Saturday, December 28, 2024
Homeರಾಷ್ಟ್ರೀಯ | Nationalರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಲಿದೆಯಾ ಸಚಿನ್ ಆತಹತ್ಯೆ ಪ್ರಕರಣ..?!

ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಲಿದೆಯಾ ಸಚಿನ್ ಆತಹತ್ಯೆ ಪ್ರಕರಣ..?!

Will Sachin's suicide case create a stir in state politics?!

ಬೆಂಗಳೂರು,ಡಿ.27– ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತನ ಹೆಸರು ಬರೆದಿಟ್ಟು ಆತಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಚಿನ್ ಮಾನಪ್ಪ ಪಾಂಚಾಳ್ (26) ಪ್ರಕರಣ ಇದೀಗ ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡುವ ಸಾಧ್ಯತೆ ದಟ್ಟವಾಗಿದೆ.

ಬಿಜೆಪಿ ವಿರುದ್ಧ ದಾಖಲೆಗಳ ಜೊತೆಗೆ ಸದಾ ವಾಗ್ದಾಳಿ ನಡೆಸುತ್ತಿದ್ದ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿಗೆ ಇದೀಗ ಬ್ರಹಾಸ್ತ್ರ ದೊರಕಿದ್ದು, ಈ ಹಿಂದೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಪ್ರಕರಣದಲ್ಲಿ ಕಾಂಗ್ರೆಸ್ ನಡೆಸಿದ್ದ ಹೋರಾಟದ ಮಾದರಿಯಲ್ಲೇ ಪ್ರಿಯಾಂಕ್ ವಿರುದ್ಧ ಹೋರಾಟ ರೂಪಿಸಲು ಬಿಜೆಪಿ ನಾಯಕರು ಮುಂದಾಗಿದ್ದಾರೆ.

ಭಾಲ್ಕಿ ತಾಲ್ಲೂಕಿನ ಕಟ್ಟಿತೂಗಾಂವ್ ನಿವಾಸಿ ಸಿವಿಲ್ ಎಂಜಿನಿಯರ್ ಸಚಿನ್ ಮಾನಪ್ಪ ರೈಲಿನ ಹಳಿಗೆ ತಲೆ ಕೊಟ್ಟು ಆತಹತ್ಯೆ ಮಾಡಿಕೊಂಡಿದ್ದರು. ಆತಹತ್ಯೆಗೂ ಮುನ್ನ ಬರೆದಿದ್ದ ಡೆತ್ನೋಟ್ನಲ್ಲಿ, ಸಚಿವ ಪ್ರಿಯಾಂಕ್ ಖರ್ಗೆಯವರ ಆಪ್ತ ಹಾಗೂ ಕಾಂಗ್ರೆಸ್ ಮುಖಂಡ ರಾಜು ಕಪನೂರ ಸೇರಿ 8 ಮಂದಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಹಾಗೂ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಉಲ್ಲೇಖಿಸಲಾಗಿತ್ತು.

ಸಚಿನ್ ಸಹೋದರಿ ನೀಡಿರುವ ದೂರಿನ ಆಧಾರದಲ್ಲಿ ಈಗಾಗಲೇ 9 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ತನ್ನ ಸಹೋದರನ ಸಾವಿಗೆ ಕಾರಣ ರಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಚಿನ್ ಅವರ ಸಹೋದರಿ ಸವಿತಾ ಆಗ್ರಹಿಸಿದ್ದು, ಡೆತ್ ನೋಟ್ನಲ್ಲಿ ಆರೋಪಿಸಿದ ವ್ಯಕ್ತಿಗಳ ಕಿರುಕುಳದಿಂದಲೇ ಸಹೋದರನ ಸಾವಾಗಿದೆ ಎಂದು ಆರೋಪಿಸಿದ್ದಾರೆ.

ಪ್ರಕರಣದಲ್ಲಿ ಪ್ರಿಯಾಂಕ್ ಖರ್ಗೆ ಆಪ್ತನ ಹೆಸರು ಕೇಳಿ ಬರುತ್ತಿದ್ದಂತೆ ಬಿಜೆಪಿ ಅಲರ್ಟ್ ಆಗಿದೆ. ಈ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇದ್ರ ಕಾಂಗ್ರೆಸ್ ಸರ್ಕಾರದಲ್ಲಿ ಕೆಲವು ಮಂತ್ರಿಗಳು ತಮ ಬಲಗೈ ಬಂಟರು ಹಾಗೂ ಆಪ್ತ ಸಹಾಯಕರಿಗೆ ಜನರಲ್ ಪವರ್ ಆಫ್ ಅಟಾರ್ನಿ ನೀಡಿದಂತಿದೆ.

