Friday, November 22, 2024
Homeರಾಜ್ಯಕೃಷ್ಣಾ, ಕಾವೇರಿ ಜಲ ವಿವಾದಗಳಿಗೆ ಸಂಸತ್ತಿನಲ್ಲಿ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುತ್ತೇನೆ : ಬೊಮ್ಮಾಯಿ

ಕೃಷ್ಣಾ, ಕಾವೇರಿ ಜಲ ವಿವಾದಗಳಿಗೆ ಸಂಸತ್ತಿನಲ್ಲಿ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುತ್ತೇನೆ : ಬೊಮ್ಮಾಯಿ

ಬೆಂಗಳೂರು,ಜೂ.15- ಸಂಸತ್ತಿನಲ್ಲಿ ಕರ್ನಾಟಕದ ನೀರಾವರಿ ಯೋಜನೆಗಳಾದ ಕೃಷ್ಣಾ, ಕಾವೇರಿ ಅಂತರಾಜ್ಯ ಜಲ ವಿವಾದಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡುತ್ತೇನೆ. ಸಂಸತ್ತಿನಲ್ಲಿ ಪ್ರಮಾಣಿಕವಾಗಿ ಕನ್ನಡಿಗರ ಪರವಾಗಿ ಧ್ವನಿ ಎತ್ತುವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಸಂಸದರಾಗಿ ಆಯ್ಕೆಯಾದ ಮೇಲೆ ಶಿಗ್ಗಾವಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಸಂಸದನಾಗಿ ಆಯ್ಕೆಯಾಗಿ ದೆಹಲಿಗೆ ಹೋದರೂ, ಕರ್ನಾಟಕದ ರಾಜಕಾರಣದಲ್ಲಿ ನಾನು ಸಕ್ರಿಯನಾಗಿರುತ್ತೇನೆ. ನಮ ವರಿಷ್ಠರು ಅದೇ ಕಾರಣಕ್ಕೆ ಕೆಲವು ನಿರ್ಣಯ ತೆಗೆದುಕೊಂಡಿದ್ದಾರೆ ಎಂದು ಹೇಳಿದರು.

ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದ ಅನುದಾನ ಪಡೆಯುವ ಬಗ್ಗೆ ರಾಜ್ಯ ಸರ್ಕಾರ ನಿಯಮಾನುಸಾರ ಮನವಿ ಸಲ್ಲಿಸಬೇಕು. ಹಿಂದೆ ನಾವು ಎಐಬಿಪಿಯಲ್ಲಿ ಸುಮಾರು ಆರು ತಿಂಗಳು ದೆಹಲಿಯಲ್ಲಿ ನಮ ಅಧಿಕಾರಿಗಳನ್ನು ಇಟ್ಟು ಸುಮಾರು 3800 ಕೊಟಿ ರೂ. ತಂದಿದ್ದೆ. ಕೇಂದ್ರದ ಬಜೆಟ್‌ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಮೀಸಲಿಟ್ಟಿರುವ 5000 ಕೋಟಿ ರೂ ತರಲು ರಾಜ್ಯದ ಸಚಿವರು ಹಾಗೂ ಕೇಂದ್ರ ಸರ್ಕಾರದ ಸಚಿವರ ಜೊತೆ ಮಾತನಾಡಿ ಹಣ ತರಲು ಪ್ರಯತ್ನಿಸುತ್ತೇನೆ ಎಂದರು.

ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಲು ನಾವು ಎಲ್ಲ ರೀತಿಯ ಸಿದ್ದತೆ ಮಾಡಿಕೊಂಡಿದ್ದೇವು. ಇದುವರೆಗೂ ಕೇಂದ್ರ ಸರ್ಕಾರ ಯಾವುದೇ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಣೆ ಮಾಡಿಲ್ಲ. ಆದರೆ, ನಮ್ಮ ಒತ್ತಾಸೆಯ ಕಾರಣಕ್ಕೆ ಈ ಯೋಜನೆಗೆ ವಿಶೇಷವಾಗಿ 5000 ಕೋಟಿ ರೂ. ನೀಡುವ ಭರವಸೆ ನೀಡಿದ್ದರು ಎಂದು ತಿಳಿಸಿದರು.

ಹಾವೇರಿ ಲೋಕಸಭೆ ಕ್ಷೇತ್ರಕ್ಕೆ ಆಯ್ಕೆಯಾದ ಹಿನ್ನೆಲೆ ಇಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ. ಶಿಗ್ಗಾವಿ ಕ್ಷೇತ್ರದ ಜನತೆಗೆ ಕೃತಜ್ಞತೆ ಹೇಳುತ್ತೇನೆ. ಶಿಗ್ಗಾಂವಿ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದೇನೆ. ಇನ್ನಷ್ಟು ಅಭಿವೃದ್ಧಿಗೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರ ಜೊತೆ ಮಾತನಾಡಿದ್ದೇನೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಪ್ರತಿಪಕ್ಷದ ನಾಯಕ ಆರ್‌. ಅಶೋಕ್‌ ಹಾಜರಿದ್ದರು.

RELATED ARTICLES

Latest News