ಬೆಂಗಳೂರು,ಜು.6- ರಾಷ್ಟ್ರ ರಾಜಕಾರಣಕ್ಕೆ ಹೋಗುವ ಪ್ರಶ್ನೆಯೇ ಇಲ್ಲ ಎಂದಿರುವ ಸಿಎಂ ತಮಗೆ ಯಾವ ರೀತಿಯ ಹುದ್ದೆ ನೀಡಿದ್ದಾರೋ ಗೊತ್ತಿಲ್ಲ, ವಿಷಯ ತಿಳಿದ ಬಳಿಕ ಅದರ ಬಗ್ಗೆ ಪ್ರತಿಕ್ರಿಯೆ ನೀಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಒಂದೊಂದು ಪತ್ರಿಕೆಗಳಲ್ಲಿ ಒಂದೊಂದು ರೀತಿ ಬಂದಿದೆ. ಯಾವ ರೀತಿ ಹುದ್ದೆ ನೀಡಿದ್ದಾರೆ ಎಂದು ಗೊತ್ತಿಲ್ಲ. ಓಬಿಸಿ ಸಮುದಾಯಗಳ ಸಭೆ ಮಾಡಿ ಎಂದು ಎಐಸಿಸಿಯ ಓಬಿಸಿ ಘಟಕದ ಅಧ್ಯಕ್ಷರು ಸೂಚನೆ ನೀಡಿದರು. ಅದರಂತೆ 15 ರಂದು ಕರ್ನಾಟಕದಲ್ಲಿ ರಾಷ್ಟ್ರೀಯ ಸಭೆ ನಿಗದಿ ಮಾಡಿದ್ದೇನೆ ಎಂದರು.
ಎಐಸಿಸಿ ಹುದ್ದೆ ಕೊಟ್ಟಾಗ ಅದನ್ನು ಬಿಟ್ಟು ಓಡಿಹೋಗಲು ಸಾಧ್ಯವಿಲ್ಲ. ಜವಾಬ್ದಾರಿ ನಿಭಾಯಿಸಬೇಕಾಗುತ್ತದೆ. ನನ್ನನ್ನು ಸಂಚಾಲಕನನ್ನಾಗಿ ಮಾಡಲಾಗಿದೆಯೋ ಅಥವಾ ಯಾವ ರೀತಿ ಹುದ್ದೆ ನೀಡಿದ್ದಾರೆ ಎಂದು ತಿಳಿಯದೆ ತಾವು ಪ್ರತಿಕ್ರಿಯಿಸುವುದಿಲ್ಲ. ಹೈಕಮಾಂಡ್ ಜೊತೆ ಚರ್ಚೆ ಮಾಡುತ್ತೇನೆ. ತಾವು ಯಾವುದೇ ಹುದ್ದೆಯನ್ನೂ ಕೇಳಿರಲಿಲ್ಲ ಎಂದು ಹೇಳಿದರು.
ಶಿವಮೊಗ್ಗದಲ್ಲಿ ನಡೆದಿರುವ ಕೋಮುಗಲಭೆ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದು ಸ್ಪಷ್ಟಪಡಿಸಿದರು.ಗ್ಯಾರಂಟಿ ಯೋಜನೆಗಳಲ್ಲಿ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ. ಅವುಗಳನ್ನು ಬಡವರ ಅಭಿವೃದ್ಧಿಗಾಗಿ ರೂಪಿಸಲಾಗಿದೆ. ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಹಾಗೂ ಸೇತುವೆಗಳ ನಿರ್ಮಾಣ ಸೇರಿದಂತೆ ಇತರ ಕಾಮಗಾರಿಗಳಿಗೆ ಹಣ ನೀಡಲಾಗುತ್ತಿದೆ. ಪಕ್ಷಾತೀತವಾಗಿ ಎಲ್ಲಾ ಪಕ್ಷದವರಿಗೂ ಹಣ ನೀಡುತ್ತಿರುವುದಾಗಿ ಹೇಳಿದರು.
ಕಾಂಗ್ರೆಸ್‌ನ ಶಾಸಕ ಬಸವರಾಜರಾಯರೆಡ್ಡಿ ರಸ್ತೆ ಅಭಿವೃದ್ಧಿಯಾಗಬೇಕಾದರೆ ಗ್ಯಾರಂಟಿ ಯೋಜನೆಗಳನ್ನು ಕೈಬಿಡಿ ಎಂದು ನೀಡಿರುವ ಹೇಳಿಕೆಗೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು.ಸಿದ್ದರಾಮಯ್ಯ ಅವರನ್ನು ಎಐಸಿಸಿಯ ಹಿಂದುಳಿದ ವರ್ಗಗಳ ಘಟಕಗಳ ಸಲಹಾ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಇದು ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ ತೆರಳುತ್ತಾರೆ ಎಂಬ ಚರ್ಚೆಗಳನ್ನು ಹುಟ್ಟುಹಾಕಿತ್ತು. ಆದರೆ ಕೊನೆಗೆ ಸಿದ್ದರಾಮಯ್ಯ ತಾವು ರಾಷ್ಟ್ರ ರಾಜಕಾರಣಕ್ಕೆ ಹೋಗುವುದಿಲ್ಲ ಎಂದು ಹೇಳುವ ಮೂಲಕ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.
- ಮದುವೆಯಾಗದಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ
- ಉದ್ಯಮಿಯನ್ನು ಕಟ್ಟಿ ಹಾಕಿ ಚಿನ್ನ,ಹಣ ಲೂಟಿ
- ಸಣ್ಣ ವ್ಯಾಪಾರಿಗಳಿಗೆ ಜಿಎಸ್ಟಿ ನೋಟಿಸ್ ಗೊಂದಲಕ್ಕೆ ಕೇಂದ್ರ ಸರ್ಕಾರವೇ ಹೊಣೆ : ಸಿಎಂ ಸ್ಪಷ್ಟನೆ
- ಉದ್ಧಟತನ ತೋರುವ ಸಚಿವರನ್ನು ಸಂಪುಟದಿಂದ ಕೈಬಿಡುವಂತೆ ಡಿಕೆಶಿಗೆ ‘ಕೈ’ಕಮಾಂಡ್ ಸೂಚನೆ
- ಒಬ್ಬ ಮಹಿಳೆಯೊಂದಿಗೆ ಇಬ್ಬರು ಪುರುಷರ ಮದುವೆ : ಹಿಮಾಚಲದಲ್ಲಿ ಮರುಜೀವ ಪಡೆದ ಬಹುಪತಿತ್ವ