ಇತ್ತೀಚೆಗಷ್ಟೇ ಸಚಿವೆ ಲಕ್ಷೀ ಹೆಬ್ಬಾಳ್ಕರ್ ಅವರ ಆಪ್ತ ಸಹಾಯಕನ ಕಿರುಕುಳಕ್ಕೆ ತಹಸೀಲ್ದಾರ್ ಕಚೇರಿಯ ಎಸ್ಡಿಎ ರುದ್ರೇಶ್ ಆತಹತ್ಯೆ, ಇದರ ಬೆನ್ನಲ್ಲೇ ವಿಧಾನಮಂಡಲದ ಸುವರ್ಣ ಸೌಧಕ್ಕೆ ನುಗ್ಗಿ ಶಾಸಕರಾದ ಸಿಟಿ ರವಿ ಅವರ ಮೇಲೆ ಗೂಂಡಾಗಿರಿ ಪ್ರದರ್ಶಿಸಿದ್ದ ಸುದ್ದಿ ಹಸಿಯಾಗಿರುವಾಗಲೇ ಇಂದು ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ರಾಜು ಕಪನೂರನ ಕಿರುಕುಳ ಹಾಗೂ ಬೆದರಿಕೆಯಿಂದ ತತ್ತರಿಸಿದ್ದ ಬೀದರ್ ನ ಗುತ್ತಿಗೆದಾರ ಸಚಿನ್ ಸುದೀರ್ಘ ಪತ್ರ ಬರೆದು ಆತಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪ ಮಾಡಿದ್ದಾರೆ.

ಸರ್ಕಾರ ಪಂಚ ಗ್ಯಾರಂಟಿಗಳ ಜೊತೆಗೆ ಆತಹತ್ಯೆಯ ಭಾಗ್ಯವನ್ನೂ ಕರುಣಿಸಿ ನತದೃಷ್ಟ ಕುಟುಂಬಗಳನ್ನು ಅನಾಥವಾಗಿಸಲು ಹೊರಟಿದೆ. ಪ್ರತಿಯೊಂದು ವಿಷಯದಲ್ಲೂ ಅನಗತ್ಯ ಮೂಗು ತೂರಿಸಿ ತಮ ನಡೆ, ನುಡಿಗಳಲ್ಲಿ ದಾಷ್ಟ್ಯತನ ಪ್ರದರ್ಶಿಸುವ ಸಚಿವ ಪ್ರಿಯಾಂಕ್ ಖರ್ಗೆ ಈ ಸಾವಿಗೆ ಹೊಣೆಗಾರರಾಗಿದ್ದಾರೆ ಎಂಬುದು ಆತಹತ್ಯೆಗೊಳಗಾದ ದುರ್ದೈವಿ ಗುತ್ತಿಗೆದಾರ ಸಚಿನ್ ಬರೆದಿರುವ ಪತ್ರದಲ್ಲಿ ಸ್ಪಷ್ಟವಾಗಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಕೂಡಲೇ ಸಚಿವ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆ ಪಡೆಯಲಿ ಎಂದು ಆಗ್ರಹಿಸಿದ್ದಾರೆ.

ಇನ್ನು ಇದೇ ವಿಚಾರವಾಗಿ ಮಾತನಾಡಿರುವ ಮಾಜಿ ಡಿಸಿಎಂ ಅಶ್ವತ್ಥ ನಾರಾಯಣ ಕಲ್ಯಾಣ ಕರ್ನಾಟಕದ ಭಾಲ್ಕಿಯ ಗುತ್ತಿಗೆದಾರ ಸಚಿನ್ ಅವರ ಸಾವಿನ ಕುರಿತು ನ್ಯಾಯಾಂಗ ತನಿಖೆ ಮಾಡಿಸಬೇಕು. ಸತ್ಯಾಸತ್ಯತೆ ಹೊರಬರಬೇಕಿದೆ. ಈ ವಿಷಯದಲ್ಲಿ ಪ್ರಿಯಾಂಕ್ ಖರ್ಗೆಯವರ ರಾಜೀನಾಮೆಯನ್ನು ಸಿದ್ದರಾಮಯ್ಯನವರು ತೆಗೆದುಕೊಳ್ಳಬೇಕು. ನ್ಯಾಯಾಂಗ ತನಿಖೆ, ಸಚಿವರ ರಾಜೀನಾಮೆ ಪಡೆಯದೆ ಇದ್ದರೆ ಬಿಜೆಪಿ ಇದರ ಬಗ್ಗೆ ಪ್ರಬಲ ಹೋರಾಟ ಮಾಡಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇನ್ನು ಪ್ರಿಯಾಂಕ್ ಖರ್ಗೆ ವಿಚಾರವಾಗಿ ಕಾಯುತ್ತಿದ್ದ ಬಿಜೆಪಿಗೆ ಇದೀಗ ಈ ಪ್ರಕರಣ ದೊಡ್ಡ ಅಸ್ತ್ರವಾಗಿದೆ. ಈ ನಿಟ್ಟಿನಲ್ಲಿ ಈಶ್ವರಪ್ಪ ಪ್ರಕರಣದ ಮಾದರಿಯಲ್ಲೇ ಹೋರಾಟ ರೂಪಿಸಲು ಸಿದ್ಧತೆ ನಡೆಯುತ್ತಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ಬಿಜೆಪಿ ಪ್ರತಿಭಟನೆ, ಪತ್ರಿಕಾಗೋಷ್ಠಿ ರದ್ದಾಗಿತ್ತು. ಆದರೆ ಶನಿವಾರದಿಂದ ಹೋರಾಟ ರೂಪಿಸಲು ಬಿಜೆಪಿ ಸಿದ್ಧತೆ ಮಾಡಿಕೊಳ್ಳುತ್ತಿದೆ.

RELATED ARTICLES

Latest News