಾರೆ.

“WillFightAlone, Mamata Banerjee, Rules Out, Any, Alliance , 2024,

Articles You Might Like

Share This Article